ಬೆಂಗಳೂರು: ಸಿಲಿಕಾನ್ ಸಿಟಿ, ಉದ್ಯಾನನಗರಿ, ಕೆಂಪೇಗೌಡ ಕಟ್ಟಿದ ನಗರ ಎಂಬೆಲ್ಲಾ ಖ್ಯಾತಿಗಳಿಸಿರುವ, ಇಡೀ ಏಷ್ಯಾದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ, ದೇಶ-ವಿದೆಶಿಗರನ್ನು ತಮ್ಮತ್ತ ಸೆಳೆಯುತ್ತಿರುವ ಬೆಂಗಳೂರನ್ನು (Bengalore) ಉಗ್ರರ ತಾಣ' ಎಂದು ಹೇಳಿರುವ ಸಂಸದ ತೇಜಸ್ವಿ ಸೂರ್ಯ (Tejasvi Surya) ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumarswamy) ಆಕ್ರೋಶ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ‌ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, 'ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿ.ಜೆ. ಹಳ್ಳಿ ಘಟನೆ ನಂತರ ಸಿಕ್ಕಿ ಬಿದ್ದಿದ್ದರು. ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಅಲ್ಲ. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು' ಎಂದು ಹೇಳಿದ್ದಾರೆ.


ಯಡಿಯೂರಪ್ಪ ವಿರುದ್ಧ ಅವಿಶ್ವಾಸ ಮಂಡಿಸಲು ತೀರ್ಮಾನ ಮಾಡಿದ್ದೇವೆ: ಸಿದ್ದರಾಮಯ್ಯ


BBMP) ಚುನಾವಣೆ ಮಾತ್ರವಲ್ಲ, ಬೆಂಗಳೂರು 28 ವಿಧಾನಸಭೆ ಕ್ಷೇತ್ರ ಮಾತ್ರ ಅಲ್ಲ,  ಬೆಂಗಳೂರು ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು' ಎಂದು ಒತ್ತಾಯಿಸಿದ್ದಾರೆ.


ಸದ್ಯಕ್ಕಿಲ್ಲ ಶಾಲಾ-ಕಾಲೇಜುಗಳ ಆರಂಭ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ


'ಕೆಂಪೇಗೌಡರು ಬಲಿದಾನಗಳ ಮೂಲಕ ನಿರ್ಮಿಸಿದ ಬೆಂಗಳೂರು ಈಗಾಗಲೇ ಜಗದ್ವಿಖ್ಯಾತಿ ಗಳಿಸಿದೆ. ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತಿದೆ.  ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಭಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನಗಳೂ ಮೂಡುತ್ತಿವೆ. ಯಾಕೆಂದರೆ ಕೆಲ ಮಂದಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ!' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.