ತುಮಕೂರು: ತುಮಕೂರಿನ ಜಿಲ್ಲಾಸ್ಪತ್ರೆಗೆ ಭಾನುವಾರ ಭೇಟಿ ನೀಡಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(​HD Kumaraswamy) ಪಾವಗಡ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದರು.


COMMERCIAL BREAK
SCROLL TO CONTINUE READING

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಸಂಭವಿಸಿದ ಖಾಸಗಿ ಬಸ್ ದುರಂತ(Pavagada Bus Accident)ದಲ್ಲಿ ಗಾಯಗೊಂಡು ತುಮಕೂರು  ಜಿಲ್ಲಾಸ್ಪತ್ರೆ(Tumakuru Govt Hospital)ಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲ ಗಾಯಾಳುಗಳ ಆರೋಗ್ಯ ವಿಚಾರಿಸಿದೆ. ಅವರ ಸಂಕಟ ಕಂಡು ಮನಸ್ಸಿಗೆ ಬಹಳ ನೋವಾಯಿತು. ಅವರಿಗೆ ಸೂಕ್ತ ಚಿಕಿತ್ಸೆ ನೀಡಬೇಕೆಂದು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದು ಹೇಳಿದ್ದಾರೆ.


'ಸಿದ್ದರಾಮಯ್ಯ ಒಳ್ಳೆಯ ಸಿಎಂ ಆದ್ರೆ, ಹುಚ್ಚುಚ್ಚಾಗಿ ಮಾತಾಡೋದು ಬಿಡಬೇಕು'


‘ಗಾಯಾಳುಗಳೆಲ್ಲರೂ ಆ ದುರ್ಘಟನೆ(Bus Accident)ಯ ಆಘಾತದಿಂದ ಇನ್ನೂ ಹೊರಬಂದಿಲ್ಲ. ಅವರ ಕುಟುಂಬಗಳು ಕಷ್ಟದಲ್ಲಿವೆ, ಅವರೆಲ್ಲರೂ ಬಡವರಿದ್ದಾರೆ. ನೊಂದವರ ಕಷ್ಟಕ್ಕೆ ಮಿಡಿಯುವುದು ಮಾನವೀಯತೆ. ಶಕ್ತಿ ಇದ್ದವರು ಇವರ ಸಹಾಯಕ್ಕೆ ನಿಲ್ಲಬೇಕು. ರಾಜ್ಯ ಸರ್ಕಾರವು ಜೀವ ಕಳೆದುಕೊಂಡ ಕುಟುಂಬಗಳಿಗೆ ಹಾಗೂ ಗಾಯಗೊಂಡವರಿಗೆ ಸರ್ವ ರೀತಿಯಲ್ಲೂ ನೆರವಾಗಬೇಕು’ ಎಂದು ಮನವಿ ಮಾಡಿದ್ದಾರೆ.


State Government) ಎಲ್ಲ ಮುನ್ನೆಚ್ಚರಿಕೆಗಳನ್ನು ವಹಿಸಬೇಕು. ಸಾರ್ವಜನಿಕ ಬಸ್‌ ಸೌಲಭ್ಯವನ್ನು ಉತ್ತಮಪಡಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಕೆಎಸ್‌ಆರ್‌ಟಿಸಿ ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು’ ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್ ಯುವನಾಯಕ ಈಗ ಪೂರ್ಣಕಾಲಿಕ ನಿರುದ್ಯೋಗಿ: ರಾಹುಲ್ ಗಾಂಧಿ ಬಗ್ಗೆ ಬಿಜೆಪಿ ವ್ಯಂಗ್ಯ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.