ತಿಳಿಗೇಡಿ ಯುವಕನ ಪ್ರಚೋದನಾತ್ಮಕ ಪೋಸ್ಟ್‌ನಿಂದ ಹುಬ್ಬಳ್ಳಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ, ಕಿಡಿಗೇಡಿಗಳ ಜತೆಗೆ ಕೆಲ ಅಮಾಯಕರನ್ನೂ ಪೊಲೀಸರು ಬಂಧಿಸಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ. ಉದ್ರಿಕ್ತ ಮತಿಗೇಡಿ ಯುವಕರು ಎಸಗಿದ ಕೃತ್ಯಕ್ಕೆ ಸಂಬಂಧವಿಲ್ಲದವರನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಕೆಲ ಕುಟುಂಬಗಳ ತಂದೆ-ತಾಯಂದಿರು ನನಗೆ ನಿರಂತರವಾಗಿ ಮೊಬೈಲ್ ಕರೆ ಮಾಡಿ ಕಣ್ಣೀರು ಹಾಕುತ್ತಿದ್ದಾರೆ. ಈ ಬಗ್ಗೆ ನಾನು ಈಗಾಗಲೇ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರ ಜತೆ ಮಾತನಾಡಿದ್ದೇನೆ. ಪೊಲೀಸ್ ಠಾಣೆ, ಆಸ್ಪತ್ರೆ, ದೇವಾಲಯದ ಮೇಲೆ ಕಲ್ಲು ಹೊಡೆದವರನ್ನು ಬಿಡಬೇಡಿ, ಅಮಾಯಕರಿಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾಡಿದ್ದೇನೆ ಎಂದಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಸ್ಕೂಟರ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ, ಸ್ಥಳದಲ್ಲೇ ಮಹಿಳೆ ಸಾವು


ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಹೆಚ್‌ಡಿಕೆ, ಸಿಸಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು, ಆ ದೃಶ್ಯಗಳಲ್ಲಿ ಇಲ್ಲದವರನ್ನು ಬಿಟ್ಟು ಕಳಿಸಲಾಗುವುದು ಎಂದು ಪೊಲೀಸ್ ಆಯುಕ್ತರು ನನಗೆ ಭರವಸೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಗಲಾಟೆಗೆ ಸಂಬಂಧವಿಲ್ಲದ ಮುಗ್ಧರಿಗೆ ತೊಂದರೆ ಆಗುವುದು ಬೇಡ ಎಂದು ಅಭಿಪ್ರಾಯಪಟ್ಟಿದ್ದಾರೆ.


 


'ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ?'


ಹುಬ್ಬಳ್ಳಿ ಸದಾ ಶಾಂತಿಯನ್ನು ಬಯಸುವ ನಗರ. ಸಾಹಿತ್ಯ, ಸಾಂಸ್ಕೃತಿಕ ಪರಂಪರೆಯುಳ್ಳ ತಾಣ. ಕೆಲ ವರ್ಷಗಳಿಂದ ಇಲ್ಲಿ ಎಲ್ಲ ಸಮುದಾಯದವರು ಸಹೋದರರಾಗಿ ಬಾಳಿ ಬದುಕುತ್ತಿದ್ದಾರೆ. ಬವಣೆಯಲ್ಲಿ ಬೇಯುತ್ತಿರುವ ಬದುಕನ್ನು ಕಟ್ಟಿಕೊಳ್ಳುವ ಬದಲು ಕೋಮುದಳ್ಳುರಿ ಹರಡುವುದು ಬೇಡ ಎಂದು ಹೇಳಿದ್ದಾರೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.