ಬೆಂಗಳೂರು: ಕೊರೋನಾ ಸಂಕಷ್ಟ ಕಾಲದಲ್ಲಿ ವೇತನವಿಲ್ಲದೆ ಕಂಗೆಟ್ಟಿರುವ ರಾಜ್ಯದ ಸುಮಾರು ಎರಡೂವರೆ ಲಕ್ಷ ಖಾಸಗಿ ಶಾಲಾ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ತಕ್ಷಣವೇ ಮುಂದಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
 
ಈ ಬಗ್ಗೆ ಸರಣಿ‌ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ರಾಜ್ಯದಾದ್ಯಂತ 20 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲೆಗಳ (Private Schools) ಶಿಕ್ಷಕರಿಗೆ ಕಳೆದ ಏಪ್ರಿಲ್ ನಿಂದ ವೇತನ ಸಿಗದೇ ದೈನಂದಿನ ಜೀವನ ಸಾಗಿಸಲು ಪರದಾಡುತ್ತಿದ್ದಾರೆ. ಅತಿಥಿ ಉಪನ್ಯಾಸಕರ ನೋವು ಇದಕ್ಕಿಂತ ಭಿನ್ನವಾಗಿಲ್ಲ. ಸರ್ಕಾರ ಈ ಬಗ್ಗೆ ಖಾಸಗಿ ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಅತಂತ್ರಕ್ಕೆ ಸಿಲುಕಿರುವ ಶಿಕ್ಷಕರ ನೆರವಿಗೆ ತಕ್ಷಣ ಧಾವಿಸಬೇಕು ಎಂದು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದು ಅಗ್ನಿ ಪರೀಕ್ಷೆ, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸಮರ್ಥವಾಗಿ ಸಜ್ಜಾಗಿ: ಎಚ್.ಡಿ. ಕುಮಾರಸ್ವಾಮಿ


ಕೆಲ ಖಾಸಗಿ ಶಾಲೆಗಳಲ್ಲಿ ಶೇಕಡ ಐವತ್ತಕ್ಕಿಂತಲೂ ಕಡಿಮೆ ವೇತನ ನೀಡುತ್ತಿದ್ದರೂ ಸಕಾಲಕ್ಕೆ ಪಾವತಿಸುತ್ತಿಲ್ಲ. ಬೇರೆ ಉದ್ಯೋಗ ಗೊತ್ತಿಲ್ಲದ ಲಕ್ಷಾಂತರ ಖಾಸಗಿ ಶಿಕ್ಷಕ ಸಮುದಾಯ ಮನೆ ಬಾಡಿಗೆ ಕಟ್ಟಲೂ ಆಗದೆ ಭವಿಷ್ಯದ ಬಗ್ಗೆ ಚಿಂತಾಕ್ರಾಂತರಾಗಿದ್ದಾರೆ. ಇಂತಹ ಶಿಕ್ಷಕರಿಗೆ ಸರ್ಕಾರ ವಿಶೇಷ ಆರ್ಥಿಕ ನೆರವು ಮತ್ತು ಸಾಲ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.


ವಿದ್ಯಾರ್ಥಿಗಳು ಶುಲ್ಕ ಕಟ್ಟುತ್ತಿಲ್ಲ ಎಂಬ ಕಾರಣ ಹೇಳಿ  ಶಿಕ್ಷಕರನ್ನು ಕೆಲಸದಿಂದ ತೆಗೆಯಲು ಆಡಳಿತ ಮಂಡಳಿಗಳು ಮುಂದಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ತಡಮಾಡದೆ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.