#COVID19 ಸೋಂಕಿತರ ಮನೆಗಳ ಎದುರಿನ ಎಚ್ಚರಿಕೆ ಫಲಕ ನವಯುಗದ ಸಾಮಾಜಿಕ ತಾರಮ್ಯ

ಮನೆಗಳ ಎದುರು ಫಲಕ ಹಾಕಿ ಅಸ್ಪೃಶ್ಯತೆ ಸೃಷ್ಟಿಸುವ ಬದಲು ಆರೋಗ್ಯ ಕಾರ್ಯಕರ್ತರನ್ನು ಅವರ ಮನೆಗೆ ಕಳುಹಿಸಿ ಧೈರ್ಯ, ಜಾಗೃತಿ, ಅರಿವು ಮೂಡಿಸಬೇಕು‌. 

Last Updated : Jul 19, 2020, 02:04 PM IST
#COVID19 ಸೋಂಕಿತರ ಮನೆಗಳ ಎದುರಿನ ಎಚ್ಚರಿಕೆ ಫಲಕ ನವಯುಗದ ಸಾಮಾಜಿಕ ತಾರಮ್ಯ title=

ಬೆಂಗಳೂರು: ದಿನದಿಂದ ದಿನಕ್ಕೆ ಕರೋನಾವೈರಸ್  ಕೋವಿಡ್-19  (COVID-19) ಪ್ರಕರಣಗಳ ಸಂಖ್ಯೆ ತೀವ್ರವಾಗಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕರೋನಾ ನಿಯಂತ್ರಣಕ್ಕಾಗಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿವೆ. ಏತನ್ಮಧ್ಯೆ   ಕರೋನಾವೈರಸ್ (Coronavirus) #COVID19 ಸೋಂಕಿತರ ಮನೆಗಳ ಎದುರು ಸ್ಥಳೀಯ ಆಡಳಿತ ಹಾಕುತ್ತಿರುವ ಎಚ್ಚರಿಕೆ ಫಲಕ ನವಯುಗದ ಸಾಮಾಜಿಕ ತಾರಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತಿದೆ. ಕುಟುಂಬಗಳನ್ನು ಸಮಾಜ ತಿರಸ್ಕಾರದಿಂದ ನೋಡುವಂತೆ ಮಾಡುತ್ತಿದೆ. ಸೋಂಕಿನ ನಂತರವೂ ವ್ಯಕ್ತಿ, ಕುಟುಂಬ ಗೌರವಯುತವಾಗಿ ಬದುಕಬೇಕು. ಹಾಗಾಗಿ ಫಲಕ ಹಾಕುವ ಪರಿಪಾಠವನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಸರಣಿ ಟ್ವೀಟ್ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಮನೆಗಳ ಎದುರು ಫಲಕ ಹಾಕಿ ಅಸ್ಪೃಶ್ಯತೆ ಸೃಷ್ಟಿಸುವ ಬದಲು ಆರೋಗ್ಯ ಕಾರ್ಯಕರ್ತರನ್ನು ಅವರ ಮನೆಗೆ ಕಳುಹಿಸಿ ಧೈರ್ಯ, ಜಾಗೃತಿ, ಅರಿವು ಮೂಡಿಸಬೇಕು‌. ಮನೆಯಿಂದ ಹೊರಬಾರದಂತೆ ಅವರ ಜವಾಬ್ದಾರಿ ತಿಳಿಸಿಕೊಡಬೇಕು. ಅದು ಬಿಟ್ಟು ಇಂಥ ಅಪಮಾನಿಸುವ ಪರಿಪಾಠ ಬೇಡ. ಈ ನಿಟ್ಟಿನಲ್ಲಿ @CMofKarnataka @BSYBJP ಗಮನ ಹರಿಸಲಿ ಎಂದು ಆಗ್ರಹಿಸುತ್ತೇನೆ‌ ಎಂದವರು ಇನ್ನೊಂದು ಟ್ವೀಟ್ ಮಾಡಿದ್ದಾರೆ.

ಚಿಕಿತ್ಸೆ ನಿರಾಕರಿಸುವುದು ಯಾವುದೇ ಆಸ್ಪತ್ರೆಯ ತಪ್ಪು. ಆದರೆ ಅದೇ ಕಾರಣಕ್ಕೆ ಸರ್ಕಾರ ಮೆಡಿಕಲ್ ಕಾಲೇಜುಗಳ ಲೈಸನ್ಸ್ ರದ್ದು ಮಾಡುವ ಬೆದರಿಕೆ ಹಾಕುವುದು ಸರಿಯಲ್ಲ. ಆರೋಗ್ಯದ ಈ ತುರ್ತುಪರಿಸ್ಥಿತಿಯಲ್ಲಿ ಅದರಿಂದ ಲಾಭವೂ ಇಲ್ಲ. ಅಷ್ಟಕ್ಕೂ ಮೆಡಿಕಲ್ ಕಾಲೇಜುಗಳ ಲೈಸನ್ಸ್ ರದ್ದು ಮಾಡುವ ಅಧಿಕಾರ ಇರುವುದು MCIಗೆ. ಸರ್ಕಾರಕ್ಕಲ್ಲ ನೆನಪಿರಲಿ ಎಂದು ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಹರಿಹೈದಿದ್ದಾರೆ.

ಈ ಪರಿಸ್ಥಿಯಲ್ಲಿ ಮೆಡಿಕಲ್ ಕಾಲೇಜುಗಳ ಮೇಲೆ ರೋಷಾವೇಶ ತೋರುವುದನ್ನು ಬಿಟ್ಟು ಅವರನ್ನು ವಿಶ್ವಾಸಕ್ಕೆ ಪಡೆದುಕೊಂಡು ಅವರ ಸೇವೆ ಪಡೆಯುವತ್ತ ಸರ್ಕಾರ ಗಮನಹರಿಸಲಿ‌. ಅವರ ಅಗತ್ಯಗಳನ್ನು ಪೂರೈಸುವತ್ತ ಗಮನ ಹರಿಸಲಿ. ಈ ಮೂಲಕ ಕೊರೊನಾವೈರಸ್ ವಿರುದ್ಧ ಸಾಂಘಿಕ ಹೋರಾಟ ನಡೆಸಲಿ ಎಂದು ಮಾಜಿ ಸಿಎಂ ಒತ್ತಾಯಿಸಿದ್ದಾರೆ.

Trending News