ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

HD Kumaraswamy: ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಕಳೆದ ಎರಡು ದಿನಗಳಿಂದ ಪಠ್ಯ ಪುಸ್ತಕ ವಿಚಾರದಲ್ಲಿ ಗೊಂದಲ ಇದೆ. ನಾಡಗೀತೆ ವಿಚಾರದಲ್ಲಿ ಹಲವು ರೀತಿ ಕೆಟ್ಟ ಬೆಳೆವಣಿಗೆಗಳು ಆಗುತ್ತಿವೆ. ನಾಡಗೀತೆಗೆ ಅವಮಾನ ಮಾಡಲಾಗುತ್ತಿದೆ ಎಂದು ಕುಮಾರಸ್ವಾಮಿ ಕಿಡಿ ಕಾರಿದರು.

Written by - Prashobh Devanahalli | Edited by - Chetana Devarmani | Last Updated : May 24, 2022, 03:51 PM IST
  • ಕಳೆದ ಎರಡು ದಿನಗಳಿಂದ ಪಠ್ಯ ಪುಸ್ತಕ ವಿಚಾರದಲ್ಲಿ ಗೊಂದಲ ಇದೆ
  • ನಾಡಗೀತೆ ವಿಚಾರದಲ್ಲಿ ಹಲವು ರೀತಿ ಕೆಟ್ಟ ಬೆಳೆವಣಿಗೆಗಳು ಆಗುತ್ತಿವೆ
  • ನಾಡಗೀತೆಗೆ ಅವಮಾನ ಮಾಡಲಾಗುತ್ತಿದೆ
  • ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ  title=
ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ಪಠ್ಯ ಪುಸ್ತಕ ವಿಚಾರದಲ್ಲಿ ಗೊಂದಲ ಇದೆ. ನಾಡಗೀತೆ ವಿಚಾರದಲ್ಲಿ ಹಲವು ರೀತಿ ಕೆಟ್ಟ ಬೆಳೆವಣಿಗೆಗಳು ಆಗುತ್ತಿವೆ. ನಾಡಗೀತೆಗೆ ಅವಮಾನ ಮಾಡಲಾಗುತ್ತಿದೆ ಎಂದು ಕುಮಾರಸ್ವಾಮಿ ಕಿಡಿ ಕಾರಿದರು.

ಇದನ್ನೂ ಓದಿ: Achala Ekadashi: ಅಚಲ ಏಕಾದಶಿಯಂದು ಉಪವಾಸ ಮಾಡಿದ್ರೆ ಈ ಫಲಗಳು ಪ್ರಾಪ್ತಿ

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರವರ್ತಿ ಹೆಸರು ಹೇಳದೆಯೇ ತರಾಟೆಗೆ ತೆಗೆದುಕೊಂಡ ಹೆಚ್‌ಡಿಕೆ, ಹಿಂದೆ ಸಾಮಾಜಿಕ ಜಾಲತಾಣದಲ್ಲಿ ನಾಡಗೀತೆ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಸಮಿತಿ ಅಧ್ಯಕ್ಷನನ್ನಾಗಿ ಮಾಡಿರುವುದೇ ತಪ್ಪು. ಕುವೆಂಪು ಮತ್ತು ನಾಡಗೀತೆಗೆ ಅಪಮಾನ ಮಾಡಿದರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಯಾವುದೋ ಒಂದು ವಿಷಯಕ್ಕೆ ಟ್ವೀಟ್ ಮಾಡುವವರನ್ನು ಜೈಲಿಗೆ ಹಾಕ್ತೀರಾ. ಆದರೆ, ಇಂಥ ಮಹಾನ್ ಕವಿಯ ಬಗ್ಗೆ ಅವಹೇಳನ ಮಾಡಿದವನನ್ನು ಸುಮ್ಮನೆ ಬಿಟ್ಟಿದ್ದೀರಿ ಎಂದು ರೋಹಿತ್ ಚಕ್ರವರ್ತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Dangerous Apps: ಸ್ಮಾರ್ಟ್‌ಫೋನ್‌ನಲ್ಲಿರುವ ಈ 7 ಆ್ಯಪ್‌ಗಳು ನಿಮ್ಮ ಅಕೌಂಟ್ ಖಾಲಿ ಮಾಡಬಹುದು!

ಪಠ್ಯದಲ್ಲಿ ಕುವೆಂಪು ಬಗ್ಗೆ ಆಗಿರುವ ಅಪಮಾನವನ್ನು ಕೂಡಲೇ  ಸರಿಪಡಿಸಬೇಕು. ಇಲ್ಲವಾದರೆ, ಕನ್ನಡಿಗರ ಶಕ್ತಿ ಏನೆಂಬುದನ್ನು ಸರಕಾರ ನೋಡಬೇಕಾಗುತ್ತದೆ ಎಂದು ಕುಮಾರಸ್ವಾಮಿ ಅವರು ನೇರ ಎಚ್ಚರಿಕೆ ಕೊಟ್ಟರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News