Siddaramaiah: ಸಿಎಂ ಬಿಎಸ್ ವೈರನ್ನ ಕುಟುಕಿದ ಸಿದ್ದರಾಮಯ್ಯ..!

ಜನರ ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗ ಮುಖಂಡನ ಸಾಧನೆ ಎಂದು ಹೇಳಿಕೊಳ್ಳಲು ಅವರು ಯಾಕೋ ಮರೆತಿದ್ದಾರೆ.

Last Updated : Jan 13, 2021, 06:11 PM IST
  • ಗೋಮಾಂಸ ತಿನ್ನುವುದೇ ಮೈಸೂರು ಮುಖಂಡನ ಸಾಧನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಆದರೆ ನಾನು ಈವರೆಗೆ ಗೋಮಾಂಸವನ್ನು ತಿಂದಿಲ್ಲ.
  • ಜನರ ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗ ಮುಖಂಡನ ಸಾಧನೆ ಎಂದು ಹೇಳಿಕೊಳ್ಳಲು ಅವರು ಯಾಕೋ ಮರೆತಿದ್ದಾರೆ.
  • ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಕಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
Siddaramaiah: ಸಿಎಂ ಬಿಎಸ್ ವೈರನ್ನ ಕುಟುಕಿದ ಸಿದ್ದರಾಮಯ್ಯ..! title=

ಬೆಂಗಳೂರು: ಗೋಮಾಂಸ ತಿನ್ನುವುದೇ ಮೈಸೂರು ಮುಖಂಡನ ಸಾಧನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಆದರೆ ನಾನು ಈವರೆಗೆ ಗೋಮಾಂಸವನ್ನು ತಿಂದಿಲ್ಲ. ಜನರ ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗ ಮುಖಂಡನ ಸಾಧನೆ ಎಂದು ಹೇಳಿಕೊಳ್ಳಲು ಅವರು ಯಾಕೋ ಮರೆತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ(BJP)ವರು ಒಂದು ಕಡೆ ವಿಶ್ವಮಾನವರಾಗಿ ಅಂತನೂ ಹೇಳ್ತಾರೆ, ಇನ್ನೊಂದು ಕಡೆ ಕುರಿ, ಕೋಳಿ, ಗೋಮಾಂಸ ತಿನ್ನುವವರ ವಿರುದ್ಧ ದ್ವೇಷವನ್ನೂ ಕಾರುತ್ತಾರೆ. ವಿಶ್ವಮಾನವನಾಗುವುದು ಎಂದರೆ ಪ್ರತಿ ವ್ಯಕ್ತಿಯ ಸಂಸ್ಕೃತಿ, ಆಹಾರ, ಆಚರಣೆಗಳನ್ನು ಗೌರವಿಸಿ, ಅವರಿದ್ದಂತೆ ಅವರನ್ನು ಒಪ್ಪಿಕೊಳ್ಳುವುದು ಎಂದು ಹೇಳಿದ್ದಾರೆ.

Sa Ra Mahesh: 'ಚಾಮುಂಡೇಶ್ವರಿ ಶಾಪದಿಂದಲೇ ವಿಶ್ವನಾಥ್ ಸಚಿವರಾಗಲಿಲ್ಲ'

ನಮ್ಮ ಪಕ್ಷದ ಶಾಸಕರನ್ನು ಖರೀದಿಸಿ ಅವರ ಬಲದಿಂದ ಅಧಿಕಾರ ಅನುಭವಿಸುತ್ತಿರುವ ಯಡಿಯೂರಪ್ಪ ಅವರು ಕಾಂಗ್ರೆಸ್ ಪಕ್ಷಕ್ಕೆ ನಾಯಕರಿಲ್ಲ ಎಂದು ಹೇಳುತ್ತಿರುವುದು ತಮಾಷೆಯಾಗಿದೆ. ಸ್ವಂತಬಲದಲ್ಲಿ ಚುನಾವಣೆ ಗೆದ್ದು ಪೂರ್ಣಾವಧಿ ಸರ್ಕಾರ ನಡೆಸಿದ್ದು ಕಾಂಗ್ರೆಸ್ ಪಕ್ಷ. ಅವರೇನಾದರೂ ಒಂದೈದು ಪೂರ್ತಿ ವರ್ಷ ಮುಖ್ಯಮಂತ್ರಿಯಾಗಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.

'CD' ಇಟ್ಟುಕೊಂಡು ಸಿಎಂ ಬಿಎಸ್‌ವೈಗೆ ಬ್ಲ್ಯಾಕ್ ಮೇಲ್..!

ಕಳೆದ 48 ದಿನಗಳಿಂದ ದೆಹಲಿಯಲ್ಲಿ ರೈತರು ಮಳೆ, ಚಳಿ, ಹಸಿವು ಯಾವುದನ್ನೂ ಲೆಕ್ಕಿಸದೆ ಬೀದಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಅವರ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಾ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹಠಮಾರಿ ಧೋರಣೆಯೇ ರೈತರ ಎಲ್ಲ ಕಷ್ಟ-ನಷ್ಟಗಳಿಗೆ ನೇರ ಕಾರಣ.

Ramesh Jarkiholi: ಮಾರ್ಚ್- ಏಪ್ರಿಲ್‌ನಲ್ಲಿ ಮತ್ತೆ ಸಂಪುಟ ಪುನಃರಚನೆ: ಹೊಸಬಾಂಬ್ ಸಿಡಿಸಿದ ಜಾರಕಿಹೊಳಿ‌

ಸುಪ್ರೀಂ ಕೋರ್ಟ್ ಕೇಂದ್ರದ ನೂತನ ಕೃಷಿ ಕಾಯ್ದೆಗಳಿಗೆ ತಡೆ ನೀಡಿದೆಯೆಂದರೆ ಆ ಮಸೂದೆಗಳು ಸಂವಿಧಾನಕ್ಕೆ ವಿರುದ್ಧವಾಗಿವೆ ಎಂದರ್ಥ. ಅದೇ ನ್ಯಾಯಾಲಯ ರೈತರಿಗೆ ಪ್ರತಿಭಟನೆ ಮುಂದುವರೆಸಲು ಅವಕಾಶ ಕಲ್ಪಿಸಿ ತೀರ್ಪು ನೀಡಿದೆ ಎಂದರೆ ಅವರ ಬೇಡಿಕೆಗಳು ನ್ಯಾಯಬದ್ಧವಾಗಿವೆ ಎಂದರ್ಥ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

BJP: ಸಿಎಂ ಬಿಎಸ್ ವೈಗೆ ಸಂಕಟ: ಬಿಜೆಪಿ ಪಕ್ಷದೊಳಗೆ ಅಸಮಾಧಾನ ಸ್ಪೋಟ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News