H.D.Kumaraswamy: `ಸಿಎಂ ಬಿಎಸ್ ವೈಗೆ ಅಭಿನಂದನೆಗಳು ಹೇಳಿದ ಮಾಜಿ ಸಿಎಂ`
ನಾನು ಸಿಎಂ ಆಗಿದ್ದಾಗ ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್ ರಚಿಸಿ ಹಣ ನೀಡಿದ್ದೆ, ಈ ಯೋಜನೆಗೆ ಇಂದು ಸಿಎಂ ಯಡಿಯೂರಪ್ಪ ಅವರು ಮರುಚಾಲನೆ ನೀಡಿದ್ದು, ಅದಕ್ಕಾಗಿ ಅವರಿಗೆ ಅಭಿನಂದನೆಗಳು
ಬೆಂಗಳೂರು: ನಾನು ಸಿಎಂ ಆಗಿದ್ದಾಗ ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್ ರಚಿಸಿ ಹಣ ನೀಡಿದ್ದೆ, ಈ ಯೋಜನೆಗೆ ಇಂದು ಸಿಎಂ ಯಡಿಯೂರಪ್ಪ ಅವರು ಮರುಚಾಲನೆ ನೀಡಿದ್ದು, ಅದಕ್ಕಾಗಿ ಅವರಿಗೆ ಅಭಿನಂದನೆಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಚೀನಾ ಹಿಡಿತದಲ್ಲಿರುವ ಜಾಗತಿಕ ಉತ್ಪಾದನೆ ಮಾರುಕಟ್ಟೆಯಲ್ಲಿ ಭಾರತವೂ ಪಾಲು ಪಡೆಯಬೇಕೆಂಬ ಉದ್ದೇಶದಿಂದ ನಾನು ಸಿಎಂ ಆಗಿದ್ದಾಗ 'ಕಾಂಪೀಟ್ ವಿತ್ ಚೀನಾ' ರೂಪಿಸಲಾಗಿತ್ತು. ಇದಕ್ಕಾಗಿ ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್ ರಚಿಸಿ, 500 ಕೋಟಿ ರೂ. ಹಣ ನೀಡಲಾಗಿತ್ತು. ಸಿಎಂ ಯಡಿಯೂರಪ್ಪ(B.S.Yediyurappa) ಅವರು ಆ ಕ್ಲಸ್ಟರ್‌ಗೆ ಇಂದು ಮರು ಚಾಲನೆ ನೀಡುತ್ತಿದ್ದಾರೆ ಎಂದಿದ್ದಾರೆ.
S.Suresh Kumar: '10 ಸಾವಿರ ಶಿಕ್ಷಕರ' ನೇಮಕಕ್ಕೆ ಶಿಕ್ಷಣ ಇಲಾಖೆ ಪ್ರಸ್ತಾವ..!
ನನ್ನ ಸರ್ಕಾರದ ಅವಧಿಯಲ್ಲಿ ಇಂಥ ಹಲವು ಕಾರ್ಯಕ್ರಮಗಳನ್ನು ಕೊಡಲಾಗಿದೆ. ಅವುಗಳಲ್ಲಿ ಈ ನೆಲದ ಸ್ವಾಭಿಮಾನ ಸಾರುವ ಯೋಜನೆಗಳೂ ಇವೆ ಎಂಬುದು ಗಮನಾರ್ಹ. ಅವುಗಳನ್ನು ಮರಳಿ ಜಾರಿಗೆ ತರುವುದರ ಕಡೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಿಂತನೆ ನಡೆಸುವುದು ಅತ್ಯಗತ್ಯ ನನ್ನ ಯೋಜನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ, ಆದಾಯ ಸಿಗುವ ಅಂಶಗಳು ಪ್ರಧಾನ ಎಂದು ಎಚ್ ಡಿಕೆ ಸಲಹೆ ನೀಡಿದ್ದಾರೆ.
ಮತ್ತೆರಡು ದಿನ ರಾಜ್ಯದಲ್ಲಿ ಭಾರೀ ಮಳೆ, ಹಲವೆಡೆ Yellow Alert
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ