`ನಿಮ್ಮ ನಿಮ್ಮ ಚಡ್ಡಿ ನೀವು ಉದರಿಸಿಕೊಳ್ಳಿ, ರಾಜ್ಯದ ಜನರ ಚಡ್ಡಿ ಉದರಿಸಬೇಡಿ`
ನಿಮ್ಮ ನಿಮ್ಮ ಚಡ್ಡಿ ನೀವು ಉದರಿಸಿಕೊಳ್ಳಿ, ರಾಜ್ಯದ ಜನರ ಚಡ್ಡಿ ಉದರಿಸಬೇಡಿ. ರಾಜ್ಯದ ಜನತೆ ಗೌರವಾಗಿ ಬದುಕುವ ವಾತಾವರಣ ನಿರ್ಮಾಣ ಮಾಡಿ ಕೊಡಿ. ನಿಮ್ಮ ನಿಮ್ಮ ಚಡ್ಡಿ ಬಿಚ್ಚಿಕೊಳ್ಳಿ. ಸಿದ್ದರಾಮಯ್ಯ ಅವರನ್ನು ಕೇಳಿ ನಿಮಗೆ ಜೆಡಿಎಸ್ ಟಾರ್ಗೆಟ್ ಯಾಕೆ ಅಂತ? ಎಂದು ಹೇಳಿದರು.
ಬೆಳಗಾವಿ : ಆರಗ ಜ್ಞಾನೇಂದ್ರ ಕಾಂಗ್ರೆಸ್ ಚಡ್ಡಿ ಉದುರಿಸಿದ್ದೇವೆ ಎನ್ನುತ್ತಾರೆ. ಚಡ್ಡಿ ಬಿಚ್ಚಿದ್ರೆ ಎನ್ ಸಿಗುತ್ತದೆ ಎಂದು ಕಾಂಗ್ರೆಸ್ ಪಕ್ಷದಿಂದ ಆರ್‌ಎಸ್‌ಎಸ್ ಚಡ್ಡಿ ಪ್ರತಿಭಟನೆ ವಿಚಾರವಾಗಿ ಮಾಜಿ ಸಿಎಂ ಎಚ್ ಡಿ ಕುಮಾಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ನಿಮ್ಮ ನಿಮ್ಮ ಚಡ್ಡಿ ನೀವು ಉದರಿಸಿಕೊಳ್ಳಿ, ರಾಜ್ಯದ ಜನರ ಚಡ್ಡಿ ಉದರಿಸಬೇಡಿ. ರಾಜ್ಯದ ಜನತೆ ಗೌರವಾಗಿ ಬದುಕುವ ವಾತಾವರಣ ನಿರ್ಮಾಣ ಮಾಡಿ ಕೊಡಿ. ನಿಮ್ಮ ನಿಮ್ಮ ಚಡ್ಡಿ ಬಿಚ್ಚಿಕೊಳ್ಳಿ. ಸಿದ್ದರಾಮಯ್ಯ ಅವರನ್ನು ಕೇಳಿ ನಿಮಗೆ ಜೆಡಿಎಸ್ ಟಾರ್ಗೆಟ್ ಯಾಕೆ ಅಂತ? ಎಂದು ಹೇಳಿದರು.
ಇದನ್ನೂ ಓದಿ : ಹಿಂದೂ ಧರ್ಮ ತ್ಯಜಿಸಿದ ಕಾರಣಕ್ಕೆ ಬಸವಣ್ಣ ಮತ್ತು ಅಂಬೇಡ್ಕರ್‌ರನ್ನು ನಿರ್ಲಕ್ಷಿಸಲಾಯಿತೇ?: ಸಿದ್ದರಾಮಯ್ಯ
ಶುಕ್ರವಾರ ರಾಷ್ಟ್ರೀಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ರಾಜ್ಯದಾದ್ಯಂತ ಚಡ್ಡಿ ಸುಡುವ ಅಭಿಯಾನ ಆರಂಭಿಸುವುದಾಗಿ ಹೇಳಿದ್ದರು.
ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಅವರು, ಆರ್ ಎಸ್.ಎಸ್ ನವರು ಹಿಂದೆ ಚಡ್ಡಿ ಹಾಕುತ್ತಿದ್ದರು, ಈಗ ಪ್ಯಾಂಟ್ ಹಾಕುತ್ತಿದ್ದಾರೆ. ನಮ್ಮವರು ಪ್ರತಿಭಟನೆ ಸಂದರ್ಭದಲ್ಲಿ ಸಾಂಕೇತಿಕವಾಗಿ ಒಂದೇ ಒಂದು ಚಡ್ಡಿ ಸುಟ್ಟು ಹಾಕಿದ್ದಾರೆ. ಅದು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ದೊಡ್ಡ ಅಪರಾಧವಾಗಿ ಕಂಡಿದೆ ಎಂದು ಹೇಳಿದ್ದಾರೆ.
ಅವರೇನು ಮನೆಗೆ ಬೆಂಕಿ ಹಚ್ಚುವ ಅಥವಾ ಬೆಂಕಿಯನ್ನು ಸಮಾಜ ವಿರೋಧಿ ಕೆಲಸಕ್ಕೆ ಬಳಸಿಲ್ಲ. ಇದು ಕಾನೂನು ವಿರೋಧಿ ಕೃತ್ಯ ಹೇಗಾಗುತ್ತದೆ? ಕಾನೂನು ಉಲ್ಲಂಘನೆಗಾಗಿ ಗುಂಪುಗೂಡಿರುವುದು ಹೇಗಾಗುತ್ತದೆ ? ಒಬ್ಬರೇ ಪ್ರತಿಭಟನೆ ಮಾಡುವುದಕ್ಕಾಗುತ್ತದೆಯೇ ? ಅನ್ಯಾಯದ ವಿರುದ್ಧ, ನ್ಯಾಯಕ್ಕಾಗಿ ಹೋರಾಟ ಮಾಡುವುದು ಸಂವಿಧಾನ ನಮಗೆ ಕೊಟ್ಟ ಹಕ್ಕು.ಅದು ಮೂಲಭೂತ ಹಕ್ಕು. ಪ್ರತಿಭಟನೆ ವೇಳೆ ಆರ್'ಎಸ್ಎಸ್ ನವರ ಚಡ್ಡಿಯನ್ನು ಸುಟ್ಟು ಹಾಕಿದ್ದಾರೆ. ಒಂದೇ ಒಂದು ಚಡ್ಡಿ ಸುಟ್ಟಿದ್ದು ಪೊಲೀಸರಿಗೆ, ಸರ್ಕಾರದವರಿಗೆ ದೊಡ್ಡ ಅಪರಾಧವಾಗಿದೆ. ಅವರೇನು ಮನೆಗೆ ಬೆಂಕಿ ಹಚ್ಚೋಕೆ ಹೋಗಿರಲಿಲ್ಲ. ಕಾಂಪೌಂಡ್ ಗೇಟ್ ತೆಗೆದು ಒಳಗೆ ಹೋಗಿದ್ದಾರೆ. ಮನೆಗೆ ಪ್ರವೇಶ ಮಾಡಿಲ್ಲ. ಆಗ ಪೊಲೀಸರು ಏನು ಮಾಡುತ್ತಿದ್ದರು? ತಡೆಯಬೇಕಿತ್ತು ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಎಲ್ಲಾದಕು ಮನೆಗೆ ಬೆಂಕಿ ಹಾಕುತ್ತಾರಾ? ಚಡ್ಡಿ ಸುಟ್ಟಿರೋದು ಅದು ಒಂದೆ ಒಂದು ಚಡ್ಡಿ ಸುಟ್ಟಿರೋದು. ಪ್ರತಿಭಟನೆ ಮಾಡುತ್ತಿದ್ದವರ ಮೇಲೆ ಹಲ್ಲೆ ಮಾಡಿದವರ ಮೇಲೆ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ‘ಚಡ್ಡಿ ಸುಡುವ ಅಭಿಯಾನ’ ಶುರು ಮಾಡ್ತೇವೆ ಎಂದು ಹೇಳಿದ್ದರು.
ಇದನ್ನೂ ಓದಿ : Textbook Revision Row: ‘ಸಂವಿಧಾನ ಶಿಲ್ಪಿ’ ಬಿರುದು ತೆಗೆದು ಡಾ.ಬಿ.ಆರ್.ಅಂಬೇಡ್ಕರ್‌ಗೆ ಅವಮಾನ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ