ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಸ್ಪತ್ರೆಗೆ ದಾಖಲಾಗಿದ್ದಾರೆ. 

Last Updated : Jul 26, 2018, 01:11 PM IST
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಸ್ಪತ್ರೆಗೆ ದಾಖಲು  title=

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ವಿಧಾನಸಭೆ ಚುನಾವಣೆ ಮತ್ತು ರಾಜ್ಯ ಪ್ರವಾಸದಿಂದ ದಣಿದಿರುವ ಅವರು ೫ ದಿನಗಳ ಕಾಲ ವಿಶ್ರಾಂತಿ ಪಡೆಯಲು ಬೆಂಗಳೂರಿನ ಹೊರವಲಯದಲ್ಲಿರುವ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯಕ್ಕೆ ಬುಧವಾರ ಸಂಜೆ ದಾಖಲಾಗಿದ್ದಾರೆ. 

ಪ್ರತಿ ವರ್ಷವೂ ಜಿಂದಾಲ್ ಆಸ್ಪತ್ರೆಗೆ ದಾಖಲಾಗಿ ಪ್ರಕೃತಿ ಚಿಕಿತ್ಸೆ ಪಡೆಯುವ ಬಿ.ಎಸ್.ಯಡಿಯೂರಪ್ಪ, ಈ ವರ್ಷವೂ ದಾಖಲಾಗಿದ್ದು ಜುಲೈ ೨೯ರ ವರೆಗೆ ವಿವಿಧ ಚಿಕಿತ್ಸೆಗಳನ್ನು ಪಡೆದುಕೊಳ್ಳಲಿದ್ದಾರೆ. 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ ಚುನಾವಣೆ ನಂತರ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯದಲ್ಲಿ ೧೦ ದಿನಗಳ ಕಾಲ ಚಿಕಿತ್ಸೆ ಪಡೆದಿದು, ವಿಶ್ರಾಂತಿ ತೆಗೆದುಕೊಂಡಿದ್ದರು. 
 

Trending News