HD Kumarswamy : `14 ತಿಂಗಳ ಅಧಿಕಾರದಲ್ಲಿ ನಾನು ಪ್ರಥಮ ದರ್ಜೆ ಸಹಾಯಕನಾಗಿದ್ದೆ, ಸಿಎಂ ಆಗಿರಲಿಲ್ಲ`
ನಾನು ಈ ಬಾರಿ ಸದನದಲ್ಲಿ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ನಡೆದ ಭ್ರಷ್ಟಾಚಾರಗಳ, ಹಗರಣಗಳ ಬಗ್ಗೆ ಸದನದಲ್ಲಿ ದಾಖಲೆಗಳನ್ನು ಇಡಲು ತಯಾರಿ ಮಾಡಿಕೊಂಡಿದ್ದೆ. ಆದರೆ ಸದನವು ಸರಿಯಾಗಿ ನಡೆಯಲೇ ಇಲ್ಲ, ಎಂದು ಹೇಳಿದರು.
ಬೆಂಗಳೂರು : ನೀವು ಕೂಡ 14 ತಿಂಗಳು ಆಡಳಿತ ಮಾಡಿದ್ದಿರಿ. ಆಗ ಸರಿ ಮಾಡಬಹುದಿತ್ತಲ್ಲ ಎಂದು ಯಾರಾದರೂ ಕೇಳಬಹುದು. ಆದರೆ ನಾನು ಆಗ ಸಿಎಂ ಅಲ್ಲ, ಎಫ್ ಡಿಸಿ ಕೆಲಸ ಮಾಡಿದ್ದೆ ಅಷ್ಟೇ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು(HD Kumarswamy), ನಾನು ಈ ಬಾರಿ ಸದನದಲ್ಲಿ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ನಡೆದ ಭ್ರಷ್ಟಾಚಾರಗಳ, ಹಗರಣಗಳ ಬಗ್ಗೆ ಸದನದಲ್ಲಿ ದಾಖಲೆಗಳನ್ನು ಇಡಲು ತಯಾರಿ ಮಾಡಿಕೊಂಡಿದ್ದೆ. ಆದರೆ ಸದನವು ಸರಿಯಾಗಿ ನಡೆಯಲೇ ಇಲ್ಲ, ಎಂದು ಹೇಳಿದರು.
ಇದನ್ನೂ ಓದಿ : Mekkedadu 2.O : 'ಇದೇ 27ರಿಂದ ಮತ್ತೆ ಮೇಕೆದಾಟು ಪಾದಯಾತ್ರೆ ಪುನಾರಂಭ'
ರಾಷ್ಟ್ರಧ್ವಜದ ವಿಷಯದಲ್ಲಿ ನಾನು ಸಚಿವ ಕೆ ಎಸ್ ಈಶ್ವರಪ್ಪ ಅವರ ಪರ ವಕೀಲಿಕೆ ಮಾಡುತ್ತಿಲ್ಲ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ನಾನು ಇರುವ ವಿಷಯವನ್ನು ಇದ್ದ ಹಾಗೆ ಹೇಳಿದ್ದೇನೆ. ಈಶ್ವರಪ್ಪ ಅವರು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಸಹಜವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅವರೇನೂ ದ್ವಜಕ್ಕೆ ಅಪಮಾನ ಆಗುವಂತಹ ಹೇಳಿಕೆ ಕೊಟ್ಟಿಲ್ಲ. ಹಾಗಂತ ನಾನೇನೂ ಈಶ್ವರಪ್ಪ ಪರ ವಕೀಲಿಕೆ ಮಾಡುತ್ತಿಲ್ಲ ಎಂದರು.
ದ್ವಜದ ಬಗ್ಗೆ ಅಷ್ಟೊಂದು ಹೇಳುವ ಕಾಂಗ್ರೆಸ್(Congress) ನಾಯಕರು, ಸದನದ ಬಾವಿಯಲ್ಲಿ ರಾಷ್ಟ್ರಧ್ವಜ ಹಾರಿಸುತ್ತ ಪ್ರತಿಭಟನೆ ಮಾಡಿದರು. ಇದು ರಾಷ್ಟ್ರಧ್ವಜಕ್ಕೆ ನೀಡುವ ಗೌರವವೇ? ಸುಖಾ ಸುಮ್ಮನೆ ಸದನದ ಕಲಾಪ ವ್ಯರ್ಥ ಮಾಡದೇ ಹೈಕೋರ್ಟ್ ನಲ್ಲಿ ಪಿಐಎಲ್ ಹಾಕಿ ಹೋರಾಟ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿಗಳು ಟಾಂಗ್ ನೀಡಿದರು.
ಪ್ರತಿಷ್ಠೆಗೆ ಬಿದ್ದು ಮಂತ್ರಿಯ ರಾಜೀನಾಮೆ ಪಡೆಯಲು ಹೊರಟ ಕಾಂಗ್ರೆಸ್ ನಡೆಯನ್ನು ಜನ ಗಮನಿಸುತ್ತಾ ಇದ್ದಾರೆ. ಕಲಾಪಕ್ಕೆ ಅಡ್ಡಿ ಮಾಡುವವರನ್ನು ಸದನದಿಂದ ಅಮಾನತು ಮಾಡಿ, ಆ ನಂತರ ಸದನ ನಡೆಸಿ ಎಂದು ಸಭಾಧ್ಯಕ್ಷರಿಗೂ ಮನವಿ ಮಾಡುತ್ತೇನೆ. ಕೋವಿಡ್ ಅನಾಹುತ ಸಂದರ್ಭದಲ್ಲಿ ಆಗುತ್ತಿರುವ ಮತ್ತೊಂದು ' ರಾಜಕೀಯ ಕೋವಿಡ್ ದುರಂತ ' ಇದು. ಈ ವಿನಾಶಕಾರಿ ಕೋವಿಡ್ ಅನ್ನು ಎಲ್ಲಾ ಸೇರಿ ಹರಡಿಸಬೇಡಿ ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರತಿಕ್ರಿಯಿಸಿದರು.
ಇದನ್ನೂ ಓದಿ : ಕೋರಿಯರ್ ನಲ್ಲಿ ಬೆಂಗಳೂರಿಗೆ ಬಂದಿದ್ದ 7 ಕೋಟಿ ಮೌಲ್ಯದ ಹೆರಾಯಿನ್ ವಶಕ್ಕೆ!
ನಾವು ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಸದನಕ್ಕೆ ಬಂದಿದ್ದೆವು. ಆದರೆ ಇವರು ಹಿಜಾಬ್(Hijab Row) ಮತ್ತು ಕೇಸರಿ ಶಾಲು ಎಂದು ಕಲಾಪವನ್ನು ಹಾಳು ಮಾಡಿದರು. ಆಮೇಲೆ ಸಚಿವರ ರಾಷ್ಟ್ರಧ್ವಜದ ಹೇಳಿಕೆ ಇಟ್ಟುಕೊಂಡು ಎರಡು ದಿನಗಳ ಕಲಾಪವನ್ನು ಹಾಳುಗೆಡವಿದರು. ಇದನ್ನು ಒಪ್ಪಲು ಸಾಧ್ಯವೇ? ತಪ್ಪು ಎಂದಿದ್ದಕ್ಕೆ ಕಾಂಗ್ರೆಸ್ ನಾಯಕರು ಈಗ ಬೇರೆ ರಾಗ ಹಾಡುತ್ತಿದ್ದಾರೆ ಎಂದು ಅವರು ಹೇಳಿದರು.
ಕರಾವಳಿಯ ಒಂದು ಭಾಗದಲ್ಲಿ ಶುರುವಾದ ಹಿಜಾಬ್ ಗೊಂದಲ ಮತ್ತಿತರ ಭಾಗದವರಿಗೆ ಪ್ರೇರೇಪಣೆ ಕೊಟ್ಟಂತೆ ಆಗಿದೆ. ಆ ಪ್ರದೇಶದ ಕೆಲ ಭಾಗದಲ್ಲಿ ಮಕ್ಕಳು ಹಿಜಾಬ್ ಧರಿಸಿ ಶಾಲೆಗೆ ಹೋಗುತ್ತಿದ್ದರು. ತರಗತಿ ಪ್ರವೇಶ ಮಾಡುವ ಸಮಯದಲ್ಲಿ ಹಿಜಾಬ್ ತೆಗೆದು, ಮನೆಗೆ ಹೋಗುವಾಗ ಮತ್ತೆ ಧರಿಸಿ ಹೋಗುತ್ತಿದ್ದರು.
ಆರಂಭದಲ್ಲೇ ಚಿವುಟಿ ಹಾಕಬಹುದಾಗಿದ್ದ ವಿವಾದ ಎರಡು ಧರ್ಮದವರ ಸಂಘರ್ಷಕ್ಕೆ ಕಾರಣವಾಗಿದೆ. ಮಕ್ಕಳ ಮನಸ್ಸಲ್ಲಿ ದ್ವೇಷ ಭಿತ್ತಲಾಗಿದೆ. ಕೆಲ ಸಂಘಟನೆಗಳು ಇದನ್ನು ಮತಬ್ಯಾಂಕ್(Vote Bank) ಆಗಿ ಪರಿವರ್ತನೆ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಿವೆ. ಕಳೆದ ಎರಡು ದಿನಗಳಿಂದ ಎರಡು ಸದನದಲ್ಲಿ ಕಲಾಪಗಳು ಸ್ಥಗಿತಗೊಳಿಸುವ ಹಾಗೆ ಕಾಂಗ್ರೆಸ್ ನಡವಳಿಕೆ ಇದೆ. ಜನರು ಇದನ್ನು ಕ್ಷಮಿಸುವುದಿಲ್ಲ ಎಂದರು ಕುಮಾರಸ್ವಾಮಿ ಅವರು.
ಮಾಧ್ಯಮಗಳಲ್ಲಿ ಬಂದ ಈಶ್ವರಪ್ಪ ಅವರ ಪ್ರತಿಕ್ರಿಯೆ ಇವತ್ತಿನ ಈ ರೀತಿಯ ಕಲಾಪಗಳಿಗೆ ಕಾರಣವಾಗಿದೆ. ಅದಕ್ಕಿಂತಲೂ ಹೆಚ್ಚಿನ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಯಬೇಕಿತ್ತು. ಆದರೆ ಆಗಲಿಲ್ಲ. ಕಾರವಾರದ
ಸಂಸದರೊಬ್ಬರು ಹಿಂದೆ ದೇಶದ ಸಂವಿಧಾನ ಬದಲಾಯಿಸುತ್ತೇವೆ ಎಂಬಂತೆ ಮಾತನಾಡಿದ್ದರು. ಬಿಜೆಪಿಯವರ ಅಜೆಂಡಾಗಳೇ ಈ ರೀತಿ ಇವೆ. ಈ ದೇಶದಲ್ಲಿ ಹಿಂದೂಗಳು ಮಾತ್ರ ಬದುಕಬೇಕು ಎಂಬ ಅಜೆಂಡಾ ಇಟ್ಟುಕೊಂಡಿದ್ದಾರೆ ಅವರು. ಇಂತಹ ಭಾವನಾತ್ಮಕ ವಿಚಾರಗಳನ್ನು ಇಟ್ಟುಕೊಂಡೇ ಚುನಾವಣೆಗಳು ನಡೆಯುತ್ತಿವೆ ಎಂದು ಅವರು ಹೇಳಿದರು.
ಇದನ್ನೂ ಓದಿ : DK Shivakumar : 'ನಾವು ಬಚ್ಚಲು ಬಾಯಿ ಈಶ್ವರಪ್ಪನ ರಾಜೀನಾಮೆ ಕೇಳುತ್ತಿಲ್ಲ'
ಕೇಸರಿ(Kesari) ಎಂಬುದಕ್ಕೆ ನಮ್ಮ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನ ಇದೆ. ಅದರ ಬಗ್ಗೆ ನಮಗೂ ಪೂಜ್ಯ ಭಾವನೆ ಇದೆ. ಧಾರ್ಮಿಕ ಕ್ಷೇತ್ರದಲ್ಲಿ ಕಠಿಣ ಜೀವನಶೈಲಿ ರೂಢಿಸಿಕೊಂಡವರು ಕೇಸರಿ ಧರಿಸುತ್ತಾ ಇದ್ದರು. ಈಗ ಎಲ್ಲರ ಮೈಮೇಲೆ ಕೇಸರಿ ಹಾಕುವ ಕೆಲಸ ನಡೆಯುತ್ತಿದೆ. ಬಿಜೆಪಿ ಅಯೋಧ್ಯ ಮಂದಿರ ಕಟ್ಟುವ ಚಳುವಳಿ ಶುರು ಮಾಡಿದಾಗ ಈ ಬಳಸುವುದನ್ನು ಬಿಜೆಪಿ ಶುರು ಮಾಡಿದ್ದರು. ಭಾವನಾತ್ಮಕ ವಿಚಾರ ಮುಂದಿಟ್ಟುಕೊಂಡು ಬದಲಾವಣೆ ತರಲು ಅವರು ಹೊರಟಿದ್ದಾರೆ ಎಂದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.