HD Kumaraswamy : ಹೆಚ್​ಡಿ ಕುಮಾರಸ್ವಾಮಿಗೆ ಕೊರೊನಾ ಪಾಸಿಟಿವ್!

ಈ ಬಗ್ಗೆ ಟ್ವಿಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಹೆಚ್. ಡಿ. ಕುಮಾರಸ್ವಾಮಿ, ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿದೆ.

Written by - Channabasava A Kashinakunti | Last Updated : Jul 12, 2022, 04:34 PM IST
  • ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ
  • ಕುಮಾರಸ್ವಾಮಿಗೆ ಕೊರೊನಾ ದೃಢ
  • ಈ ಬಗ್ಗೆ ಟ್ವಿಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಕುಮಾರಸ್ವಾಮಿ,
HD Kumaraswamy : ಹೆಚ್​ಡಿ ಕುಮಾರಸ್ವಾಮಿಗೆ ಕೊರೊನಾ ಪಾಸಿಟಿವ್! title=

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿಗೆ ಕೊರೊನಾ ದೃಢವಾಗಿದೆ.

ಈ ಬಗ್ಗೆ ಟ್ವಿಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಹೆಚ್. ಡಿ. ಕುಮಾರಸ್ವಾಮಿ, ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿದೆ.

ಇದನ್ನೂ ಓದಿ : ಲೆಕ್ಕ ಬರೆದಿಟ್ಟುಕೊಳ್ಳಿ ಡಿಕೆಶಿ ನಿಮ್ಮ ಲೆಕ್ಕ ಚುಕ್ತಾ ಮಾಡುತ್ತಾರೆ: ಬಿಜೆಪಿ ಎಚ್ಚರಿಕೆ

ಕೋವಿಡ್‌ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ, ವೈದ್ಯರು ಹೋಮ್  ಐಸೋಲೇಷನ್ʼನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ.

ವೈದ್ಯರ ಸೂಚನೆಯಂತೆ, ನಾನು 10 ದಿನಗಳ ಕಾಲ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತೇನೆ. ದಯಮಾಡಿ ಯಾರೂ ನನ್ನ ಭೇಟಿಗೆ ಬರಬಾರದೆಂದು ವಿನಂತಿಸುತ್ತೇನೆ. ಯಾರೂ ಅನ್ಯತಾ ಭಾವಿಸಬಾರದು.

3-4 ದಿನಗಳಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ತಪ್ಪದೇ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಬಿಎಸ್‌ವೈಗೆ ಸಿಎಂ ಸ್ಥಾನದ ಆಸೆ ತೋರಿಸಿ ‘ಆಪರೇಷನ್ ಕಮಲ’ ಮಾಡಿಸಿದ್ದು ಯಾರು?: ಸಿದ್ದರಾಮಯ್ಯ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News