ಬೆಂಗಳೂರು: ಕಾಂಗ್ರೆಸ್ ಜಾರಿಗೆ ತರುತ್ತಿರುವ 5 ಗ್ಯಾರಂಟಿ ಯೋಜನೆಗಳ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಎಚ್‍ಡಿಕೆ, ‘ಷರತ್ತುಸಹಿತವಾಗಿ ಘೋಷಣೆ ಮಾಡಲಾಗಿರುವ  5 ಗ್ಯಾರಂಟಿಗಳ ಬಗ್ಗೆ ಈಗಾಗಲೇ ಜನರಿಗೆ ಒಂದು ನಿರ್ದಿಷ್ಟ ಅಭಿಪ್ರಾಯ ಬಂದಿದೆ. ಹರುಷದ ಕೂಳಿಗೆ ಆಸೆಪಟ್ಟು ವರುಷದ ಕೂಳು ಕಳೆದುಕೊಂಡರು ಎನ್ನುವ ಮಾತನ್ನು ಹೇಳಲಾರೆ. ಆದರೆ ರಾಜ್ಯದ ಜನತೆಗೆ ಇದರ ಒಳಮರ್ಮ ಅರ್ಥವಾಗಲು ಬಹಳ ದಿನ ಬೇಕಿಲ್ಲ’ವೆಂದು ಟೀಕಿಸಿದ್ದಾರೆ.


COMMERCIAL BREAK
SCROLL TO CONTINUE READING

ಗ್ಯಾರಂಟಿಗಳ ಬಗ್ಗೆ ಚರ್ಚೆ ಅಥವಾ ವಿಮರ್ಶೆಗೆ ನನಗೆ ಆತುರವಿಲ್ಲ, ನನಗೆ ತಾಳ್ಮೆ ಇದೆ. ಆದರೆ ಮತ ಗಳಿಕೆಗೆ ಮುನ್ನ ಕೊಟ್ಟ ಭರವಸೆಗಳು ಅಧಿಕಾರಕ್ಕೆ ಬಂದ ಮೇಲೆ 'ಷರತ್ತು ಸಹಿತ' ಎಂದಾಗಿದ್ದರ ಬಗ್ಗೆ ನನಗೆ ನೋವಿದೆ. ಜನರ ಸಹನೆ ಎನ್ನುವುದು ಖಂಡಿತಾ ಕಟ್ಟೆಯೊಡೆಯುತ್ತದೆ, ನಾನು ಕಾಯುತ್ತೇನೆ ಹಾಗೂ ಅವರ ಜೊತೆ ನಿಲ್ಲುತ್ತೇನೆ’ ಎಂದು ಎಚ್‍ಡಿಕೆ ಟ್ವೀಟ್ ಮಾಡಿದ್ದಾರೆ.


ದಕ್ಷಿಣ ವಲಯ ಆಯುಕ್ತರು ರವರಿಂದ ಕಂಟ್ರೋಲ್ ರೂಂಗಳ ಪರಿಶೀಲನೆ


‘ಹಾಲಿ ಮುಖ್ಯಮಂತ್ರಿಗಳು 2013-18ರಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ 2.75 ಲಕ್ಷದಷ್ಟು ಸರ್ಕಾರಿ ಹುದ್ದೆಗಳನ್ನು ಖಾಲಿ ಇಟ್ಟಿದ್ದರು. ಆ ಖಾಲಿ ಹುದ್ದೆಗಳನ್ನು ತುಂಬಲು ಅವರು ಆ ಸಂದರ್ಭದಲ್ಲಿ ಎಳ್ಳಷ್ಟೂ ಪ್ರಯತ್ನ ಮಾಡಲಿಲ್ಲ. ಅಂದು ಕಾಣದ ನಿರುದ್ಯೋಗ ಈ ಚುನಾವಣೆಗೆ ಮುನ್ನ ಕಂಡಿತು, ಮತ ಫಸಲು ತಂದುಕೊಟ್ಟಿತು’ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.


ಹಳೆ ಮೊಬೈಲ್ ಕೊಟ್ಟ ಕಂಪನಿಗೆ ಹೊಸ ಹ್ಯಾಂಡ್ ಸೆಟ್ ಕೊಡಲು ಆಯೋಗದ ಆದೇಶ


‘ನಾನು ತುಟಿಗೆ ತುಪ್ಪ ಸವರುವವರನ್ನು ನೋಡಿದ್ದೆ. ಹಣೆಗೆ ತುಪ್ಪ ಸವರುವವರನ್ನು ನೋಡಿರಲಿಲ್ಲ. ಗ್ಯಾರಂಟಿ ಕಾರ್ಡಿಗೆ ಸಹಿ ಹಾಕಿಕೊಟ್ಟು ಯಾಮಾರಿಸಿದ ಮಹಾನುಭಾವರು ಹಣೆಗೆ ತುಪ್ಪ ಸವರಿ ನಯಗಾರಿಕೆಯಿಂದ ಭಂಡತನ ಮೆರೆದು ಯುವಜನರ ಬೆನ್ನಿಗೆ ಚೂರಿ ಹಾಕಿದ್ದಾರೆ. ಯುವಜನರೂ ತಮ್ಮ ಶಕ್ತಿಯನ್ನು ತೋರಿಸಲಿದ್ದಾರೆ, ನಾನು ಕಾಯುತ್ತೇನೆ. ಈಗ 1 ಗ್ಯಾರಂಟಿ ಬಗ್ಗೆ ಮಾತ್ರ ಮಾತನಾಡಿದ್ದೇನೆ. ಉಳಿದವುಗಳ ಬಗ್ಗೆ ಕ್ರಮೇಣ ಮಾತನಾಡುತ್ತೇನೆ. ಜನರ ತಲೆ ಮೇಲೆ 5 ಮಕ್ಮಲ್ ಟೋಪಿಗಳನ್ನು ಹಾಕಿದ ಈ 'ಷರತ್ತು ಸರ್ಕಾರ'ವನ್ನು ಆ ಜನರು ಕ್ಷಮಿಸುವುದಿಲ್ಲ. ಕಂಡಿಷನ್ಸ್ ಕಾಂಗ್ರೆಸ್ ಪಕ್ಷಕ್ಕೆ ತಕ್ಕಪಾಠ ಕಲಿಸಿಯೇ ಕಲಿಸುತ್ತಾರೆ’ ಎಂದು ಕುಮಾರಸ್ವಾಮಿ ಕುಟುಕಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.