ನೈತಿಕ ಪೊಲೀಸ್‌ಗಿರಿ ಸಮರ್ಥನೆ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ಬೊಮ್ಮಾಯಿಯವರೇ ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Written by - Zee Kannada News Desk | Last Updated : Oct 18, 2021, 10:25 AM IST
  • ನೈತಿಕ ಪೊಲೀಸ್‌ಗಿರಿ ಸಮರ್ಥಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ
  • ಕರ್ನಾಟಕವನ್ನು ಜಂಗಲ್ ರಾಜ್ಯ ಮಾಡಬೇಡಿ, ದಯವಿಟ್ಟು ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಆಗ್ರಹ
  • ಪೊಲೀಸರ ದಿರಿಸು ಬದಲಾಯಿಸಿರುವ ನೀವು ಅವರ ಕೈಗೆ ತ್ರಿಶೂಲ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟುಬಿಡಿ ಎಂದು ಟೀಕೆ
ನೈತಿಕ ಪೊಲೀಸ್‌ಗಿರಿ ಸಮರ್ಥನೆ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ title=
ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ನೈತಿಕ ಪೊಲೀಸ್‌ಗಿರಿ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ನೀಡಿರುವ ಹೇಳಿಕೆಗೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಕರ್ನಾಟಕವನ್ನು ಜಂಗಲ್ ರಾಜ್ಯ ಮಾಡಬೇಡಿ. ದಯವಿಟ್ಟು ರಾಜೀನಾಮೆ ಕೊಟ್ಟು ಮನೆಗೆ ಹೋಗಿ’ ಎಂದು ಆಗ್ರಹಿಸಿದ್ದಾರೆ   

‘ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಸಿಎಂ ಬಸವರಾಜ್ ಬೊಮ್ಮಾಯಿಯವರೇ? ಅವರ ಕೈಗೆ ತ್ರಿಶೂಲಗಳನ್ನೂಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟುಬಿಡಿ. ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ‌ ಕನಸು ನನಸಾಗಬಹುದು’ ಎಂದು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ ಸಿಬ್ಬಂದಿಯ ಫೋಟೋ ಹಂಚಿಕೊಂಡು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಬುರುಡೆ ರಾಮಯ್ಯನಿಗೆ ಗ್ರಾಮೀಣ ಸಂಸ್ಕೃತಿಯ ಅರಿವೇ ಇಲ್ಲ’

‘ಒಂದೆಡೆ ಅಮಾಯಕ ಯುವಕ-ಯುವತಿಯರ ಮೇಲೆ ಅನೈತಿಕ‌ ಪೊಲೀಸ್‌ಗಿರಿಯ ದೌರ್ಜನ್ಯ.... ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ... ಮತ್ತೊಂದೆಡೆ ಬಹಿರಂಗವಾಗಿ ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ.... ಇದಕ್ಕೆಲ್ಲ ಸಿಎಂ ಬೊಮ್ಮಾಯಿಯವರ ಬಹಿರಂಗ ಬೆಂಬಲ.. ರಾಜ್ಯದಲ್ಲಿ ಸರ್ಕಾರ ಇದೆಯೇ?’ ಎಂದು ಸಿದ್ದರಾಮಯ್ಯ(Siddaramaiah) ಪ್ರಶ್ನಿಸಿದ್ದಾರೆ.

‘ಗೂಂಡಾಗಿರಿಯನ್ನು ‘ಕ್ರಿಯೆಗೆ ಪ್ರತಿಕ್ರಿಯೆ’ ಎಂದು ಸಮರ್ಥಿಸಿದ ಸಿಎಂ ಬೊಮ್ಮಾಯಿಯವರ ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ  ಕಾಡಿನ‌ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ. ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ. ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಸಿಎಂ ಯೋಗಿ ಆದಿತ್ಯನಾಥ್ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ. ಬೊಮ್ಮಾಯಿಯವರೇ ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು(Chief Minister Resignation) ಪ್ರಜಾಪ್ರಭುತ್ವ ಉಳಿಸಿ’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮುಂದಿನ ಚುನಾವಣೆಗೆ ರಕ್ತದಿಂದ ನೆಲವನ್ನು ಹದಗೊಳಿಸಲು ಬಿಜೆಪಿ ಅಣಿಯಾಗುತ್ತಿದೆ: ಕಾಂಗ್ರೆಸ್ ಆರೋಪ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News