ಬೆಂಗಳೂರು: ಸುಳ್ಳು ಹೇಳುವುದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah)ರಿಗೆ ಪಿಎಚ್‌ಡಿ ನೀಡಬಹುದು ಎಂದು ಕರ್ನಾಟಕ ಬಿಜೆಪಿ ಟೀಕಿಸಿದೆ. #ಬುರುಡೆರಾಮಯ್ಯ ಹ್ಯಾಶ್ ಟ್ಯಾಗ್ ಬಳಿಸಿ ಶನಿವಾರ ಟ್ವೀಟ್ ಮಾಡುವ ಮೂಲಕ ಬಿಜೆಪಿ ವಿಪಕ್ಷ ನಾಯಕನ ಹೇಳಿಕೆಗೆ ತಿರುಗೇಟು ನೀಡಿದೆ.
ಅಧಿಕಾರಾವಧಿಯ ಕೊನೆಯಲ್ಲಿ "ಮುಖ್ಯಮಂತ್ರಿ 1 ಲಕ್ಷ ಮನೆ" ಯೋಜನೆಯನ್ನು ಬೆಂಗಳೂರು ನಗರದ ಬಡವರಿಗೆ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು.
ಆದರೆ ಬಜೆಟ್‌ನಲ್ಲಿ ಸೂಕ್ತ ಅನುದಾನ ಕಾಯ್ದಿರಿಸಲಿಲ್ಲ. ಮನೆಕಟ್ಟುವುದಕ್ಕೆ ಆಯ್ದುಕೊಂಡ ಜಾಗವೇ ವಿವಾದಗ್ರಸ್ಥವಾಗಿತ್ತು.
ಸುಳ್ಳು ಹೇಳುವುದರಲ್ಲಿ @siddaramaiah ಗೆ ಪಿಎಚ್‌ಡಿ ನೀಡಬಹುದು.#ಬುರುಡೆರಾಮಯ್ಯ
— BJP Karnataka (@BJP4Karnataka) October 23, 2021
‘ಅಧಿಕಾರಾವಧಿಯ ಕೊನೆಯಲ್ಲಿ ‘ಮುಖ್ಯಮಂತ್ರಿ 1 ಲಕ್ಷ ಮನೆ’ ಯೋಜನೆಯನ್ನು ಬೆಂಗಳೂರು ನಗರದ ಬಡವರಿಗೆ ಸಿದ್ದರಾಮಯ್ಯ(Siddaramaiah) ಘೋಷಣೆ ಮಾಡಿದ್ದರು. ಆದರೆ ಬಜೆಟ್‌ನಲ್ಲಿ ಸೂಕ್ತ ಅನುದಾನ ಕಾಯ್ದಿರಿಸಲಿಲ್ಲ. ಮನೆಕಟ್ಟುವುದಕ್ಕೆ ಆಯ್ದುಕೊಂಡ ಜಾಗವೇ ವಿವಾದಗ್ರಸ್ಥವಾಗಿತ್ತು. ಸುಳ್ಳು ಹೇಳುವುದರಲ್ಲಿ ಸಿದ್ದರಾಮಯ್ಯರಿಗೆ ಪಿಎಚ್‌ಡಿ(Phd) ನೀಡಬಹುದು’ ಅಂತಾ ಬಿಜೆಪಿ ಕುಟುಕಿದೆ.
ಇದನ್ನೂ ಓದಿ: Karnataka Rain: ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಮಳೆ ಅಬ್ಬರ, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಇನ್ನೆಷ್ಟು ದಿನ ಸಂತೆ ಭಾಷಣ ಹೊಡೆಯುತ್ತೀರಿ @siddaramaiah?
ನೀವು ಘೋಷಣೆ ಮಾಡಿದ 15 ಲಕ್ಷ ಮನೆ ಎಲ್ಲಿದೆ?
ಭೂಮಿಯ ಮೇಲಿದೆಯೋ, ಮಂಗಳ ಗ್ರಹದಲ್ಲಿದೆಯೋ?ಕೇವಲ ಘೋಷಣೆ ಮಾಡಿದ ಮಾತ್ರಕ್ಕೆ ಮನೆ ನಿರ್ಮಾಣವಾಗುತ್ತದೆಯೇ? ಮಂತ್ರಕ್ಕೆ ಮಾವಿನ ಕಾಯಿ ಉದುರುತ್ತದೆಯೇ?#ಬುರುಡೆರಾಮಯ್ಯ
— BJP Karnataka (@BJP4Karnataka) October 23, 2021
‘ಇನ್ನೆಷ್ಟು ದಿನ ಸಂತೆ ಭಾಷಣ ಹೊಡೆಯುತ್ತೀರಿ ಸಿದ್ದರಾಮಯ್ಯ? ನೀವು ಘೋಷಣೆ ಮಾಡಿದ 15 ಲಕ್ಷ ಮನೆ ಎಲ್ಲಿದೆ? ಭೂಮಿಯ ಮೇಲಿದೆಯೋ, ಮಂಗಳ ಗ್ರಹದಲ್ಲಿದೆಯೋ? ಕೇವಲ ಘೋಷಣೆ ಮಾಡಿದ ಮಾತ್ರಕ್ಕೆ ಮನೆ ನಿರ್ಮಾಣವಾಗುತ್ತದೆಯೇ? ಮಂತ್ರಕ್ಕೆ ಮಾವಿನ ಕಾಯಿ ಉದುರುತ್ತದೆಯೇ?’ ಅಂತಾ ಬಿಜೆಪಿ(Karnataka BJP) ವ್ಯಂಗ್ಯವಾಡಿದೆ.
ಸಿದ್ದರಾಮಯ್ಯ ಅವರೇ,
ಕೃಷ್ಣಾ ಕಣಿವೆ ನೀರಾವರಿ ಯೋಜನೆಗೆ ವಾರ್ಷಿಕ 10 ಸಾವಿರ ಕೋಟಿ ಅನುದಾನ ನೀಡುತ್ತೇನೆಂದು ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಪಾದಯಾತ್ರೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದಿರಿ.
ಆದರೆ ಕೊಟ್ಟಿದ್ದು ಬಿಡಿಗಾಸು.
ಅಂಗೈಯಲ್ಲಿ ಆಕಾಶ ತೋರಿಸುವ ವಿಚಾರದಲ್ಲಿ ನೀವು ಪ್ರವೀಣರಲ್ಲವೇ @siddaramaiah?#ಬುರುಡೆರಾಮಯ್ಯ
— BJP Karnataka (@BJP4Karnataka) October 23, 2021
‘ಸಿದ್ದರಾಮಯ್ಯ ಅವರೇ ಕೃಷ್ಣಾ ಕಣಿವೆ ನೀರಾವರಿ ಯೋಜನೆಗೆ ವಾರ್ಷಿಕ 10 ಸಾವಿರ ಕೋಟಿ ರೂ. ಅನುದಾನ ನೀಡುತ್ತೇನೆಂದು ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಪಾದಯಾತ್ರೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದಿರಿ. ಆದರೆ ಕೊಟ್ಟಿದ್ದು ಬಿಡಿಗಾಸು. ಅಂಗೈಯಲ್ಲಿ ಆಕಾಶ ತೋರಿಸುವ ವಿಚಾರದಲ್ಲಿ ನೀವು ಪ್ರವೀಣರಲ್ಲವೇ ಸಿದ್ದರಾಮಯ್ಯ?’ ಎಂದು ಬಿಜೆಪಿ(BJP) ಪ್ರಶ್ನಿಸಿದೆ.
ಇದನ್ನೂ ಓದಿ: ಸಿದ್ದರಾಮಯ್ಯ ರಾಜ್ಯದ ಜನತೆಯ ದಾರಿ ತಪ್ಪಿಸುತ್ತಿದ್ದಾರೆ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಾಗ್ದಾಳಿ
ಸಿದ್ದರಾಮಯ್ಯನವರಿಂದ ಬಹಿರಂಗ್ ಸವಾಲ್!
ರಾಜ್ಯದಲ್ಲಿ ಹಾನಗಲ್ ಮತ್ತು ಸಿಂದಗಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ(Hangal and Sindgi bypolls) ಕಾವು ಹೆಚ್ಚಾಗಿದೆ. ಮೂರೂ ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುತ್ತಾ ಪ್ರಚಾರ ಕಣದಲ್ಲಿ ಮತಯಾಚಿಸುತ್ತಿದ್ದಾರೆ. ಹಾನಗಲ್ ಮತ್ತು ಸಿಂದಗಿ ಉಪಚುನಾವಣೆಯು ಆಡಳಿತ ಮತ್ತು ವಿಪಕ್ಷಗಳ ಪಾಲಿಗೆ ಪ್ರತಿಷ್ಠೆಯ ಕಣವಾಗಿದೆ. ಹೀಗಾಗಿ ಕಾಂಗ್ರೆಸ್-ಬಿಜೆಪಿ ನಾಯಕರ ಮಧ್ಯೆ ಮಾತಿನ ಜಟಾಪಟಿ ನಡಿಯುತ್ತಿದ್ದು, ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ.
ನಾವು ಜನರಿಗೆ 15 ಲಕ್ಷ ಮನೆ ಕಟ್ಟಿಕೊಟ್ಟಿದ್ದೇವೆ. ನೀವು ಒಂದೇ ಒಂದು ಮನೆ ಕಟ್ಟಿಸಿಕೊಡಲು ಆಗಿಲ್ಲ. ಈ ವಿಚಾರದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಜೊತೆ ಬಹಿರಂಗ ಚರ್ಚೆಗೆ ನಾನು ಸಿದ್ಧವೆಂದು ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ. ಇದಕ್ಕೆ ಕಾಗದದಲ್ಲಿ ಹೇಳಿದರೆ ಸಾಕೇ? ಅದಕ್ಕೆ ದುಡ್ಡು ಇಡಬೇಕಲ್ಲಾ? ಎಂದು ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಇದಕುತ್ತರಿಸಿರುವ ಸಿದ್ದರಾಮಯ್ಯ, ಬೊಮ್ಮಾಯಿ ಖಾಲಿ ಡಬ್ಬಾ. ರಾಜ್ಯವನ್ನು ನರಕ ಮಾಡಿದ್ದಾರೆ ಅಂತಾ ಕಿಡಿಕಾರಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ