ಬೆಂಗಳೂರು: ಮಾಜಿ ಸಿಎಂ ದಿವಂಗತ ವೀರೇಂದ್ರ ಪಾಟೀಲ್ ಅವರ ಪತ್ನಿ ಶಾರದಾ ಪಾಟೀಲ್ ನಿಧನರಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಸೋಮವಾರ ಬೆಳಗ್ಗೆ ಅವರು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಾರದಾ ಪಾಟೀಲ್​ ಅವರಿಗೆ 93 ವರ್ಷ ವಯಸ್ಸು ಆಗಿತ್ತು.


COMMERCIAL BREAK
SCROLL TO CONTINUE READING

ಸೋಮವಾರ ಮಧ್ಯಾಹ್ನವೇ ತಂದೆ ವೀರೇಂದ್ರ ಪಾಟೀಲ್ ಅವರ ಸಮಾಧಿ ಪಕ್ಕ ತಾಯಿಯವರ ಅಂತ್ಯಕ್ರಿಯೆ ನಡೆದಿದೆ ಎಂದು ಪುತ್ರ ಕೈಲಾಶನಾಥ್ ಪಾಟೀಲ್ ತಿಳಿಸಿದ್ದಾರೆ. ವೀರೇಂದ್ರ ಪಾಟೀಲ್-ಶಾರದಾ ಪಾಟೀಲ್ ದಂಪತಿಗೆ ಕೈಲಾಶನಾಥ್ ಮತ್ತು ಇಬ್ಬರು ಪುತ್ರಿಯರಿದ್ದಾರೆ. 1968-1971ರ ಅವಧಿಯಲ್ಲಿ ವೀರೇಂದ್ರ ಪಾಟೀಲ್ ಅವರು ರಾಜ್ಯದ 7ನೇ ಮುಖ್ಯಮಂತ್ರಿಯಾಗಿದ್ದರು.


ಮೊದಲ ಬಾರಿ 33 ತಿಂಗಳು 10 ದಿನ ರಾಜ್ಯದ ಸಿಎಂ ಆಗಿ ಆಡಳಿತ ನಡೆಸಿದ್ದ ವಿರೇಂದ್ರ ಪಾಟೀಲ್, 18 ವರ್ಷಗಳ ನಂತರ 2ನೇ ಬಾರಿಗೆ 1989-1990ರ ಅವಧಿಯಲ್ಲಿ ಸಿಎಂ ಆಗಿದ್ದರು. ಮಾಜಿ ಸಿಎಂ ದಿ. ಎಸ್ ನಿಜಲಿಂಗಪ್ಪ ಸಂಪುಟದಲ್ಲಿ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದ ವೀರೇಂದ್ರ ಪಾಟೀಲ್, ಕಲಬುರಗಿ ಜಿಲ್ಲೆಯ ಚಿಂಚೋಳಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.


ಇದನ್ನೂ ಓದಿ: ತಮಿಳುನಾಡು ಬೇಡಿಕೆ ತಿರಸ್ಕಾರ ಮಾಡಿದ್ದು ಸಂತಸ ತಂದಿದೆ: ಡಿ.ಕೆ.ಶಿವಕುಮಾರ್


ಸಿಎಂ ಸಿದ್ದರಾಮಯ್ಯ ಸೇರಿ ರಾಜಕೀಯ ಗಣ್ಯರ ಸಂತಾಪ


ಡಿಎಂಕೆ ಯೋಗಕ್ಷೇಮಕ್ಕೆ ಕರ್ನಾಟಕದ ಹಿತ ಬಲಿ ಕೊಟ್ಟು ಕನ್ನಡಿಗರ ಮೇಲೆ ಬಂಡೆ ಎಳೆದ ‘ಕೈ’ಸರ್ಕಾರ: ಎಚ್‍ಡಿಕೆ


ಬಸವರಾಜ ಬೊಮ್ಮಾಯಿ ಕೂಡ ಸಂತಾಪ ವ್ಯಕ್ತಪಡಿಸಿದ್ದು, ‘ಮಾಜಿ ಮುಖ್ಯಮಂತ್ರಿ ವಿರೇಂದ್ರ ಪಾಟೀಲ್ ಅವರ ಪತ್ನಿ ಶಾರದಾ ಪಾಟೀಲ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ದೇವರು ಮೃತರ ಆತ್ಮಕ್ಕೆ ಶಾಂತಿ ದೊರಕಿಸಿಕೊಡಲಿ. ಅವರ ಕುಟುಂಬಕ್ಕೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ‌. ಓಂ ಶಾಂತಿಃ…’ ಎಂದು ಟ್ವೀಟ್ ಮಾಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.