ಲೋಕದ ಡೊಂಕ ನೀವೇಕೆ ತಿದ್ದುವಿರಿ.. ಎಂದು ವಚನ ಹೇಳಿದ್ದ ಡಿಕೆಶಿಗೆ ವಚನದ ಮೂಲಕವೇ ತಿರುಗೇಟು ಕೊಟ್ಟ ಮಾಜಿ ಸಿಎಂ

ಡಿಸಿಎಂ ಅವರು ಹೇಳಿದ್ದಾರೆ. ಇದು ಮಾಟ ಮಂತ್ರ ಎಂದು ಕಥೆ ಕಟ್ಟಿದ್ದಾರೆ. ಅವರ ಅಷ್ಟೂ ಹೇಳಿಕೆಯನ್ನು ಗಮನಿಸಿದ್ದೇನೆ. ಒಂದು ಮಾತನ್ನು ಹೇಳಲು ಬಯಸುತ್ತೇನೆ. 'ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು.' ಎಂದು. ದಾಸಶ್ರೇಷ್ಠ ಪುರಂದರದಾಸರು ರಚಿಸಿರುವ ಪದವಿದು. ಅವರು ಹೇಳಿಕೆ ಕೊಡುವ ಮುನ್ನ ತಾವು ಅಲಂಕರಿಸಿರುವ ಹುದ್ದೆಯ ಘನತೆ ಅರಿಯಬೇಕಿತ್ತು. ಅವರಿಗೆ ಆ ಸ್ಥಾನದ ಮೌಲ್ಯ ಇನ್ನೂ ಅರ್ಥವಾಗಿಲ್ಲ ಎಂದು ಅವರು ಟೀಕಿಸಿದರು.

Written by - Yashaswini V | Last Updated : Jun 3, 2024, 04:38 PM IST
  • ಲೋಕದ ಡೊಂಕ ನೀವೇಕೆ ತಿದ್ದುವಿರಿ..' ಎಂದು ಈ ಹಿಂದೆ ಡಿಕೆಶಿ ಹೇಳಿದ್ದ ವಚನವನ್ನು ಉಲ್ಲೇಖಿಸಿ ಟಾಂಗ್ ಕೊಟ್ಟ ಕುಮಾರಸ್ವಾಮಿ
  • ನಾನು ಅವರ ಮಾತನ್ನು ಅವರಿಗೇ ಹೇಳಲು ಬಯಸುತ್ತೇನೆ.
  • ಮೊದಲು ನಿಮ್ಮ ಮನಸ್ಸು ಶುದ್ಧ ಮಾಡಿಕೊಳ್ಳಿ. ಅದೆಂತದೋ ಶತ್ರು ಭೈರವಿ ಯಾಗವಂತೆ. ಅವರಿಗೆ ಭಕ್ತಿ ಇದೆಯಂತೆ. ಪವಿತ್ರ ಪುಣ್ಯಕ್ಷೇತ್ರ ಶ್ರೀ ರಾಜರಾಜೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಅವರೂ ಹೋಗಿದ್ದಾರೆ... ಎಂದ ಎಚ್‌ಡಿ ಕುಮಾರಸ್ವಾಮಿ
ಲೋಕದ ಡೊಂಕ ನೀವೇಕೆ ತಿದ್ದುವಿರಿ.. ಎಂದು ವಚನ ಹೇಳಿದ್ದ ಡಿಕೆಶಿಗೆ ವಚನದ ಮೂಲಕವೇ ತಿರುಗೇಟು ಕೊಟ್ಟ ಮಾಜಿ ಸಿಎಂ title=

ಬೆಂಗಳೂರು: ಕೇರಳದಲ್ಲಿ ಕೇರಳ ಕುರಿ, ಕೋಳಿ, ಮೇಕೆ, ಎಮ್ಮೆ ಬಲಿಯ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಇನ್ನೊಂದು ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು.

ವಿಧಾನಸೌಧದಲ್ಲಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ  ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (Former Chief Minister HD Kumaraswamy) ಅವರು; ಇವರು ಪ್ರತಿಯೊಂದಕ್ಕೂ ಎಸ್‌ಐ‌ಟಿ ರಚನೆ ಮಾಡಿ ತನಿಖೆ ಮಾಡಿಸುತ್ತಾರೆ, ಅಲ್ಲವೇ? ಬಲಿ ವಿಷಯಕ್ಕೂ ತನಿಖೆ ಮಾಡಿಸಲಿ ಎಂದು ಸವಾಲು ಹಾಕಿದರು.

ಇದು ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ನೀಡಿರುವ  ಹೇಳಿಕೆ ಅಲ್ಲವೇ? ನಾನು ಮಾಧ್ಯಮಗಳ ಮೂಲಕವೇ ಗಮನಿಸಿದೆ. ಸಿಎಂ ಮತ್ತು ನನ್ನ ವಿರುದ್ಧ ಮಾಡಿಸುತ್ತಿರುವ ಶತ್ರು ಭೈರವಿ ಯಾಗ ಎಂದು ಹೇಳಿದ್ದಾರೆ. ಸಿಎಂ, ಡಿಸಿಎಂ ವಿರುದ್ಧ ವಾಮಾಚಾರ ಎಂದರೆ ಸಾಮಾನ್ಯವೇ? ಹಾಗಾಗಿ ಅದರ ತನಿಖೆಗೂ ಒಂದು ಎಸ್ಐಟಿ ರಚನೆ ಮಾಡಲಿ ಎಂದು ಅವರು ಹೇಳಿದರು.

ಇದನ್ನೂ ಓದಿ- ಸಚಿವ ನಾಗೇಂದ್ರ ರಾಜಿನಾಮೆ ಕೇಳಿಲ್ಲ:ಮುಖ್ಯಮಂತ್ರಿ ಸಿದ್ದರಾಮಯ್ಯ

ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು!
ಡಿಸಿಎಂ ಅವರು ಹೇಳಿದ್ದಾರೆ. ಇದು ಮಾಟ ಮಂತ್ರ ಎಂದು ಕಥೆ ಕಟ್ಟಿದ್ದಾರೆ. ಅವರ ಅಷ್ಟೂ ಹೇಳಿಕೆಯನ್ನು ಗಮನಿಸಿದ್ದೇನೆ. ಒಂದು ಮಾತನ್ನು ಹೇಳಲು ಬಯಸುತ್ತೇನೆ. 'ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು.' ಎಂದು. ದಾಸಶ್ರೇಷ್ಠ ಪುರಂದರದಾಸರು ರಚಿಸಿರುವ ಪದವಿದು. ಅವರು ಹೇಳಿಕೆ ಕೊಡುವ ಮುನ್ನ ತಾವು ಅಲಂಕರಿಸಿರುವ ಹುದ್ದೆಯ ಘನತೆ ಅರಿಯಬೇಕಿತ್ತು. ಅವರಿಗೆ ಆ ಸ್ಥಾನದ ಮೌಲ್ಯ ಇನ್ನೂ ಅರ್ಥವಾಗಿಲ್ಲ ಎಂದು ಅವರು ಟೀಕಿಸಿದರು.

ರಾಜರಾಜೇಶ್ವರಿ ಅಮ್ಮನವರಿಗೆ ಅಪಪ್ರಚಾರ: 
'ಲೋಕದ ಡೊಂಕ ನೀವೇಕೆ ತಿದ್ದುವಿರಿ..' ಎಂದು ಈ ಹಿಂದೆ ಡಿಕೆಶಿ ಹೇಳಿದ್ದ ವಚನವನ್ನು ಉಲ್ಲೇಖಿಸಿ ಟಾಂಗ್ ಕೊಟ್ಟ ಕುಮಾರಸ್ವಾಮಿ ಅವರು; ನಾನು ಅವರ ಮಾತನ್ನು ಅವರಿಗೇ ಹೇಳಲು ಬಯಸುತ್ತೇನೆ. ಮೊದಲು ನಿಮ್ಮ ಮನಸ್ಸು ಶುದ್ಧ ಮಾಡಿಕೊಳ್ಳಿ. ಅದೆಂತದೋ ಶತ್ರು ಭೈರವಿ ಯಾಗವಂತೆ. ಅವರಿಗೆ ಭಕ್ತಿ ಇದೆಯಂತೆ. ಪವಿತ್ರ ಪುಣ್ಯಕ್ಷೇತ್ರ ಶ್ರೀ ರಾಜರಾಜೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಅವರೂ ಹೋಗಿದ್ದಾರೆ. ಅವರಿಗೆ ಈ ಯಾಗದ ಬಗ್ಗೆ ಪೂರ್ಣ ಮಾಹಿತಿ ಇರಬೇಕು. ಅಲ್ಲಿ ಯಾವ ರೀತಿಯ ಪೂಜೆ ನಡೆಯುತ್ತದೆ? ಆ ಕ್ಷೇತ್ರ ಮಹಿಮೆ ಏನು ಎನ್ನುವುದು ಅವರಿಗೆ ತಿಳಿದಿರುತ್ತದೆ ಅಲ್ಲವೇ? ಹಾಗಿದ್ದರೂ ಅವರು ಸುಳ್ಳು ಹೇಳಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ಅಪಪ್ರಚಾರ ಎಸಗಿದ್ದಾರೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಕುಟುಂಬದ ಕೋಣ, ಮೇಕೆ ಕಡಿಯಲ್ಲ:
ಅವರು ನಮ್ಮ ಕುಟುಂಬದ ಮೇಲೆ ಏನೆಲ್ಲಾ  ಚಿತಾವಣೆ ನಡೆಸುತ್ತಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ನಮ್ಮ ಕುಟುಂಬದಲ್ಲಿ ಕುರಿ, ಮೇಕೆ, ಎಮ್ಮೆ, ಕೋಣ ಕಡಿಯೋದು ಯಾವತ್ತೂ ನಡೆದಿಲ್ಲ. ಅಂತಹ ಸಂಪ್ರದಾಯ ನಮ್ಮ ಕುಟುಂಬದಲ್ಲಿ ಇಲ್ಲ. ಪ್ರತಿ ತಿಂಗಳು ನಾನು ಜೆಪಿ ನಗರದಲ್ಲಿರುವ ಶ್ರೀ ತಿರುಮಲಗಿರಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸುತ್ತೇನೆ. ನಮ್ಮ ತಂದೆಯವರು ಪೂಜೆ ಮಾಡಿಸುತ್ತಾರೆ. ನಮ್ಮಿಬ್ಬರ ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ಪೂಜೆ ಮಾಡಿ ದೈವಕ್ಕೆ ಪ್ರಾರ್ಥನೆ ಸಲ್ಲಿಸುತ್ತೇವೆ. ಇನ್ನೊಬ್ಬರಿಗೆ ಕೇಡು ಬಯಿಸಲು ಪೂಜೆ ಮಾಡಿಲ್ಲ, ಮಾಡುವುದೂ ಇಲ್ಲ ಎಂದರು ಕುಮಾರಸ್ವಾಮಿ ಅವರು.

ಇದನ್ನೂ ಓದಿ- ಇಂದಿನಿಂದ 7ನೇ ತಾರಿಕಿನವರೆಗೆ ಭಾರೀ ಮಳೆ : 50 ಕಿ.ಮೀ ವೇಗದಲ್ಲಿ ಬೀಸಲಿದೆ ಬಿರುಗಾಳಿ

ಕೋಣ, ಹಂದಿ ಕೂಯ್ದು ಕೇಡು ಬಯಸಲ್ಲ ನಾವು, ಕೇಡು ಬಯಸೋದು ಅವರ ಸಂಸ್ಕೃತಿ ಎಂದು ಡಿಕೆಶಿ ವಿರುದ್ಧ ಕಿಡಿಕಾರಿದ ಅವರು; ದೇವೇಗೌಡರ ಅರವತ್ತು ವರ್ಷಗಳ ರಾಜಕೀಯ ಜೀವನದಲ್ಲಿ 3-4 ವರ್ಷ ಬಿಟ್ಟರೆ ಉಳಿದದ್ದು ಎಲ್ಲಾ ವಿರೋಧ ಪಕ್ಷದಲ್ಲೇ. ಒಂದು ವೇಳೆ ಕುರಿ, ಕೋಣ ಬಲಿ ಕೊಟ್ಟರೆ ಅಧಿಕಾರ ಸಿಗುತ್ತದೆ ಎನ್ನುವುದಾದರೆ ಇಷ್ಟೆಲ್ಲಾ ಕಷ್ಟ ಏನಕ್ಕೆ ಪಡಬೇಕು ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News