ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸುಳ್ಳಿನ ಕಂತೆಯ ರಾಜಕೀಯ ಬಜೆಟ್ : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Basavaraja Bommai: ಬಜೆಟ್ ಮೇಲೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರವನ್ನು ವಿರೋಧಿಸಲು ಬಜೆಟನ್ನು ಬಳಸಿಕೊಂಡಿದ್ದಾರೆ. ಬಜೆಟ್ ನ ಪಾವಿತ್ರ್ಯತೆಯನ್ನು ಸಿದ್ದರಾಮಯ್ಯ ಹಾಳು ಮಾಡಿದ್ದಾರೆ. ಕೇಂದ್ರ ಸರ್ಕಾರದ ಅನುದಾನ‌ ಪಡೆಯಲು ಅನೇಕ ವೇದಿಕೆಗಳಿವೆ.

Written by - Prashobh Devanahalli | Edited by - Bhavishya Shetty | Last Updated : Feb 16, 2024, 02:01 PM IST
    • 15 ಬಾರಿ ಬಜೆಟ್ ಮಂಡಿಸಿ 1.5 ಲಕ್ಷ ಕೋಟಿ ಸಾಲ ಮಾಡಿರುವ ದಾಖಲೆ
    • ವೈಫಲ್ಯ ಮುಚ್ಚಿಕೊಳ್ಳಲು ಸುಳ್ಳಿನ ಕಂತೆಯ ರಾಜಕೀಯ ಬಜೆಟ್ ಮಂಡಿಸಿದ್ದಾರೆ
    • ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪ
ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸುಳ್ಳಿನ ಕಂತೆಯ ರಾಜಕೀಯ ಬಜೆಟ್ : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ title=
File Photo

ಬೆಂಗಳೂರು: 15 ಬಾರಿ ಬಜೆಟ್ ಮಂಡಿಸಿ 1.5 ಲಕ್ಷ ಕೋಟಿ ಸಾಲ ಮಾಡಿರುವ ದಾಖಲೆ ಸೃಷ್ಟಿಸಿರುವ ಸಿದ್ದರಾಮಯ್ಯ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸುಳ್ಳಿನ ಕಂತೆಯ ರಾಜಕೀಯ ಬಜೆಟ್ ಮಂಡಿಸಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಇಲ್ಲದ ಅಡ್ಡಕಸುಬಿ ಬಜೆಟ್: ಪ್ರತಿಪಕ್ಷ ನಾಯಕ ಆರ್ ಅಶೋಕ್

ಬಜೆಟ್ ಮೇಲೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರವನ್ನು ವಿರೋಧಿಸಲು ಬಜೆಟನ್ನು ಬಳಸಿಕೊಂಡಿದ್ದಾರೆ. ಬಜೆಟ್ ನ ಪಾವಿತ್ರ್ಯತೆಯನ್ನು ಸಿದ್ದರಾಮಯ್ಯ ಹಾಳು ಮಾಡಿದ್ದಾರೆ. ಕೇಂದ್ರ ಸರ್ಕಾರದ ಅನುದಾನ‌ ಪಡೆಯಲು ಅನೇಕ ವೇದಿಕೆಗಳಿವೆ. ಜಿಎಸ್ ಟಿ ಕೌನ್ಸಿಲ್ ಇದೆ. ನೀತಿ ಆಯೋಗ ಇದೆ. ಒಂದು ಬಾರಿಯೂ ನೀತಿ ಆಯೋಗದ ಸಭೆಗೆ ಹಾಜರಾಗದೇ ಆ ಸಂದರ್ಭದಲ್ಲಿ ಮಾತನಾಡದೇ ಬಜೆಟ್ ನಲ್ಲಿ ಕೇಂದ್ರ ಸರ್ಕಾರವನ್ನು ವಿರೋಧಿಸುತ್ತಿರುವುದು ರಾಜಕೀಯ ಕಾರಣಕ್ಕೆ. ರಾಜಕೀಯಕ್ಕಾಗಿ ಬಜೆಟ್ ಬಳಸಿಕೊಂಡಿರುವುದು ಖಂಡನೀಯ ಎಂದು ಹೇಳಿದರು.

ಕಳೆದ ವರ್ಷಕ್ಕಿಂತ ಸುಮಾರು 25 ಸಾವಿರ ಕೋಟಿ‌ ರೂ. ಸಾಲ ಮಾಡಿ ಅದರಲ್ಲಿ ಅಭಿವೃದ್ಧಿ ಗೆ ಕೇವಲ ಒಂದು ಸಾವಿರ‌ ಕೋಟಿ ಮಾತ್ರ ಬಳಕೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ. ಕಳೆದ ವರ್ಷ ಬಂಡವಾಳ ವೆಚ್ಚ 54 ಸಾವಿರ ಕೋಟಿ ಇತ್ತು ಈ ವರ್ಷ ಕೇವಲ 55 ಸಾವಿರ ಕೋಟಿಗೆ ಹೆಚ್ಚಳ ಮಾಡಿದ್ದಾರೆ.  ಅತಿ ಹೆಚ್ಚಿನ ದರದಲ್ಲಿ ಬಡ್ಡಿ ಸಾಲ ತಂದು ಅನುತ್ಪಾದಕ ವೆಚ್ಚಗಳಿಗೆ ಬಜೆಟ್ ಹಣ ವೆಚ್ಚ ಮಾಡುತ್ತಿದ್ದಾರೆ. ರಾಜ್ಯದ ಹಣಕಾಸು ಸ್ಥಿತಿ ಹದಗೆಟ್ಟಿರುವುದು ಈ ಬಜೆಟ್ ನಲ್ಲಿ ಸ್ಪಷ್ಟವಾಗಿದೆ ಎಂದು ವಾಗ್ದಾಳಿ ನಡೆಸಿದರು.

ತೆರಿಗೆ ಸಂಗ್ರಹದಲ್ಲಿಯೂ 14 ಸಾವಿರ ಕೋಟಿ ರೂ. ಕೊರತೆಯಾಗಿದೆ. ಅವರೇ ಹೇಳಿರುವಂತೆ 1.75 ಲಕ್ಷ ಕೋಟಿ ತೆರಿಗೆ ಸಂಗ್ರಹ ಮಾಡುವ ಗುರಿ ಇಟ್ಟುಕೊಂಡಿದ್ದರು. ಆದರೆ ಕೇವಲ 1.61 ಲಕ್ಷ ಕೋಟಿ ಮಾತ್ರ ತೆರಿಗೆ ಸಂಗ್ರಹವಾಗಿದೆ. ಹೀಗಾಗಿ 14 ಕೋಟಿ ರೂ. ತೆರಿಗೆ ಸಂಗ್ರಹ ಕಡಿಮೆಯಾಗಿದೆ. ಕೇಂದ್ರ ಸರ್ಕಾರದಿಂದ ಬರುವ ಅನುದಾನ ಸಂಪೂರ್ಣ ಬಂದಿದೆ. ಇವರ ತೆರಿಗೆ ಸಂಗ್ರಹದಲ್ಲಿ ಕೊರತೆಯಾಗಿದೆ.ಅದನ್ಮು ಮುಚ್ಚಿಡಲು ಸುಳ್ಳಿನ ಕಂತೆಯ ಬಜೆಟ್ ಮಂಡನೆ ಮಾಡಿದ್ದಾರೆ. ಎಸ್ಸಿಪಿ ಟಿಎಸ್ಬಿಗೆ ಹಣ ನೀಡಿಲ್ಲ, ಶಿಕ್ಷಣಕ್ಕೆಣ ನೀರಾವರಿಗೆ ಹಣ ಇಟ್ಟಿಲ್ಲ. ರಾಜ್ಯವನ್ನು ದಿವಾಳಿ ಮಾಡಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: Karnataka Budget 2024 Live Updates: ಸಿಎಂ ಸಿದ್ದರಾಮಯ್ಯರ ಬಜೆಟ್​ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು..?

ಚುನಾವಣೆಗೋಸ್ಕರ ಕೇಂದ್ರ ಸರ್ಕಾರದ ವಿರುದ್ದ ಆರೋಪ ಮಾಡುತ್ತಿದ್ದಾರೆ. ಕೃಷ್ಣಾ, ಭದ್ರಾ, ಮಹಾದಾಯಿ ಯೋಜನೆಗಳಿಗೆ ಯಾವುದೇ ಹಣ ನೀಡಿಲ್ಲ. ನೀರಾವರಿಗೆ ಸಂಪೂರ್ಣ ಅನ್ಯಾಯ ಮಾಡಿದ್ದಾರೆ. ಎಸ್ಸಿ ಎಸ್ಟಿಗಳಿಗೆ ಮೋಸದ ಬಜೆಟ್, ವಿದ್ಯಾರ್ಥಿಗಳಿಗೆ, ರೈತರಿಗೆ, ಮಹಿಳೆಯರಿಗೆ ಶೂನ್ಯ ಬಜೆಟ್ ಆಗಿದೆ. ರಾಜ್ಯದ ಇತಿಹಾಸದಲ್ಲಿ ಪ್ರತಿಪಕ್ಷ ಸಭಾತ್ಯಾಗ ಮಾಡುವ ಪರಿಸ್ಥಿತಿಗೆ ರಾಜ್ಯ ಸರ್ಕಾರ ಬಂದಿದೆ. ಸರ್ಕಾರದ ಈ ಜನವಿರೋಧಿ ನೀತಿಯನ್ನು ಜನರಿಗೆ ತಲುಪಿಸುತ್ತೇವೆ ಎಂದು ಹೇಳಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News