`ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಧಿಕಾರವಿಲ್ಲದೆ ಹತಾಶರಾಗಿದ್ದಾರೆ`-ಸಿಎಂ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಧಿಕಾರವಿಲ್ಲದೆ ಹತಾಶರಾಗಿದ್ದಾರೆ. ಅವರ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ. ಅವರು ತಮ್ಮ ರಾಜಕೀಯ ಜೀವನದಲ್ಲಿ ಈವರೆಗೆ ಮಾಡಿರುವ ಯಾವುದೇ ಒಂದು ಆರೋಪವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿದ್ದಾರ? ಕತ್ತಲಲ್ಲಿ ನಿಂತು ಕಲ್ಲೆಸೆದು ಓಡಿಹೋಗುತ್ತಾರೆ. ಅವರನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾದ ಅಗತ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಧಿಕಾರವಿಲ್ಲದೆ ಹತಾಶರಾಗಿದ್ದಾರೆ. ಅವರ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ. ಅವರು ತಮ್ಮ ರಾಜಕೀಯ ಜೀವನದಲ್ಲಿ ಈವರೆಗೆ ಮಾಡಿರುವ ಯಾವುದೇ ಒಂದು ಆರೋಪವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿದ್ದಾರ? ಕತ್ತಲಲ್ಲಿ ನಿಂತು ಕಲ್ಲೆಸೆದು ಓಡಿಹೋಗುತ್ತಾರೆ. ಅವರನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾದ ಅಗತ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ- ಫ್ರೀ ರೇಶನ್ ಜೊತೆಗೆ ಈ ಸೌಲಭ್ಯ ಕೂಡಾ ಇನ್ನು ಸಂಪೂರ್ಣ ಉಚಿತ ! ಪಡಿತರ ಚೀಟಿದಾರರಿಗೆ ಜಾಕ್ ಪಾಟ್
ಆಡಳಿತ ವ್ಯವಸ್ಥೆಯಲ್ಲಿ ಅಧಿಕಾರಿಗಳ ವರ್ಗಾವಣೆ ಸಹಜ ಪ್ರಕ್ರಿಯೆ. ಹೊಸ ಸರ್ಕಾರ ಬಂದಾಗ ಆಡಳಿತದ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲೇಬೇಕಾಗುತ್ತದೆ. ಕಳೆದ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ವರ್ಗಾವಣೆಯಾಗಿರಲಿಲ್ಲ.ಈಗ ಆ ಸಾಮಾನ್ಯ ವರ್ಗಾವಣೆಗಳೂ ನಡೆಯುತ್ತಿದೆ.ಇದು ನಮ್ಮಿಂದ ಶುರುವಾದುದಲ್ಲ,ಹಿಂದಿನ ಸರ್ಕಾರದಲ್ಲಿಯೂ ನಡೆದಿದೆ, ಮುಂದೆಯೂ ನಡೆಯುತ್ತದೆ ಎಂದು ಹೇಳಿದರು.
ಇದನ್ನೂ ಓದಿ: ನಾಳೆ ಸಿಎಂ ಸಿದ್ದರಾಮಯ್ಯರಿಂದ ದಾಖಲೆಯ 14ನೇ ಬಜೆಟ್ ಮಂಡನೆ
ಕುಮಾರಸ್ವಾಮಿ ಅವರ ಕಲ್ಪನಾ ವಿಲಾಸ. ಇದೇ ವಾದವನ್ನು ಅವರಿಗೆ ಮತ್ತು ಅವರ ಕುಟುಂಬಕ್ಕೆ ಅನ್ವಯಿಸಬಹುದಾ? ಕುಮಾರಸ್ವಾಮಿಯವರ ಅಣ್ಣ ಸಚಿವರಾಗಿದ್ದರು, ಈಗ ಶಾಸಕ, ಇವರ ಪತ್ನಿ ಶಾಸಕಿಯಾಗಿದ್ದರು, ತಂದೆ ಪ್ರಧಾನಿಗಳಾಗಿದ್ದರು, ಅಣ್ಣನ ಮಗ ಸಂಸದ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅವರ ಕುಟುಂಬದ ಸದಸ್ಯರೆಲ್ಲೂ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ರಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=38l6m8543Vk
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.