Veerendra Patil Wife Passes Away: ಮಾಜಿ ಸಿಎಂ ವೀರೇಂದ್ರ ಪಾಟೀಲ್ ಪತ್ನಿ ಶಾರದಾ ಪಾಟೀಲ್ ನಿಧನ

Veerendra Patil's Wife Passes Away: ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಸೋಮವಾರ ಬೆಳಗ್ಗೆ ಶಾರದಾ ಪಾಟೀಲ್​ ಅವರು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 93 ವರ್ಷ ವಯಸ್ಸು ಆಗಿತ್ತು.

Written by - Puttaraj K Alur | Last Updated : Sep 26, 2023, 07:31 PM IST
  • ಮಾಜಿ ಸಿಎಂ ದಿವಂಗತ ವೀರೇಂದ್ರ ಪಾಟೀಲ್ ಅವರ ಪತ್ನಿ ಶಾರದಾ ಪಾಟೀಲ್ ನಿಧನ
  • ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಾರದಾ ಪಾಟೀಲ್​ 93ನೇ ವಯಸ್ಸಿನಲ್ಲಿ ವಿಧಿವಶ
  • ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರಿಂದ ಸಂತಾಪ ಸೂಚನೆ
Veerendra Patil Wife Passes Away: ಮಾಜಿ ಸಿಎಂ ವೀರೇಂದ್ರ ಪಾಟೀಲ್ ಪತ್ನಿ ಶಾರದಾ ಪಾಟೀಲ್ ನಿಧನ title=
ವೀರೇಂದ್ರ ಪಾಟೀಲ್ ಪತ್ನಿ ನಿಧನ 

ಬೆಂಗಳೂರು: ಮಾಜಿ ಸಿಎಂ ದಿವಂಗತ ವೀರೇಂದ್ರ ಪಾಟೀಲ್ ಅವರ ಪತ್ನಿ ಶಾರದಾ ಪಾಟೀಲ್ ನಿಧನರಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಸೋಮವಾರ ಬೆಳಗ್ಗೆ ಅವರು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಾರದಾ ಪಾಟೀಲ್​ ಅವರಿಗೆ 93 ವರ್ಷ ವಯಸ್ಸು ಆಗಿತ್ತು.

ಸೋಮವಾರ ಮಧ್ಯಾಹ್ನವೇ ತಂದೆ ವೀರೇಂದ್ರ ಪಾಟೀಲ್ ಅವರ ಸಮಾಧಿ ಪಕ್ಕ ತಾಯಿಯವರ ಅಂತ್ಯಕ್ರಿಯೆ ನಡೆದಿದೆ ಎಂದು ಪುತ್ರ ಕೈಲಾಶನಾಥ್ ಪಾಟೀಲ್ ತಿಳಿಸಿದ್ದಾರೆ. ವೀರೇಂದ್ರ ಪಾಟೀಲ್-ಶಾರದಾ ಪಾಟೀಲ್ ದಂಪತಿಗೆ ಕೈಲಾಶನಾಥ್ ಮತ್ತು ಇಬ್ಬರು ಪುತ್ರಿಯರಿದ್ದಾರೆ. 1968-1971ರ ಅವಧಿಯಲ್ಲಿ ವೀರೇಂದ್ರ ಪಾಟೀಲ್ ಅವರು ರಾಜ್ಯದ 7ನೇ ಮುಖ್ಯಮಂತ್ರಿಯಾಗಿದ್ದರು.

ಮೊದಲ ಬಾರಿ 33 ತಿಂಗಳು 10 ದಿನ ರಾಜ್ಯದ ಸಿಎಂ ಆಗಿ ಆಡಳಿತ ನಡೆಸಿದ್ದ ವಿರೇಂದ್ರ ಪಾಟೀಲ್, 18 ವರ್ಷಗಳ ನಂತರ 2ನೇ ಬಾರಿಗೆ 1989-1990ರ ಅವಧಿಯಲ್ಲಿ ಸಿಎಂ ಆಗಿದ್ದರು. ಮಾಜಿ ಸಿಎಂ ದಿ. ಎಸ್ ನಿಜಲಿಂಗಪ್ಪ ಸಂಪುಟದಲ್ಲಿ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದ ವೀರೇಂದ್ರ ಪಾಟೀಲ್, ಕಲಬುರಗಿ ಜಿಲ್ಲೆಯ ಚಿಂಚೋಳಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

ಇದನ್ನೂ ಓದಿ: ತಮಿಳುನಾಡು ಬೇಡಿಕೆ ತಿರಸ್ಕಾರ ಮಾಡಿದ್ದು ಸಂತಸ ತಂದಿದೆ: ಡಿ.ಕೆ.ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಸೇರಿ ರಾಜಕೀಯ ಗಣ್ಯರ ಸಂತಾಪ

ಶಾರದಾ ಪಾಟೀಲ್ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರ ಪತ್ನಿ ಶಾರದಾ ಪಾಟೀಲ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಶಾರದಾ ಪಾಟೀಲ್ ಅವರ ಅಗಲಿಕೆಯಿಂದ ನೊಂದಿರುವ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಸಿಗಲಿ’ ಎಂದು ಹೇಳಿದ್ದಾರೆ.

‘ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರ ಧರ್ಮಪತ್ನಿ ಶಾರದಾ ಪಾಟೀಲ ಅವರು ನಿಧನರಾದ ಸುದ್ದಿ ತಿಳಿದು ಬಹಳ ದುಃಖವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

‘ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ದಿವಂಗತ ವೀರೇಂದ್ರ ಪಾಟೀಲ್ ಅವರ ಶ್ರೀಮತಿ ಶಾರದಾ ಪಾಟೀಲ್ ರವರ ನಿಧನದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಅಗಲಿದ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತಾ, ದುಃಖತಪ್ತ ಕುಟುಂಬದವರಲ್ಲಿ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಓಂ ಶಾಂತಿ..’ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಡಿಎಂಕೆ ಯೋಗಕ್ಷೇಮಕ್ಕೆ ಕರ್ನಾಟಕದ ಹಿತ ಬಲಿ ಕೊಟ್ಟು ಕನ್ನಡಿಗರ ಮೇಲೆ ಬಂಡೆ ಎಳೆದ ‘ಕೈ’ಸರ್ಕಾರ: ಎಚ್‍ಡಿಕೆ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಸಂತಾಪ ವ್ಯಕ್ತಪಡಿಸಿದ್ದು, ‘ಮಾಜಿ ಮುಖ್ಯಮಂತ್ರಿ ವಿರೇಂದ್ರ ಪಾಟೀಲ್ ಅವರ ಪತ್ನಿ ಶಾರದಾ ಪಾಟೀಲ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ದೇವರು ಮೃತರ ಆತ್ಮಕ್ಕೆ ಶಾಂತಿ ದೊರಕಿಸಿಕೊಡಲಿ. ಅವರ ಕುಟುಂಬಕ್ಕೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ‌. ಓಂ ಶಾಂತಿಃ…’ ಎಂದು ಟ್ವೀಟ್ ಮಾಡಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News