HD Kumaraswamy: ಎಂಇಎಸ್ ವಿನಾಕಾರಣ ಕನ್ನಡಿಗರನ್ನು ಕೆಣಕುತ್ತಿದೆ- ಸಾಮಾಜಿಕ ಮಾಧ್ಯಮದಲ್ಲಿ ಎಚ್ಡಿಕೆ ಗುಡುಗು

ನಾಡು ನುಡಿಯ ವಿಷಯದಲ್ಲಿ ರಾಜ್ಯ ಸರಕಾರ ಅಲಕ್ಷ್ಯ ಮಾಡಲೇಬಾರದು. ಕನ್ನಡವನ್ನು ಅಪಮಾನಿಸುವ  ಈ ಪುಂಡರಿಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Written by - Yashaswini V | Last Updated : Oct 27, 2021, 10:08 AM IST
  • ಕೆಲ ದಿನಗಳಿಂದ ಬೆಳಗಾವಿಯಲ್ಲಿ ಕನ್ನಡಿಗರನ್ನು ಎಂಇಎಸ್ ವಿನಾಕಾರಣ ಕೆಣಕುತ್ತಿದೆ
  • ನಾಡು ನುಡಿಯ ವಿಷಯದಲ್ಲಿ ರಾಜ್ಯ ಸರಕಾರ ಅಲಕ್ಷ್ಯ ಮಾಡಲೇಬಾರದು
  • ಕನ್ನಡವನ್ನು ಅಪಮಾನಿಸುವ ಈ ಪುಂಡರಿಗೆ ತಕ್ಕ ಶಾಸ್ತಿ ಮಾಡಬೇಕು
HD Kumaraswamy: ಎಂಇಎಸ್ ವಿನಾಕಾರಣ ಕನ್ನಡಿಗರನ್ನು ಕೆಣಕುತ್ತಿದೆ- ಸಾಮಾಜಿಕ ಮಾಧ್ಯಮದಲ್ಲಿ ಎಚ್ಡಿಕೆ ಗುಡುಗು title=
HD Kumaraswamy Tweet on MES

ಬೆಂಗಳೂರು: ಕಳೆದ ಹಲವು ಚುನಾವಣೆಗಳಲ್ಲಿ ರಾಜಕೀಯವಾಗಿ ಮುಖಭಂಗ ಅನುಭವಿಸಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ- ಎಂಇಎಸ್, ಈಗ ಕನ್ನಡ ರಾಜ್ಯೋತ್ಸವ ಹತ್ತಿರಕ್ಕೆ ಬಂದ ಸಂದರ್ಭದಲ್ಲೇ ಪುಂಡಾಟಿಕೆ ಶುರು ಮಾಡಿದೆ. ಕನ್ನಡ ಅಸ್ಮಿತೆಯನ್ನೇ ಕೆಣಕುವ, ಕನ್ನಡಿಗರನ್ನು ಅಪಮಾನಿಸುವ ಹೇಯ ಕೆಲಸಕ್ಕೆ ಮುಂದಾಗಿದೆ ಎಂದು ಸಾಮಾಜಿಕ ಮಾಧ್ಯಮದ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (Former CM HD Kumaraswamy) ಎಂಇಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಎಚ್.ಡಿ. ಕುಮಾರಸ್ವಾಮಿ (HD Kumaraswamy), ಕೆಲ ದಿನಗಳಿಂದ ಬೆಳಗಾವಿಯಲ್ಲಿ ಕನ್ನಡಿಗರನ್ನು ಎಂಇಎಸ್ (MES) ವಿನಾಕಾರಣ ಕೆಣಕುತ್ತಿದೆ. ಪ್ರತಿಭಟನೆಯ ವೇಳೆ ಕರ್ನಾಟಕ ಸರಕಾರವನ್ನು ಎಂಇಎಸ್ ಪುಂಡರು ಗೇಲಿ ಮಾಡಿದ್ದಾರೆ. ಅಲ್ಲಿನ ಸರಕಾರಿ ಕಚೇರಿಗಳಲ್ಲಿ ದಾಖಲೆಗಳನ್ನು ಮರಾಠಿ ಭಾಷೆಯಲ್ಲೇ ಕೊಡಬೇಕು ಎಂದು ಒತ್ತಾಯಿಸುವ ಭರದಲ್ಲಿ ಕರ್ನಾಟಕ ಸರಕಾರವನ್ನು ʼನಾಲಾಯಕ್ʼ ಎಂದು ಕರೆದು ʼಜೈ ಮಹಾರಾಷ್ಟ್ರʼ ಎಂದು ಘೋಷಣೆ ಕೂಗಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ಖಂಡನೀಯ ಎಂದು ಹೇಳಿದ್ದಾರೆ.

ಇದನ್ನೂ ಓದಿ- "ಕಲೆ, ಸಂಸ್ಕೃತಿಗಳನ್ನು ಉಳಿಸುವುದರ ಮೂಲಕ ಕನ್ನಡವನ್ನು ಬೆಳೆಸಬೇಕು"

ರಾಜಕೀಯವಾಗಿ ಮೂಲೆಗುಂಪಾಗಿರುವ  ಮಹಾರಾಷ್ಟ್ರ ಏಕೀಕರಣ ಸಮಿತಿ- ಎಂಇಎಸ್ (MES), ತಮ್ಮ ಅಸ್ತಿತ್ವಕ್ಕಾಗಿ ಬೆಳಗಾವಿಯಲ್ಲಿ ಗೊಂದಲ, ಗದ್ದಲ ಉಂಟು ಮಾಡುತ್ತಿದೆ. ಭಾಷಾ ಭ್ರಾತೃತ್ವ, ಸ್ನೇಹಶೀಲತೆ ಹಾಗೂ ಶಾಂತಿ ಸಹನೆಗೆ ಹೆಸರಾಗಿರುವ ಕುಂದಾ ನಗರಿಯ ಪ್ರತಿಷ್ಠೆಯನ್ನು ಹಾಳು ಮಾಡುವ ದುರುದ್ದೇಶ ಇವರಿಗಿದೆ  ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. 

ಇದನ್ನೂ ಓದಿ- JOB News: ಹಿರಿಯ ಅಪರ ಜಿಲ್ಲಾ ಸರ್ಕಾರಿ, ತಾಲೂಕು ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ನಾಡು ನುಡಿಯ ವಿಷಯದಲ್ಲಿ ರಾಜ್ಯ ಸರಕಾರ ಅಲಕ್ಷ್ಯ ಮಾಡಲೇಬಾರದು. ಕನ್ನಡವನ್ನು ಅಪಮಾನಿಸುವ  ಈ ಪುಂಡರಿಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News