ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಗಾಗಿ ಬಿಜೆಪಿ ‘ಗ್ರಾಮ ಸ್ವರಾಜ್ಯ’ ಸಮಾವೇಶಗಳನ್ನು ನಡೆಸುತ್ತಿದೆ. ಗಾಂಧೀಜಿ ಪರಿಕಲ್ಪನೆಗೆ ಬಿಜೆಪಿ ಮನ್ನಣೆ ಕೊಟ್ಟಿದ್ದು ಸಂತೋಷದಾಯಕ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ(H D Kumaraswamy), ಸಂಘಟನೆ ಉದ್ದೇಶದ ಈ ಸಮಾವೇಶಗಳು ಗ್ರಾಮಗಳನ್ನು ವಿಶ್ವಾಸಕ್ಕೆ ಪಡೆಯುಲು, ಸಮಸ್ಯೆಗಳನ್ನು ಪರಿಹರಿಸಲು ಬಳಕೆಯಾಗಲಿ. ಈ ಮೂಲಕ ಗ್ರಾಮ ಸ್ವರಾಜ್ಯದ ನಿಜ ಉದ್ದೇಶ ಸಾಕಾರವಾಗಲಿ ಎಂದಿದ್ದಾರೆ.


'2023ಕ್ಕೆ ಹೆಚ್‌.ಡಿ.ಕುಮಾರಸ್ವಾಮಿ ರಾಜ್ಯದ ಸಿಎಂ ಆಗುವುದು ಖಚಿತ'


 


ಬಿಜೆಪಿಯ ಗ್ರಾಮ ಸ್ವರಾಜ್ಯ ಎಂಬುದು ಸಂಘಟನೆ ಉದ್ದೇಶದ ಸಮಾವೇಶವಾದರೂ, ಅವುಗಳನ್ನು ಹಳ್ಳಿಗಳ ಹಂತಕ್ಕೆ ಕೊಂಡೊಯ್ಯಬೇಕು ಎಂದು ನಾನು ಒತ್ತಾಯಿಸುತ್ತೇನೆ. ಆ ಮೂಲಕವಾದರೂ ನಮ್ಮ ಹಳ್ಳಿಗಳ ಜ್ವಲಂತ ಸಮಸ್ಯೆಗಳು ಬಿಜೆಪಿ ಸಚಿವರು, ಶಾಸಕರು ಮತ್ತು ಸರ್ಕಾರದ ಅರಿವಿಗೆ ಬರಲಿ. ಹಾಗಾದರೂ ಹಳ್ಳಿ ಜನರ ಸಮಸ್ಯೆಗಳು ಶಾಶ್ವತವಾಗಿ ನೀಗಲಿ ಎಂದು ಆಶಿಸುತ್ತೇನೆ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.


ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ವಿಕಸನ ತರಬೇತಿಗೆ ಅರ್ಜಿ ಆಹ್ವಾನ