HD Kumaraswamy : ಕೇಂದ್ರ ಬಜೆಟ್ ಅನ್ನು ತುಂಬಾ ಕಟುವಾಗಿ ಟೀಕಿಸಿದ ಮಾಜಿ ಸಿಎಂ ಕುಮಾರಸ್ವಾಮಿ!

“ಜನರಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ಮನೆಯಲ್ಲಿ ಮಲಗಿ ಎನ್ನುವಂತಿದೆ ಈ ಬಜೆಟ್” ಎಂದು ಪ್ರಸಕ್ತ ಸಾಲಿನ ಕೇಂದ್ರ ಮುಂಗಡ ಪತ್ರದ ಬಗ್ಗೆ ಅವರು ಒಂದು ಸಾಲಿನಲ್ಲಿ ವ್ಯಾಖ್ಯಾನ ಮಾಡಿದರು.

Written by - Channabasava A Kashinakunti | Last Updated : Feb 1, 2022, 04:05 PM IST
  • ಸಾಮಾನ್ಯ ಜನರ ಪಾಲಿಗೆ ಭರವಸೆ ಆಶಾಕಿರಣವಾಗಬೇಕಿದ್ದ ಕೇಂದ್ರ ಬಜೆಟ್
  • ಸಾಮಾನ್ಯ ಜನರ ಬದುಕಿನ ಬಗ್ಗೆ ಬಜೆಟ್ ಯೋಚನೆಯನ್ನೇ ಮಾಡಿಲ್ಲ
  • ಅದೇ ರೀತಿ ತಣ್ಣೀರು ಬಟ್ಟೆ ಹಾಕಿಕೋ ಎಂದು ಹೇಳಿದ್ದಾರೆ ಹಣಕಾಸು ಸಚಿವರು
HD Kumaraswamy : ಕೇಂದ್ರ ಬಜೆಟ್ ಅನ್ನು ತುಂಬಾ ಕಟುವಾಗಿ ಟೀಕಿಸಿದ ಮಾಜಿ ಸಿಎಂ ಕುಮಾರಸ್ವಾಮಿ! title=

ಬೆಂಗಳೂರು : ಸಾಮಾನ್ಯ ಜನರ ಪಾಲಿಗೆ ಭರವಸೆ ಆಶಾಕಿರಣವಾಗಬೇಕಿದ್ದ ಕೇಂದ್ರ ಬಜೆಟ್ ನಲ್ಲಿ ಅಂಥ ಯಾವುದೇ ಅಂಶ ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ.

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ(HD Kumaraswamy), “ಜನರಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ಮನೆಯಲ್ಲಿ ಮಲಗಿ ಎನ್ನುವಂತಿದೆ ಈ ಬಜೆಟ್” ಎಂದು ಪ್ರಸಕ್ತ ಸಾಲಿನ ಕೇಂದ್ರ ಮುಂಗಡ ಪತ್ರದ ಬಗ್ಗೆ ಅವರು ಒಂದು ಸಾಲಿನಲ್ಲಿ ವ್ಯಾಖ್ಯಾನ ಮಾಡಿದರು.

ಇದನ್ನೂ ಓದಿ : ಹಸಿದ ನರಿ ಮತ್ತು ಅಸಮಾಧಾನಗೊಂಡ ಸಿದ್ದರಾಮಯ್ಯ ತೀರಾ ಅಪಾಯಕಾರಿ: ಡಿಕೆಶಿಗೆ ಬಿಜೆಪಿ ಎಚ್ಚರಿಕೆ

ಬಜೆಟ್(Budget 2022) ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಸಾಮಾನ್ಯ ಜನರ ಬದುಕಿನ ಬಗ್ಗೆ ಬಜೆಟ್ ಯೋಚನೆಯನ್ನೇ ಮಾಡಿಲ್ಲ. ಕೋವಿಡ್, ಬೆಲೆ ಏರಿಕೆಯಿಂದ ಬಸವಳಿದ ಬಡಜನರ ಬಗ್ಗೆ ಕನಿಕರ ತೋರಿಲ್ಲ. ಕೋವಿಡ್ ಸಂಕಷ್ಟದ ನಂತರ ದೇಶದಲ್ಲಿ ಬಡತನಕ್ಕೆ ಹೆಚ್ಚು ಜನರು ದೂಡಲ್ಪಡುತ್ತಿದ್ದರೆ, ಸಿರಿವಂತರು ಮತ್ತಷ್ಟು ಸಿರಿವಂತರಾಗುತ್ತಿದ್ದಾರೆ. ಈ ಬಗ್ಗೆ ಬಜೆಟ್ ನಲ್ಲಿ ಸ್ಪಷ್ಟ ಪರಿಹಾರ ಇಲ್ಲ. ಸೋಂಕಿನ ಮಾರಿಗೆ ಸಿಲುಕಿ ಭರವಸೆ ಕಳೆದುಕೊಂಡಿರುವ ರೈತಾಪಿ, ಕಾರ್ಮಿಕರಿಗೆ ಧೈರ್ಯ ತುಂಬುವ ಅಥವಾ ಅವರನ್ನು ಆರ್ಥಿಕವಾಗಿ ಮೇಲೆತ್ತುವ ಅಂಶಗಳು ಈ ಬಜೆಟ್ ನಲ್ಲಿ ಇರಲೇಬೇಕಾಗಿತ್ತು ಎಂದು ಹೇಳಿದರು.

ಬಜೆಟ್(Union Budget 2022) ಬಗ್ಗೆ ದೊಡ್ಡಮಟ್ಟಿಗೆ ಹೇಳುವಂತಹದ್ದು ಏನೂ ಇಲ್ಲ. ಕೆಲವೊಮ್ಮೆ ಹಸಿದವರಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಳ್ಳಿ ಎಂದು ಹೇಳುತ್ತಾರೆ. ಅದೇ ರೀತಿ ತಣ್ಣೀರು ಬಟ್ಟೆ ಹಾಕಿಕೋ ಎಂದು ಹೇಳಿದ್ದಾರೆ ಹಣಕಾಸು ಸಚಿವರು. ಬಜೆಟ್ ಬಗ್ಗೆ ಇನ್ನೂ ಸಂಪೂರ್ಣವಾಗಿ ಗಮನಿಸಿಲ್ಲ. ನದಿ ಯೋಜನೆ ಬಗ್ಗೆ ಮೂರು ವರ್ಷದಿಂದ ಹೇಳುತ್ತಿದ್ದಾರೆ. ಕಾವೇರಿ - ಪೆನ್ನಾರ್, ಕೃಷ್ಣ-ಗೋದಾವರಿ ನದಿಗಳ ಜೋಡಣೆ ಬಗ್ಗೆ ಹೇಳಿದ್ದಾರೆ. ಅದು ಕಾರ್ಯರೂಪಕ್ಕೆ ಬರಬೇಕಲ್ಲ. ನದಿ ಜೋಡಣೆ ವಿಚಾರ ಬರಿ ಚರ್ಚೆಯಲ್ಲಿ. ಇದೆ ಕಾರ್ಯರೂಪಕ್ಕೆ ಬರಬೇಕಿದೆ. ಹೆಚ್ಚಿನ ತೆರಿಗೆ ವಿಧಿಸಿಲ್ಲ ಅನ್ನುವುದು ಬಿಟ್ಟರೇ ಬೇರೆ ಏನೂ ಇಲ್ಲ. ಯಾವುದೇ ಹೊಸ ರೀತಿಯ ಅಭಿವೃದ್ದಿ ಕಾರ್ಯಕ್ರಮವಿಲ್ಲ. ಈ ವರ್ಷವನ್ನು ಕಳೆಯುವ ಬಜೆಟ್ ಅಷ್ಟೇ ಇದು ಎಂದು ಅವರು ಟೀಕಿಸಿದರು.

ಇದನ್ನೂ ಓದಿ : Budget 2022: ಕೇಂದ್ರ ಬಜೆಟ್ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು..?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News