ಬೆಂಗಳೂರು : ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ  ಅನಾರೋಗ್ಯ ಕಾಣಿಸಿಕೊಂಡಿದೆ ಎಂದು ಅವರ ಆಪ್ತರಾಗಿರುವ ವೈದ್ಯ ಡಾ.ರವಿ ಕುಮಾರ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಅನಾರೋಗ್ಯ ಕಾಣಿಸಿಕೊಂಡ ಕಾರಣ ಅವರಿಗೆ ಕೋವಿಡ್ ಟೆಸ್ಟ್(Covid Test) ಕೂಡ ಮಾಡಿಸಲಾಗಿದೆ. ಸೋಮವಾರ ರಾತ್ರಿಯಿಂದ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.


ಇದನ್ನೂ ಓದಿ : Covid Relief Package : ರಾಜ್ಯದ ಖಾಸಗಿ ಶಾಲಾ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಸರ್ಕಾರದಿಂದ ವಿಶೇಷ ಪ್ಯಾಕೇಜ್!


ಸೋಮವಾರ ರಾತ್ರಿ ತೀವ್ರ ಜ್ವರ ಕಾಣಿಸಿಕೊಂಡಿದೆ, ಈ ಹಿನ್ನೆಲೆಯಲ್ಲಿ ಕೋರೋಣ ಟೆಸ್ಟ್ ಕೂಡ ಮಾಡಿಸಲಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ(Siddaramaiah) ಅವರ ಆಪ್ತ ವೈದ್ಯ ಡಾ. ರವಿ ಕುಮಾರ್ ಅವರು ಆರೋಗ್ಯ ತಪಾಸಣೆ ನಡೆಸಿದ್ದು, ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ.


ಇದನ್ನೂ ಓದಿ : Heavy Rainfall : ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರೀ ಮಳೆ..!


ಸದ್ಯ ವಿಶ್ರಾಂತಿ ಪಡೆಯುತ್ತಿರುವ ಕಾರಣದಿಂದಾಗಿ ಅವರ ಎರಡು ದಿನಗಳ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಇಂದು ಬೆಂಗಳೂರಿನ ಅನೇಕ ಕ್ಷೇತ್ರಗಳಿಗೆ ತೆರಳಿ ಉಚಿತ ದಿನಸಿ ಕಿಟ್ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವೀಗ ರದ್ದು ಮಾಡಲಾಗಿದೆ. ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಬೆಂಗಳೂರಿನ ವಿವಿಧೆಡೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ಕಿಟ್ ವಿತರಣೆ ಮಾಡಲಿದ್ದಾರೆ.


ಇದನ್ನೂ ಓದಿ : DK Shivakumar : ಹುಬ್ಬಳ್ಳಿ-ಧಾರಾವಾಡ ರೈತರೊಂದಿಗೆ ಸಂವಾದ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ 


ಜ್ವರ(Fever) ಇರುವ ಕಾರಣದಿಂದಾಗಿ ತಮ್ಮ ನಿವಾಸದಲ್ಲಿಯೂ ಯಾರನ್ನೂ ಭೇಟಿ ಮಾಡದಿರಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ