ಬೆಂಗಳೂರು: ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರನ್ನು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಶುಕ್ರವಾರ ಭೇಟಿ ಮಾಡಿದ್ದು, ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.


COMMERCIAL BREAK
SCROLL TO CONTINUE READING

ಸೆಪ್ಟೆಂಬರ್‌ನಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲೆ ಸಿಎಂ ಬಿಎಸ್‌ವೈ(B.S.Yeddyurappa) ಅವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದರು. ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಉಭಯರ ನಡುವೆ ಮಾತುಕತೆ ನಡೆದಿತ್ತು. ಅಧಿವೇಶನ ನಡೆಯುವಾಗ ವಿಧಾನಸೌಧದ ಸಿಎಂ ಕೊಠಡಿಯಲ್ಲೂ ಇಬ್ಬರು ನಾಯಕರು ಮುಖಾಮುಖಿಯಾಗಿದ್ದರು.


ಬರಹಗಳ ಮೂಲಕವೇ ಬೆರಗು ಮೂಡಿಸಿದ್ದ 'ಅಕ್ಷರ ಮಾಂತ್ರಿಕ' ರವಿ ಬೆಳಗೆರೆ ಇನ್ನಿಲ್ಲ


ಉಪಚುನಾವಣೆ ಬಳಿಕ ಇಬ್ಬರು ನಾಯಕರ ಮುಖಾಮುಖಿಯಾಗಿದ್ದು, ಜತೆಗೆ ಮೇಲುಕೋಟೆ ಶಾಸಕ ಸಿ.ಎಸ್‌.ಪುಟ್ಟರಾಜು ಜತೆಗಿದ್ದರು. ಇಬ್ಬರೂ ನಾಯಕರು ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದರು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.


ನೀವು ಆಲೂಗಡ್ಡೆ ಬೆಳೆಗಾರರೇ? ಹಾಗಿದ್ದಲ್ಲಿ ಈ ಸಂರಕ್ಷಣಾ ಕ್ರಮಗಳನ್ನು ಅನುಸರಿಸಲೇಬೇಕು..!