ಈ ಬಾರಿ ದಸರಾ ಉದ್ಘಾಟನೆಗೆ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಆಯ್ಕೆ
ಅಕ್ಟೋಬರ್ 7 ರಿಂದ 14ರವರೆಗೆ ದಸರಾ ಹಬ್ಬದ ವೈಭವ ಇರಲಿದೆ. ಈ ಬಾರಿ ನಾಡ ಹಬ್ಬವನ್ನು ಉದ್ಘಾಟಿಸಲು ಮಾಜಿ ಮುಖ್ಯಮಂತ್ರಿಯಾದ ಎಸ್ ಎಂ ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ.
ನವದೆಹಲಿ : ಈ ಬಾರಿ ನಾಡ ದಸರಾವನ್ನು (Mysuru dasara) ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ( SM Krishna) ಉದ್ಘಾಟಿಸಲಿದ್ದಾರೆ. ಈ ವಿಚಾರವನ್ನು ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ತಿಳಿಸಿದ್ದಾರೆ. ಅಕ್ಟೋಬರ್ 7ರಿಂದ ದಸರಾ ಆರಂಭವಾಗಲಿದ್ದು, ನಾಡಹಬ್ಬದಸರಾ ಮಹೋತ್ಸವವನ್ನು ಉದ್ಘಾಟಿಸಲು ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ. ನಾಡ ಹಬ್ಬವನ್ನು ಉದ್ಘಾಟಿಸಲು ಕೃಷ್ಣ ಅವರಿಗೆ ಆಹ್ವಾನ ನೀಡಲು ರಾಜ್ಯಸರ್ಕಾರ ನಿರ್ಧರಿಸಿದೆ.
ಅಕ್ಟೋಬರ್ 7 ರಿಂದ 14ರವರೆಗೆ ದಸರಾ (Dasra festival) ಹಬ್ಬದ ವೈಭವ ಇರಲಿದೆ. ಈ ಬಾರಿ ನಾಡ ಹಬ್ಬವನ್ನು ಉದ್ಘಾಟಿಸಲು ಮಾಜಿ ಮುಖ್ಯಮಂತ್ರಿಯಾದ ಎಸ್ ಎಂ ಕೃಷ್ಣ ( SM Krishna) ಅವರನ್ನು ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಪರವಾಗಿ ಅವರಿಗೆ ಆಹ್ವಾನ ನೀಡಲು ನಿರ್ಧರಿಸಲಾಗಿದೆ. ದಸರಾ ಹಬ್ಬದ ಸಿದ್ಧತೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಇತಿಹಾಸವೇ ನಕಲಿ ಗಾಂಧಿಗಳ ಗುಲಾಮಗಿರಿಯದ್ದು: ಬಿಜೆಪಿ ಟೀಕೆ
ದಸರಾ (Mysuru dasara) ಹಿನ್ನೆಲೆಯಲ್ಲಿ ಪಾರಂಪರಿಕ ಕಾರ್ಯಕ್ರಮಗಳ ಪಟ್ಟಿಯನ್ನು ಈಗಾಗಲೇ ಸಿದ್ದಪಡಿಸಲಾಗಿದೆ. ಅಕ್ಟೋಬರ್ 7ರಂದುನಡೆಯುವ ಖಾಸಗಿ ದರ್ಬಾರ್ ನಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Odeyar) ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಅಕ್ಟೋಬರ್ 15ರಂದು ವಿಜಯದಶಮಿ ಮೆರವಣಿಗೆ ನಡೆಯಲಿದ್ದು, ಅಂದು ಅರಮನೆಯ ಮುಖ್ಯದ್ವಾರದಿಂದ ಭುವನೇಶ್ವರಿ ದೇವಸ್ಥಾನದವರೆಗೆ ಮೆರವಣಿಗೆ ಸಾಗಲಿದೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ಅಕ್ಟೋಬರ್ 11 ರವರೆಗೆ ರಾತ್ರಿ ಕರ್ಪ್ಯೂ ವಿಸ್ತರಣೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.