JDS: ‘ಪಂಚರತ್ನ’ ಅಸ್ತ್ರದೊಂದಿಗೆ ಪಕ್ಷ ಸಂಘಟನೆಗೆ ಮುಂದಾದ HDK..!
ಸಂಕ್ರಾಂತಿಯಂದು ಸೂರ್ಯ ತನ್ನ ಪಥವನ್ನು ಬದಲಾಯಿಸುತ್ತಿದ್ದಂತೆ ರಾಜ್ಯದಲ್ಲಿ ಹೊಸ ರಾಜಕೀಯ ಇನ್ನಿಂಗ್ಸ್ ಅನ್ನು ಪ್ರಾರಂಭಿಸಲು ಸಂಕಲ್ಪ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
ರಾಮನಗರ: ಸಂಕ್ರಾಂತಿಯಂದು ಸೂರ್ಯ ತನ್ನ ಪಥವನ್ನು ಬದಲಾಯಿಸುತ್ತಿದ್ದಂತೆ ರಾಜ್ಯದಲ್ಲಿ ಹೊಸ ರಾಜಕೀಯ ಇನ್ನಿಂಗ್ಸ್ ಅನ್ನು ಪ್ರಾರಂಭಿಸಲು ಸಂಕಲ್ಪ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜಲವಿವಾದ, ಕೃಷಿ ಸೇರಿದಂತೆ ನಾಡಿನ ಐದು ಪ್ರಮುಖ ವಿಚಾರಗಳನ್ನೊಳಗೊಂಡ ‘ಪಂಚರತ್ನ’ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯನ್ನು ಎದುರಿಸಲಾಗುವುದು ಎಂದು ತಿಳಿಸಿದ್ದಾರೆ. ಜೊತೆಗೆ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರವಾಸ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ರಾಮನಗರ ಕ್ಷೇತ್ರದ ಜಾಲಮಂಗಲ ಗ್ರಾಮದ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಜೆಡಿಎಸ್(JDS) ಪಕ್ಷಕ್ಕೆ ಸ್ಪಷ್ಟಬಹುಮತ ನೀಡಿದಲ್ಲಿ ಐದು ವರ್ಷದಲ್ಲಿ ಮಾಡುವ ಪಂಚರತ್ನ ಕಾರ್ಯಕ್ರಮಗಳ ಕುರಿತು ನಾಡಿನ ಜನರಿಗೆ ಈಗಿನಿಂದಲೇ ಮನವರಿಕೆ ಮಾಡಿಕೊಡುವುದಾಗಿ ತಿಳಿಸಿದರು. ಜಲ ವಿವಾದ, ಕೃಷಿ ಸೇರಿದಂತೆ ನಾಡಿನ ಜ್ವಲಂತ ಸಮಸ್ಯೆಗಳನ್ನು ಒಳಗೊಂಡಿರುವ ಪ್ರಮುಖ ಐದು ವಿಚಾರಗಳಿಗೆ ಪಂಚರತ್ನ ಕಾರ್ಯಕ್ರಮ ಎಂದು ಹೆಸರಿಟ್ಟು ಜನರ ಎದುರಿಗೆ ಹೋಗುತ್ತೇವೆ. ಜೆಡಿಎಸ್ ಸ್ವತಂತ್ರವಾಗಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಲ್ಲಿ ಒಂದು ವರ್ಷಕ್ಕೆ ಒಂದು ಕಾರ್ಯಕ್ರಮದಂತೆ ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರಕಿಸಲಾಗುವುದು ಎಂದರು.
Byrathi Basavaraj: 'ಒಂದೂವರೆ ತಿಂಗಳಲ್ಲಿ ಮುನಿರತ್ನ ಸಚಿವರಾಗುತ್ತಾರೆ'
ಎಲ್ಲ ಕ್ಷೇತ್ರದಲ್ಲೂ ಪ್ರವಾಸ: ಜೆಡಿಎಸ್ ಪಕ್ಷದ ಸಂಘಟನೆಗೆ ಮೊದಲ ಆದ್ಯತೆ ನೀಡುತ್ತೇನೆ. ನಾಳೆಯಿಂದಲೇ ಪಕ್ಷ ಸಂಘಟಿಸಲು ಚಾಲನೆ ನೀಡಿ ಬಿಜೆಪಿ-ಕಾಂಗ್ರೆಸ್ ನ ವೈಫಲ್ಯ ಹಾಗೂ ಜೆಡಿಎಸ್ ಜನಪರ ಕಾರ್ಯಕ್ರಮಗಳನ್ನು ಮನವರಿಕೆ ಮಾಡಿಕೊಡುತ್ತೇನೆ. ಯಾವ ಯಾವ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳುತ್ತೇನೆ ಎಂಬುದರ ಪಟ್ಟಿಸಿದ್ಧವಾಗುತ್ತಿದೆ. ಯಾವ ಕ್ಷೇತ್ರವನ್ನೂ ನಿರ್ಲಕ್ಷಿಸದೆ ಪ್ರತಿಯೊಂದು ಕ್ಷೇತ್ರಕ್ಕೂ ಪ್ರವಾಸ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.
BJP: ಏಳು ಜನ ಸಚಿವ ಸಂಪುಟ ಸೇರಿ 3 ದಿನ ಕಳೆದರು ಹಂಚಿಕೆಯಾಗದ ಖಾತೆ..!
ಬಿಜೆಪಿ-ಕಾಂಗ್ರೆಸ್ ನಾಯಕರು ಜೆಡಿಎಸ್ಗೆ: ಜೆಡಿಎಸ್ ತೊರೆಯುವವರ ಸಂಖ್ಯೆ ಹೆಚ್ಚಾಗಿದೆ ಎಂಬ ಅಪಪ್ರಚಾರ ನಡೆಯುತ್ತಿದೆ. ಆದರೆ ಅನ್ಯಪಕ್ಷಗಳಲ್ಲಿರುವ ಜನತಾ ಪರಿವಾರದಲ್ಲಿದ್ದ ಬಹಳಷ್ಟು ನಾಯಕರು ಜೆಡಿಎಸ್ ಪಕ್ಷಕ್ಕೆ ಮರಳಿ ಬರಲು ಆಸಕ್ತಿ ತೋರುತ್ತಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರೊಂದಿಗೆ ಚರ್ಚೆ ನಡೆಸಿದ್ದು ಕಾಂಗ್ರೆಸ್‌ನ ಇನ್ನೂ ಅನೇಕ ನಾಯಕರು ಜನತಾ ಪರಿವಾರ ಸೇರುವ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಜೆಪಿ ವಿರುದ್ಧವೂ ಹರಿಹಾಯ್ದ ಅವರು, ಬಿಜೆಪಿ ಸರ್ಕಾರ ಹೋಗುತ್ತಿರುವ ಮಾರ್ಗ ಆತ್ಮಹತ್ಯೆ ಮಾಡಿಕೊಳ್ಳುವಂತಿದ್ದು ತಾವು ಮಾಡಿದ್ದೆಲ್ಲವನ್ನು ಜನರು ಒಪ್ಪಿಕೊಳ್ಳುತ್ತಾರೆಂದು ಭಾವಿಸಿದ್ದಾರೆ ಎಂದು ಟೀಕಿಸಿದರು.
H VISHWANATH : ಯಡಿಯೂರಪ್ಪಗೆ ಕುಟುಕಿ ಪುಸ್ತಕ ಬರೆಯಲು ಹೊರಟ ‘ಹಳ್ಳಿಹಕ್ಕಿ’
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ