ಬೆಂಗಳೂರು: ವಿವಾದಿತ ಜಮೀನಿನಲ್ಲಿ ನಿರ್ಮಾಣ ಅಗುತ್ತಿರುವ ರಾಮ ಮಂದಿರಕ್ಕೆ ನಾನು ದುಡ್ಡು ಕೊಡಲ್ಲ. ಅಯೋಧ್ಯೆಯಲ್ಲಿನ ವಿವಾದಿತ ಜಾಗ ಬಿಟ್ಟು ಬೇರೆ ಬೇರೆ ಎಲ್ಲಿಯಾದರೂ ನಿರ್ಮಾಣ ಮಾಡುವುದಿದ್ದರೆ ದೇಣಿಗೆ ಕೊಡುತ್ತೇನೆ ಎಂದು ಇತ್ತೀಚಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಇದೀಗ ನಾನು ದುಡ್ಡು ಕೊಡಲಿ ಬಿಡಲಿ. ನಾನು ಈ ದೇಶದ ಪ್ರಜೆ. ಜನರು ರಾಮಮಂದಿರಕ್ಕೆ ಹಣ ನೀಡುತ್ತಿದ್ದಾರೆ, ಅದು ಬಿಜೆಪಿಗಾಗಿ ಅಲ್ಲ. ಲೆಕ್ಕ ಕೇಳುವ ಅಧಿಕಾರ ನನಗೆ ಇದೆ ಎಂದಿದ್ದಾರೆ. 


COMMERCIAL BREAK
SCROLL TO CONTINUE READING

ಮೈಸೂರಿನಲ್ಲಿ ಶನಿವಾರ ಮಾತನಾಡಿದ ಸಿದ್ದರಾಮಯ್ಯ(Siddaramaiah), ದೇವರು ಅನ್ನೋದು ಜನರಿಗೆ ಭಯ ಭಕ್ತಿಯ ಸಂಕೇತ. ರಾಮ ಜನರ ಧಾರ್ಮಿಕ ನಂಬಿಕೆ. ಎಲ್ಲಾ ಕಡೆಯೂ ಜನ ರಾಮ ಮಂದಿರ ಕಟ್ಟುತ್ತಾರೆ ಅದರಲ್ಲೇನಿದೆ? ನಾನು ನನ್ನ ಹುಟ್ಟೂರಿನಲ್ಲೂ ರಾಮ ಮಂದಿರ ಕಟ್ಟಿಸುತ್ತಿದ್ದೇನೆ ಎಂದು ಮಾಹಿತಿ ನೀಡಿದರು.


Sarkari Naukri 2021: ಈ ನೇರ ಲಿಂಕ್‌ನೊಂದಿಗೆ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಶೀಘ್ರದಲ್ಲೇ ಅರ್ಜಿ ಸಲ್ಲಿಸಿ


ನನ್ನ ಹುಟ್ಟೂರಿನಲ್ಲಿ ನಾನು ಕಟ್ಟಿಸುತ್ತಿರುವ ರಾಮ ಮಂದಿರ(Ram Mandira)ಕ್ಕೆ ಜನರು ವಂತಿಗೆ ನೀಡುತ್ತಿದ್ದಾರೆ. ಎಷ್ಟು ವೆಚ್ಚ ಎನ್ನುವುದರ ಬಗ್ಗೆ ಹೇಳಲು ಸಾಧ್ಯವಿಲ್ಲ. ಇದನ್ನು ಅವರು ರಾಜಕಾರಣಕ್ಕೆ ಬಳಸುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದರು.


Kota Srinivas Poojary: ಸಚಿವ ಕೋಟ ಶ್ರೀನಿವಾಸ್​ ಪೂಜಾರಿ ಕಾರ್​ಗೆ KSRTC ಬಸ್​ ಡಿಕ್ಕಿ..!


ಜನರು ಅಯೋಧ್ಯೆಯಲ್ಲಿನ ರಾಮಮಂದಿರಕ್ಕೆ ಹಣ(Money) ನೀಡುತ್ತಿದ್ದಾರೆಯೇ ಹೊರತು ಅದು ಬಿಜೆಪಿಗಾಗಿ ಅಲ್ಲ. ಈ ಬಗ್ಗೆ ಲೆಕ್ಕ ಕೇಳುವ ಅಧಿಕಾರ ನನಗೆ ಇದೆ. ನಾನು ಈ ದೇಶದ ಪ್ರಜೆ. ಲೆಕ್ಕ ಕೊಡಬೇಕಾಗಿರುವುದು ಅವರ ಕೆಲಸ. ಕೇಳುವುದು ನಮ್ಮ ಹಕ್ಕು. ಲೆಕ್ಕ ಕೊಡಲು ಹಿಂದೇಟು ಹಾಕುತ್ತಿದ್ದಾರೆ ಎಂದರೆ ಅದರ ಅರ್ಥ ಹಣ ದುರುಪಯೋಗ ಆಗುತ್ತಿದೆ ಎಂದು. ಈ ಹಿಂದೆಯೂ ಅವರು ದೇಣಿಗೆ ಸಂಗ್ರಹಿಸಿ ಲೆಕ್ಕ ಕೊಟ್ಟಿಲ್ಲ. ಇದರ ಅರ್ಥ ಏನೆಂದು ಅವರೇ ಹೇಳಬೇಕು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.


Siddaramaiah: '2 ವರ್ಷದಲ್ಲಿ ಮತ್ತೆ ಅಧಿಕಾರಕ್ಕೆ ಬರ್ತೀವಿ, ಪ್ರತಿಯೊಬ್ಬಗೂ 10ಕೆಜಿ ಅಕ್ಕಿ ಕೊಡ್ತೀನಿ'


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.