ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವುದು ಖಚಿತವಾಗಿರಬೇಕು. ಹೀಗಾಗಿ ಅವರು ತರಾತುರಿಯಲ್ಲಿ ನಿಗಮ ಮಂಡಳಿಗಳಿಗೆ ನೇಮಕ ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ನಗರದಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಸಿದ್ದರಾಮಯ್ಯ(Siddaramaiah), ಆರ್ಥಿಕ ಸಂಕಷ್ಟದ ನಡುವೆಯೂ ನಿಗಮ-ಮಂಡಳಿ ನೇಮಕ ಮಾಡಿ ಕುರ್ಚಿ ಉಳಿಸಿಕೊಳ್ಳುವ ಕಸರತ್ತು ನಡೆಸಿದ್ದಾರೆ. ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವ ಆತಂಕವಿದೆ. ಹೀಗಾಗಿ ಯಡಿಯೂರಪ್ಪ ತರಾತುರಿಯಲ್ಲಿ ನಿಗಮ ಮಂಡಳಿಗಳಿಗೆ ನೇಮಕ ಮಾಡಿದ್ದಾರೆ. ರಾಜ್ಯದಲ್ಲಿ ಹಣಕಾಸಿನ ಮುಗ್ಗಟ್ಟು ಇರುವಾಗ ನಿಗಮ ಮಂಡಳಿಗಳೀಗೆ ನೇಮಕ ಮಾಡಿರುವುದು ರಾಜ್ಯಕ್ಕೆ ಎಸಗಿರುವ ದ್ರೋಹ ಎಂದರು.


‘ಸಿ.ಪಿ.ಯೋಗೇಶ್ವರ್ ಗೆ ಸಚಿವ ಸ್ಥಾನ ಕೊಡುವವರೆಗೂ ಹೋರಾಟ ಮಾಡುತ್ತೇನೆ’


ಖಾಸಗಿ ಶಿಕ್ಷಣ ಸಂಸ್ಥೆಗಳು ಶುಲ್ಕ ನೀಡದೇ ಹೋದಲ್ಲಿ ಆನ್ಲೈನ್ ತರಗತಿ ಸೌಲಭ್ಯ ನೀಡದೇ ಇರುವುದು ಸರಿಯಲ್ಲ. ಸರ್ಕಾರ ಖಾಸಗಿ ಶಾಲೆಗಳ ಜೊತೆ ಶಾಮೀಲಾಗಿದ್ದು, ಹೀಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರ ರಕ್ಷಣೆಗಾಗಿ ಏನೂ ಮಾಡುತ್ತಿಲ್ಲ. ಇದು ಬರೀ ಲೂಟಿ ಸರ್ಕಾರ. ಯಡಿಯೂರಪ್ಪ ಸರ್ಕಾರ ಲೂಟಿ ಸರ್ಕಾರ ಎಂದು ಸಿದ್ದರಾಮಯ್ಯ ಟೀಕಿಸಿದರು.


ಗದಗ ಬಸ್ ನಿಲ್ದಾಣಕ್ಕೆ ಪಂ.ಪುಟ್ಟರಾಜ ಗವಾಯಿಗಳ ಹೆಸರು ನಾಮಕರಣ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ