Loksabha Elections: ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ: ಬಸವರಾಜ ಬೊಮ್ಮಾಯಿ
ಕೇಂದ್ರದಲ್ಲಿ ಅಧಿಕಾರಕ್ಕೆ ಬರದಿರುವ ಕಾಂಗ್ರೆಸ್ ಸುಳ್ಳು ಗ್ಯಾರೆಂಟಿ ಗಳ ಮೂಲಕ ಜನರಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿ: ಲೋಕಸಭಾ ಚುನಾವಣೆ (Lok Sabha Elections)ಯಲ್ಲಿ ಕೇವಲ 200 ಸ್ಥಾನಗಳಲ್ಲಿ ಸ್ಪರ್ಧೆ ಮಾಡುತ್ತಿರುವ ಕಾಂಗ್ರೆಸ್, 543 ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿದೆ. ಅತಿಯಾದ ವಿಶ್ವಾಸ ಹೊಂದಿರುವ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Former Chief Minister Basavaraja Bommai) ಹೇಳಿದರು.
ಈ ಕುರಿತಂತೆ ನಿನ್ನೆ (ಏಪ್ರಿಲ್ 09) ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Former Chief Minister Basavaraja Bommai) ಅವರು, ಅಧಿಕಾರಕ್ಕೆ ಬರುವುದಿಲ್ಲ ಎಂಬ ಸತ್ಯ ಕಾಂಗ್ರೆಸ್ ನಾಯಕರಿಗೆ ಗೊತ್ತಾಗಿದೆ. ಹೀಗಾಗಿ ಚುನಾವಣಾ ಪ್ರನಾಳಿಕೆ (Election Manifesto) ಯಲ್ಲಿ ಪೊಳ್ಳು ಆಶ್ವಾಸನೆಗಳನ್ನು ನೀಡಿದ್ದಾರೆ. ಇಂಡಿ ಒಕ್ಕೂಟದಲ್ಲೇ ಹಲವು ಗೊಂದಲಗಳಿವೆ. ಟಿಎಂಸಿ ಪ್ರನಾಳಿಕೆ, ಆಪ್ ಪ್ರನಾಳಿಕೆ ಹೀಗೆ ಅನೇಕ ಪ್ರನಾಳಿಕೆಗಳನ್ನು ಹೊಂದಿರುವ ಇಂಡಿ ಒಕ್ಕೂಟವನ್ನು ಜನ ನಂಬುವ ಸ್ಥಿತಿಯಲ್ಲಿಲ್ಲ ಎಂದು ವ್ಯಂಗ್ಯವಾಡಿದರು.
ಇದನ್ನೂ ಓದಿ- Bagalkote Lok Sabha Constituency: ಬಿಜೆಪಿ ಭದ್ರಕೋಟೆ ಛಿದ್ರ ಮಾಡಲು ʻಕೈʼ ನಾನಾ ಕಸರತ್ತು
ಯುಪಿಎ ಸರ್ಕಾರದ (UPA Govt.) ಅವಧಿಯಲ್ಲಿ 8-10 ತಿಂಗಳ ನಂತರ ಬರ ಪರಿಹಾರ (Drought relief) ನೀಡಿದ ಉದಾಹರಣೆಗಳಿವೆ. ನಾಡಿನ ರೈತರು, ಜನ ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ತಮ್ಮ ಬೊಕ್ಕಸದಿಂದ ಸಹಾಯ ಮಾಡುವ ಕೆಲಸ ರಾಜ್ಯ ಸರ್ಕಾರ ಆದ್ಯತೆಯ ಮೇರೆಗೆ ಮಾಡಬೇಕು. ತುರ್ತು ಪರಿಸ್ಥಿತಿ ಎದುರಾದಾಗ ಸಕಾಲಕ್ಕೆ ನೀರು, ಮೇವು ನೀಡಬೇಕು. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ತೀವೃ ಪ್ರವಾಹ ಪರಿಸ್ಥಿತಿ ಎದುರಾಗಿತ್ತು. ಆಗ ಕೇಂದ್ರ ಸರ್ಕಾರದ ಅನುದಾನಕ್ಕೆ ಕಾಯದೇ, ರಾಜ್ಯ ಸರ್ಕಾರದಿಂದಲೇ ತುರ್ತು ಪರಿಹಾರ ನೀಡಿದ್ದೆವು ಎಂದು ವಿವರಿಸಿದರು.
ಇದನ್ನೂ ಓದಿ- Bidar Lok Sabha Constituency: ಬಿಜೆಪಿಯ ಭಿನ್ನಮತ, ಗ್ಯಾರಂಟಿ ಯೋಜನೆಗಳ ಲಾಭ ಖಂಡ್ರೆಗೆ ವರ..?
ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಕಾಲದಲ್ಲಿ ಯಾರೂ ಲಾಬಿ ಮಾಡುವ ಪ್ರಮೇಯವೇ ಉದ್ಭವಿಸುವುದಿಲ್ಲ. ವ್ಯವಸ್ಥಿತವಾಗಿ ಎಲ್ಲರೂ ತಮ್ಮ ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ ಎಂದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.