ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಸಾಧ್ಯತೆ : ಬಸವರಾಜ ಬೊಮ್ಮಾಯಿ
ರುದ್ರಪ್ಪ ಲಮಾಣಿ ಉಪ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ನಮಗೆ ಮುಜುಗರ ಇದೆ. ಚುನಾವಣೆಯ ಫಲಿತಾಂಶ ಬಂದ ಮೇಲೆ ಹಾವೇರಿ ಜಿಲ್ಲೆಯವರು ಇಬ್ಬರು ಮೂವರು ಹಿರಿಯ ಶಾಸಕರಿದ್ದೀರಿ, ನೀವು ಸಚಿವರಾಗಿ ಬರುತ್ತಿರಿ ಎಂದು ಭಾವಿಸಿದ್ದೇವು. ಅದು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ರುದ್ರಪ್ಪ ಲಮಾಣಿ ಉಪ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ನಮಗೆ ಮುಜುಗರ ಇದೆ. ಚುನಾವಣೆಯ ಫಲಿತಾಂಶ ಬಂದ ಮೇಲೆ ಹಾವೇರಿ ಜಿಲ್ಲೆಯವರು ಇಬ್ಬರು ಮೂವರು ಹಿರಿಯ ಶಾಸಕರಿದ್ದೀರಿ, ನೀವು ಸಚಿವರಾಗಿ ಬರುತ್ತಿರಿ ಎಂದು ಭಾವಿಸಿದ್ದೇವು. ಅದು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇದನ್ನೂ ಓದಿ- ನನ್ನ ಬಳಿ ಇರುವ ಪೆನ್ ಡ್ರೈವ್ ಅಸಲಿ, ಹೈದ್ರಾಬಾದ್ ನಲ್ಲಿ ಮಾಡಿಸಿದ್ದಲ್ಲ- ಮಾಜಿ ಸಿಎಂ ಎಚ್‌ಡಿಕೆ
ಈ ಹುದ್ದೆಯಲ್ಲಿ ಅಧಿಕಾರ ಕಡಿಮೆ ಗೌರವ ಜಾಸ್ತಿ, ನೀವು ಸರಳ ಸಜ್ಜನರಿದ್ದೀರಿ, ನಾನು ನಿಮ್ಮ ತಾಂಡಾಕ್ಕೆ, ಮನೆಗೆ ಬಂದಿದ್ದೇನೆ. ರಾಜಕಾರಣದಲ್ಲಿ ಯಾರು ಏನು ಬೇಕಾದರೂ ಆಗಬಹುದು. ರಾಜಕಾರಣದಲ್ಲಿ ಪವರ್ ಪೊಲಿಟಿಕ್ಸ್ ಇಸ್ ವೇಟಿಂಗ್ ಗೇಮ್ ಅಂತ ಈಗ ಅದು ಅವಕಾಶ ಬಂದಾಗ ಅದನ್ನು ಪಡೆದುಕೊಳ್ಳಬೇಕು. ಶಕ್ತಿ ಇದ್ದವರು ಅಧಿಕಾರ ಪಡೆದುಕೊಳ್ಳುವ ಕೆಲಸ ಮಾಡುತ್ತಾರೆ ಎಂದರು.
ಇದನ್ನೂ ಓದಿ- ಶೆಟ್ಟರ್ ನೇತೃತ್ವದಲ್ಲಿ ಆಪರೇಷನ್ ಹಸ್ತ: ಕಾಂಗ್ರೆಸ್ಸಿಗೆ ಬರ್ತಾರಾ ಮಾಜಿ ಶಾಸಕ ಚಿಕ್ಕನಗೌಡರ!
ಕೊಟ್ಟ ಕುದುರೆ ಏರದವನು ಶೂರನೂ ಅಲ್ಲ, ವೀರನೂ ಅಲ್ಲ ಎಂದು ಅಲ್ಲಮಪ್ರಭುಗಳು ಹೇಳಿದ್ದಾರೆ. ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕೊಟ್ಟ ಎಲ್ಲ ಕುದುರೆಗಳನ್ನು ಏರಿದ್ದಾರೆ. ಮುಂದಿನ ದಿನಗಳಲ್ಲಿ ಯಾವ ಕುದುರೆ ಏರುತ್ತಾರೊ ನೋಡೊಣ. ಬದಲಾವಣೆ ಜಗದ ನಿಯಮ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ ಇದೆ ಎಂದು ಮಾರ್ಮಿಕವಾಗಿ ನುಡಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=38l6m8543Vk
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.