ಬೆಂಗಳೂರು: ನವೀನ್(Naveen Gyangoudar) ಆತ್ಮಕ್ಕೆ ಶಾಂತಿ ಸಿಗಬೇಕಾದರೆ ನೀಟ್ ವ್ಯವಸ್ಥೆಗೆ ಚರಮಗೀತೆ ಹಾಡಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಹೇಳಿದ್ದಾರೆ. ಈ ಬಗ್ಗೆ ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಉನ್ನತ ಶಿಕ್ಷಣವನ್ನು ಉಳ್ಳವರಿಗೆ ಒತ್ತೆ ಇಟ್ಟ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಸಗಿದ ಪಾಪಕ್ಕೆ ಮುಗ್ಧ ವಿದ್ಯಾರ್ಥಿ ನವೀನ್ ಬಲಿ ಆಗಿದೆ’ ಎಂದು ಕಿಡಿಕಾರಿದ್ದಾರೆ.


COMMERCIAL BREAK
SCROLL TO CONTINUE READING

‘ರಾಜಕಾರಣಿಗಳು, ಶ್ರೀಮಂತರಿಗೆ ಉನ್ನತ ಶಿಕ್ಷಣವು ದುಡ್ಡು ಸಂಗ್ರಹ ಮಾಡುವ ಹುಂಡಿಯಾಗಿದೆ. ಇದರಲ್ಲಿ ಅನುಮಾನವೇ ಇಲ್ಲ. ನೀಟ್ ಮೂಲಕ ವೈದ್ಯಕೀಯ ಸೀಟು ಸಿಗದೇ ಉಕ್ರೇನ್(Russia-Ukraine War) ಗೆ ಹೋಗಿ ಉಸಿರು ಚೆಲ್ಲಿದ ನವೀನ್ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ನೀಟ್ ವ್ಯವಸ್ಥೆಗೆ ಚರಮಗೀತೆ ಹಾಡಬೇಕು’ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.


Russia Ukraine Crisis)ದಲ್ಲಿ ಜೀವ ಚೆಲ್ಲಿ ಹುಟ್ಟಿದೂರಿನಲ್ಲಿ ನಿಶ್ಚಲವಾಗಿ ಮಲಗಿದ್ದ ನವೀನ್ ಭಾರತದ ಆತ್ಮಸಾಕ್ಷಿಗೆ ಎದುರಾಗಿರುವ ದೊಡ್ಡ ಪ್ರಶ್ನೆ. ವಿದ್ಯೆ ಹೆಸರಿನಲ್ಲಿ ದಂಧೆ ನಡೆಸುವ ದುರಾಸೆಗೂ ಒಂದು ಸವಾಲು. ಹಾಗಾದರೆ, ಇನ್ನೆಷ್ಟು ನವೀನರು ಬಲಿ ಆಗಬೇಕು?’ ಅಂತಾ ಪ್ರಶ್ನಿಸಿದ್ದಾರೆ.


ನವೀನ್ ಮೃತದೇಹ ತಾಯ್ನಾಡಿಗೆ : ದೂರವಾಣಿ ಕರೆ ಮೂಲಕ ಪಿಎಂಗೆ ಧನ್ಯವಾದ ಎಂದ ಸಿಎಂ


‘ಧನದಾಹಕ್ಕೆ ಕಡಿವಾಣ ಹಾಕಿ ಎಲ್ಲರಿಗೂ ಮೆಡಿಕಲ್ ಸೀಟು ಕೊಡಿಸುವ ಉದ್ದೇಶದಿಂದ ಜಾರಿಗೆ ಬಂದ ನೀಟ್ ವ್ಯವಸ್ಥೆ(NEET Exam Pattern) ಸಂಪೂರ್ಣ ವಿಫಲವಾಗಿದೆ. ನವೀನ್ ಸಾವಿನಿಂದ ಜ್ಞಾನೋದಯ ಆಗಿದೆ ಎನ್ನುವ ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai)ಯವರು ವೈದ್ಯ ಶಿಕ್ಷಣ ಶುಲ್ಕ ಕಡಿಮೆ ಮಾಡುವ ಹೇಳಿಕೆ ನೀಡುತ್ತಾರೆ. ಆದರೆ, ನೀಟ್ ವಿರುದ್ಧ ಚಕಾರ ಎತ್ತುತ್ತಿಲ್ಲ, ಯಾಕೆ?’ ಅಂತಾ ಎಚ್​ಡಿಕೆ(HD Kumaraswamy) ಪ್ರಶ್ನಿಸಿದ್ದಾರೆ.


NEET Exam) ನಿಂದ ಹೊರಬರಲು ವಿಧಾನ ಮಂಡಲದಲ್ಲಿ ನಿರ್ಣಯ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ತನ್ವೀರ್ ಸೇಠ್ ವಿರುದ್ಧ ಕ್ರಮ ತೆಗೆದುಕೊಳ್ಳಲು ಡಿಕೆಶಿಯವರಿಗೆ ಭಯವೇ?: ಬಿಜೆಪಿ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.