ಬೆಂಗಳೂರು: ಜನಸ್ವರಾಜ್‌ ಯಾತ್ರೆ ಹೆಸರಿನಲ್ಲಿ ಜಾತ್ರೆ ಮಾಡುವ ಸಮಯ ಇದಲ್ಲವೆಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಹರಿಹಾಯ್ದಿದ್ದಾರೆ. ಶನಿವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಶಂಖ ಊದಿಕೊಂಡು ಹೋಗಿ ರೈತರ ಕಣ್ಣೀರನ್ನು  ಅಣಕಿಸಬೇಡಿ. ಕೃಷಿ ಕಾಯ್ದೆ ವಾಪಸ್‌ ಪಡೆದೆವು ಎಂದು ಬೀಗುತ್ತಾ ರೈತರ ತಾಳ್ಮೆಯನ್ನು ಪರೀಕ್ಷಿಸಬೇಡಿ. ಸರ್ಕಾವು(BJP Government) ಅಧಿಕಾರ ರಾಜಕಾರಣದಲ್ಲಿ ಮುಳುಗಿ ಮನುಷ್ಯತ್ವ ಮರೆಯಬಾರದು’ ಎಂದು ಕುಟುಕಿದ್ದಾರೆ.


COMMERCIAL BREAK
SCROLL TO CONTINUE READING

‘ಕೋವಿಡ್‌ ಮಹಾಮಾರಿಯಿಂದ ತತ್ತರಿಸಿದ್ದ ಜನರು ಈಗ ಮಳೆಯಿಂದ(Flood Issues in Karnataka)ಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ಅವರು ಬದುಕು ಕಟ್ಟಿಕೊಳ್ಳುವ ಮುನ್ನವೇ ಮಳೆ ಸಂಕಷ್ಟಕ್ಕೀಡು ಮಾಡಿದೆ. ಬೆಳೆದ ಬೆಳೆ ಕಣ್ಮುಂದೆಯೇ ಕೊಚ್ಚಿಹೋಗುತ್ತಿದೆ. ನಾಡಿಗೆ ಅನ್ನ ಕೊಡುವ ಅನ್ನದಾತ ಆಪತ್ತಿನಲ್ಲಿದ್ದಾನೆ. ಮಾಧ್ಯಮಗಳಿಗೆ ಅಧಿಕಾರಿಗಳೇ ನೀಡಿರುವ ಮಾಹಿತಿಯಂತೆ ಜುಲೈ-ನವೆಂಬರ್‌ʼನಲ್ಲಿ 7.31 ಲಕ್ಷ ಹೆಕ್ಟೇರ್‌ ಅಥವಾ ಅದಕ್ಕಿಂತ ಹೆಚ್ಚು ಪ್ರದೇಶದಲ್ಲಿ ಬೆಳೆದ ಬೆಳೆ ಮಳೆ ಪಾಲಾಗಿದೆ. ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು, ಮಧ್ಯ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆ ಸೇರಿ ರಾಜ್ಯದ ಉದ್ದಗಲಕ್ಕೂ ಮಳೆಯ ರುದ್ರನರ್ತನ ಮುಂದುವರಿದೆ’ ಎಂದು ಟ್ವೀಟ್ ಮಾಡಿದ್ದಾರೆ.


ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು- ಸಿದ್ಧರಾಮಯ್ಯ


‘ಮಳೆಯಿಂದ ಸಾವಿರಾರು ಕೋಟಿ ರೂ. ಮೌಲ್ಯದ ಬೆಳೆ ನಾಶವಾಗಿದೆ. ಚಿಕ್ಕಮಗಳೂರು(Chikmagalur), ಕೊಡಗಿನಲ್ಲಿ ಕಾಫಿ ತೋಟಗಳು ಪೂರ್ಣ ನಾಶವಾಗಿವೆ. ಬಯಲುಸೀಮೆ ಜಿಲ್ಲೆಗಳಲ್ಲಿ ಮಳೆ ಪ್ರಳಯವನ್ನೇ ಸೃಷ್ಟಿಸಿದೆ. ಕೆರೆಕಟ್ಟೆಗಳು ಒಡೆದುಹೋಗಿ ಗ್ರಾಮಗಳಿಗೆ ಸಂಪರ್ಕವೇ ತಪ್ಪಿಹೋಗಿದೆ. ಹಳ್ಳಿಗಳು ನಡುಗಡ್ಡೆಗಳಾಗಿವೆ. ತೋಟಗಳು ಕೆರೆಗಳಾಗಿವೆ. ಕೋಲಾರ ಜಿಲ್ಲೆ ಒಂದರಲ್ಲೇ ಅತಿಹೆಚ್ಚು ಬೆಳೆ ನಾಶವಾಗಿದೆ. ಮಾಧ್ಯಮಗಳಿಗೆ ಅಧಿಕಾರಿಗಳೇ ಕೊಟ್ಟಿರುವ  ಮಾಹಿತಿಯಂತೆ ಆ ಒಂದು ಜಿಲ್ಲೆಯಲ್ಲೇ 34,447 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿದ್ದ ಬೆಳೆಯನ್ನು ಮಳೆ ನುಂಗಿದೆ. 14 ಜಿಲ್ಲೆಗಳಲ್ಲಿ 48,000 ಹೆಕ್ಟೇರ್‌ʼಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಫಸಲು ರೈತರ ಕೈಗೆ ಸಿಕ್ಕಿಲ್ಲ’ ಎಂದು ಎಚ್​ಡಿಕೆ ಟ್ವೀಟ್ ಮಾಡಿದ್ದಾರೆ.


Karnataka MLC Election: ಬಿಜೆಪಿಯಿಂದ 20 ಅಭ್ಯರ್ಥಿಗಳ ಪಟ್ಟಿ ಪ್ರಕಟ


‘ಮಳೆಯಿಂದ ಇಷ್ಟೆಲ್ಲ ಅನಾಹುತ ಆಗುತ್ತಿದ್ದರೂ ಕೃಷಿ ಸಚಿವರು, ಅವರ ಇಲಾಖೆ ಹಾಗೂ ಕಂದಾಯ ಇಲಾಖೆ ಏನು ಮಾಡುತ್ತಿದೆ? ಈಗಾಗಲೇ ಬೆಳೆ ಹಾನಿ ಬಗ್ಗೆ ಸಮೀಕ್ಷೆ ಮಾಡಲಾಗಿದೆಯಾ? ಬೆಳೆ ವಿಮೆ ಪರಿಸ್ಥಿತಿ ಏನು? ಕಾಟಾಚಾರಕ್ಕೆ ಸರ್ವೇ ಮಾಡಿ ಸಭೆಗಳಲ್ಲಿ ಕಾಲಹರಣ ಮಾಡುವುದು ಬೇಡ’ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.