ಹಾವೇರಿ: ರಷ್ಯಾ ಮತ್ತು ಉಕ್ರೇನ್ ನಡುವೆ ನಡೆದ ಯುದ್ಧದ ಸಂದರ್ಭದಲ್ಲಿ ಶೆಲ್ ದಾಳಿಗೆ ಬಲಿಯಾಗಿದ್ದ ಹಾವೇರಿ ಜಿಲ್ಲೆಯ ರಾಣೆಬೆನ್ನೋರು ತಾಲೂಕಿನ ಚಳಗೇರಿ ಗ್ರಾಮದ ಯುವಕ ನವೀನ್ ನಿವಾಸಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ.
ನವೀನ್ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಯಡಿಯೂರಪ್ಪ "ನವೀನ್ (Naveen Gyanagoudar) ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ.ವಿಶೇಷ ವಿಮಾನದ ಮೂಲಕ ನಾವು ಡೆಡ್ ಬಾಡಿ ತರುವ ವಿಚಾರ ಮಾಡಿದ್ದೇವೆ.ಯುದ್ಧದ ಪರಿಸ್ಥಿತಿಯನ್ನು ನೋಡಿಕೊಂಡು ಮೃತ ದೇಹವನ್ನು ಅಲ್ಲಿಂದ ತರಲು ನಾನು ಮತ್ತು ಸಿಎಂ ಮಾತನಾಡಿದ್ದೇವೆ" ಎಂದು ಅವರು ಹೇಳಿದರು.
ಇದನ್ನೂ ಓದಿ: Russia Ukraine War: ಯುದ್ಧವು ನವೀನ್ ಕನಸನ್ನು ನುಚ್ಚುನೂರು ಮಾಡಿದೆ- ಎಚ್ಡಿಕೆ
ಇನ್ನೂ ಮುಂದುವರೆದು ಮಾತನಾಡಿದ ಅವರು 'ಕುಟುಂಬಸ್ತರ ಆಕ್ರಂದನಕ್ಕೆ ಶಬ್ದಗಳು ನಮಗೆ ಸಿಗುತ್ತಾ ಇಲ್ಲಾ, ಈಗ ಮುಖ್ಯಮಂತ್ರಿಗಳು 25 ಲಕ್ಷ ಪರಿಹಾರ ಕೊಡುವ ಬಗ್ಗೆ ತೀರ್ಮಾನ ಮಾಡಿದ್ದಾರೆ.ನಾಳೆ ಅವ್ರು ಇಲ್ಲಿಗೆ ಬಂದಾಗ ಪರಿಹಾರದ ಚೆಕ್ ಕೊಡುವ ಸಾಧ್ಯತೆ ಇದೆ ಎಂದು ಹೇಳಿದರು.
ಶೀಘ್ರದಲ್ಲೇ ನವೀನ್ ಅವರ ಮೃತದೇಹವನ್ನು ತರುವ ಎಲ್ಲ ಪ್ರಯತ್ನವನ್ನು ಮಾಡಲಾಗುವುದು, ಇದಕ್ಕಾಗಿ ಕೇಂದ್ರ ಸಚಿವರಷ್ಟೇ ಅಲ್ಲ ಸ್ವತಃ ಪ್ರಧಾನಿ ಮೋದಿ ಅವರೇ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಬಿಎಸ್ವೈ (B S Yeddyurappa) ತಿಳಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.