ಪದವೀಧರ ಕ್ಷೇತ್ರದ ಚುನಾವಣೆ :'ಎಲ್ಲಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಗೆಲ್ಲುವ ವಿಶ್ವಾಸ ನನಗಿದೆ'

ಪದವೀಧರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಆ ಎಲ್ಲಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಗೆಲ್ಲುವ ವಿಶ್ವಾಸ ನನಗಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Written by - Zee Kannada News Desk | Last Updated : Jun 6, 2022, 05:56 PM IST
  • ಪದವೀಧರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಸ
  • ಆ ಎಲ್ಲಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಗೆಲ್ಲುವ ವಿಶ್ವಾಸ ನನಗಿದೆ
  • ವಿಶ್ವಾಸ ವ್ಯಕ್ತಪಡಿಸಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ
ಪದವೀಧರ ಕ್ಷೇತ್ರದ ಚುನಾವಣೆ :'ಎಲ್ಲಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಗೆಲ್ಲುವ ವಿಶ್ವಾಸ ನನಗಿದೆ' title=

ಬೆಂಗಳೂರು : ಪದವೀಧರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಆ ಎಲ್ಲಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಗೆಲ್ಲುವ ವಿಶ್ವಾಸ ನನಗಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಯಡಿಯೂರಪ್ಪ, ರಾಜಸಭೆಯಲ್ಲಿ ಮೂರು ಸ್ಥಾನ ನಾವು ಗೆದ್ದೇ ಗೆಲ್ಲುತ್ತೇವೆ. ಯಾವುದೇ ರೀತಿಯಲ್ಲಿ ನಾವು ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ. ಕಾಂಗ್ರೆಸ್ ನವರು ಹೇಳುವುದು, ಬೇರೆಯವರು ಹೇಳುವುದಕ್ಕೆ ಟೀಕೆ ಮಾಡಲು ಹೋಗುವುದಿಲ್ಲ. ಮೂರಕ್ಕೆ ಮೂರು ಸ್ಥಾನ ಗೆಲ್ಲುವುದು ಶತಸಿದ್ಧ.  ಅದರಲ್ಲಿ ಯಾವುದೇ ಅನುಮಾನ ಯಾರಿಗೂ ಇಲ್ಲ. ಲೆಹರ್ ಸಿಂಗ್ ಗೆ ದ್ವಿತೀಯ ಪ್ರಾಶಸ್ತ್ಯದ ಪೂರ್ಣ ಮತ, ಮೊದಲ ಪ್ರಾಶಸ್ತ್ಯದ ಹೆಚ್ಚುವರಿ ಮತ ಕೊಡಿಸಿದರೆ ಅದೇ ಸಾಕು ನಮಗೆ, ಬೇರೆ ಯಾವುದೇ ಮತ ಅಗತ್ಯವಿಲ್ಲ ಎಂದರು. 

ಇದನ್ನೂ ಓದಿ : ಬೆಂಗಳೂರಿಗೆ ರಾಷ್ಟ್ರಪತಿ ಆಗಮನ: ಯಾವಾಗ? ಕಾರಣ? ಇಲ್ಲಿದೆ ನೋಡಿ

ಆತ್ಮ ಸಾಕ್ಷಿಯ ಮತಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ಕೊಡಲು ಹೋಗಲ್ಲ. ಕಾಂಗ್ರೆಸ್- ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಲ್ಲಿ, ಬಿಜೆಪಿಗೆ ಸಮಸ್ಯೆಯಾಗುವ ವಿಚಾರವಾಗಿ ಪ್ರಕ್ರಿಯಿಸಿದ ಅವರು, ಅನಗತ್ಯವಾಗಿ ನಾನ್ಯಾಕೆ ಅದರ ಬಗ್ಗೆ ಮಾತಾಡಲಿ? ಎಂದು ಪ್ರಶ್ನಿಸಿದರು. 

ಯಡಿಯೂರಪ್ಪ ಅವರು, ಆರ್ ಎಸ್ ಎಸ್ ಚಡ್ಡಿ ಸುಡುವ ಕಾಂಗ್ರೆಸ್ ಅಭಿಯಾನದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಹಾಗೆ ಹೋದರು. 

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News