ಸಂಭಾವನೆ ಇಲ್ಲದೆ ದೊಡ್ಡ ಜವಾಬ್ದಾರಿ ವಹಿಸಿಕೊಂಡ ಅನಿಲ್ ಕುಂಬ್ಳೆ

Anil Kumble: ರಾಜ್ಯದಲ್ಲಿ ಹೆಸರಾಂತ ಮೈಸೂರ್ ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಿಸಿ ಭಾರೀ ಸಂಭಾವನೆ ನೀಡಿರುವ ವಿಷಯ ಚರ್ಚೆಗೆ ಗ್ರಾಸವಾಗಿರುವ ಹೊತ್ತಲ್ಲೇ, ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆಗೆ ಪಾತ್ರರಾದ ಖ್ಯಾತ ಕ್ರಿಕೆಟಿಗ ಅನಿಲ್ ಕುಂಬ್ಳೆ. 

Written by - Yashaswini V | Last Updated : May 28, 2025, 11:41 AM IST
  • ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ಖ್ಯಾತ ಕ್ರಿಕೆಟಿಗ ಮತ್ತು ಮಾಜಿ ಭಾರತ ಕ್ರಿಕೆಟ್ ತಂಡದ ನಾಯಕರಾದ ಅನಿಲ್ ಕುಂಬ್ಳೆ ಆಯ್ಕೆ
  • ಕುಂಬ್ಳೆ ಅವರು ಇತ್ತೀಚೆಗೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.
  • ಕ್ರಿಕೆಟ್ ಹೊರತಾಗಿ ವನ್ಯಜೀವಿ ಛಾಯಾಗ್ರಹಣ ಕೂಡ ಅನಿಲ್ ಕುಂಬ್ಳೆ ಅವರ ಆಸಕ್ತಿಯ ಕ್ಷೇತ್ರವಾಗಿದೆ.
ಸಂಭಾವನೆ ಇಲ್ಲದೆ ದೊಡ್ಡ ಜವಾಬ್ದಾರಿ ವಹಿಸಿಕೊಂಡ ಅನಿಲ್ ಕುಂಬ್ಳೆ

Anil Kumble: ಸದ್ಯ ಕರ್ನಾಟಕದ ಹೆಸರಾಂತ ಮೈಸೂರ್ ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ಕರ್ನಾಟಕ ಸರ್ಕಾರ ನಟಿ ತಮನ್ನಾ ಭಾತಿಯಾ ಅವರನ್ನು ಆಯ್ಕೆ ಮಾಡಿರುವ ವಿಷಯ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ, ಕ್ರಿಕೆಟ್ ದಿಗ್ಗಜ, ಹೆಮ್ಮೆಯ ಕನ್ನಡಿಗ ಅನಿಲ್ ಕುಂಬ್ಳೆ ರಾಜ್ಯದ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಅದೂ ಸಹ ನಯಾ ಪೈಸೆ ಸಂಭಾವನೆಯನ್ನೂ ಪಡೆಯದೆ ಈ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. 

Add Zee News as a Preferred Source

ಹೌದು, ಕರ್ನಾಟಕದ ಪಾರಂಪರಿಕ ಬ್ರ್ಯಾಂಡ್ ಎಂತಲೇ ಹೆಸರುವಾಸಿಯಾಗಿರುವ ಮೈಸೂರು ಸ್ಯಾಂಡಲ್ ಸೋಪ್ ಪ್ರಚಾರ ರಾಯಭಾರಿಯಾಗಲು ಕರ್ನಾಟಕ ಸರ್ಕಾರ,  ನಟಿ ತಮನ್ನಾ ಭಾಟಿಯಾ ಅವರಿಗೆ 6 ಕೋಟಿ ರೂಪಾಯಿಗೂ ಹೆಚ್ಚು ಸಂಭಾವನೆ ನೀಡಿರುವುದು ಸದ್ಯ ವಿವಾದಕ್ಕೀಡಾಗಿದೆ. ಇದಕ್ಕೆ ವಿರುದ್ಧವಾಗಿ, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಯಾವುದೇ ಸಂಭಾವನೆ ಪಡೆಯದೆ ರಾಜ್ಯದ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. 

ಇದನ್ನೂ ಓದಿ- ಬೇಕಿದ್ರೆ ಈ ನಟಿಯರನ್ನ ರಾಯಭಾರಿಯನ್ನಾಗಿ ಮಾಡಿ ತಮನ್ನಾ ಬೇಡ..! ಸರ್ಕಾರಕ್ಕೆ ಕನ್ನಡಪರ ಸಂಘಟನೆಗಳಿಂದ ಎಚ್ಚರಿಕೆ

ಈ ಬಗ್ಗೆ ಸ್ವತಃ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯ ಮೂಲಕ ಮಾಹಿತಿ ನೀಡಿದ್ದು ಈ ರೀತಿ ಬರೆದಿದ್ದಾರೆ... 

ಅರಣ್ಯ ಮತ್ತು ಪರಿಸರ ಸಂರಕ್ಷಣೆಯ ಹಿತಾಸಕ್ತಿಯಿಂದ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ, ಖ್ಯಾತ ಕ್ರಿಕೆಟಿಗ ಮತ್ತು ಮಾಜಿ ಭಾರತ ತಂಡದ ನಾಯಕರಾದ ಶ್ರೀ @anilkumble1074 ಅವರನ್ನು ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮನಿರ್ದೇಶಿಸಲು ನಿರ್ಧರಿಸಿದ್ದೇವೆ.

ಶ್ರೀ ಕುಂಬ್ಳೆ ಅವರು ಇತ್ತೀಚೆಗೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ವನ್ಯಜೀವಿಗಳ ಮೇಲಿನ ಅಪಾರ ಕಾಳಜಿ, ಅರಣ್ಯದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಅವರು ಹೊಂದಿರುವ ಖ್ಯಾತಿಯಿಂದಾಗಿ ಅವರು ಈ ಜವಾಬ್ದಾರಿಗೆ ಅತ್ಯಂತ ಸೂಕ್ತ ವ್ಯಕ್ತಿಯಾಗಿದ್ದಾರೆ. ಅವರು ಯಾವುದೇ ಸಂಭಾವನೆ ಪಡೆಯದೇ, ಸಂಪೂರ್ಣವಾಗಿ ಸಮಾಜಮುಖಿ ಉದ್ದೇಶದಿಂದ ಈ ಸೇವೆಗಾಗಿ ಸಮ್ಮತಿಸಿರುವುದು ಹೆಮ್ಮೆಯ ವಿಷಯವಾಗಿದೆ.
ಈ ನಿರ್ಧಾರದಿಂದ ನಮ್ಮ ರಾಜ್ಯದ ಅರಣ್ಯ ಸಂರಕ್ಷಣೆ, ವನ್ಯಜೀವಿ ರಕ್ಷಣೆ ಮತ್ತು ಪರಿಸರ ಜಾಗೃತಿಗೆ ಹೊಸ ದಿಕ್ಕು ಮತ್ತು ಚೈತನ್ಯ ದೊರೆಯಲಿದೆ ಎಂಬ ಭರವಸೆ ನನಗಿದೆ ಎಂದು ಬರೆದಿದ್ದಾರೆ. 

ಸಚಿವ ಈಶ್ವರ್ ಖಂಡ್ರೆ ಅವರ ಪೋಸ್ಟ್ ಗೆ ಪ್ರತಿಕ್ರಿಯಿಸಿರುವ ಅನಿಲ್ ಕುಂಬ್ಳೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವ ಈಶ್ವರ್ ಖಂಡ್ರೆ ಅವರನ್ನು ಟ್ಯಾಗ್ ಮಾಡಿ, ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಮತ್ತು ವನ್ಯಜೀವಿ ಸಂರಕ್ಷಣ ರಾಯಭಾರಿಯಾಗಿ ನನ್ನನ್ನು ನೇಮಿಸಿದಕ್ಕಾಗಿ ಕರ್ನಾಟಕ ಸರ್ಕಾರ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ನಮ್ಮ ರಾಜ್ಯದ ಸಸ್ಯ ಹಾಗೂ ಪ್ರಾಣಿಗಳಲ್ಲಿನ  ವೈವಿಧ್ಯತೆಯ ಬಗ್ಗೆ ಜಾಗೃತಿ ಮೂಡಿಸಲು, ವನ್ಯಜೀವಿ ಸಂರಕ್ಷಣೆ ಮತ್ತು ಅರಣ್ಯ ಇಲಾಖೆಯ ಮುಂಚೂಣಿ ಸಿಬ್ಬಂದಿಯ ಅಭಿವೃದ್ಧಿಯನ್ನು ಬೆಂಬಲಿಸುವತ್ತ ನನ್ನ ಕೆಲಸವನ್ನು ಮುಂದುವರಿಸಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ. 

ಇದನ್ನೂ ಓದಿ- "ತಮನ್ನಾ" ತಕರಾರು, ನಾನು ಯಾರಿಂದಲೂ ಕನ್ನಡಾಭಿಮಾನವನ್ನು ಕಲಿಯುವ ಅಗತ್ಯವಿಲ್ಲ : ಎಂ.ಬಿ. ಪಾಟೀಲ್‌

ಒಂದೆಡೆ ತಮನ್ನಾ ಭಾಟಿಯಾಗೆ ಭಾರೀ ಸಂಭಾವನೆ ನೀಡಿ ಮೈಸೂರ್ ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನೇಮಿಸಿರುವ ಕರ್ನಾಟಕ ಸರ್ಕಾರದ ನಡೆ ವಿಚಾರ ವ್ಯಾಪಕ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ, ಸಂಭಾವನೆಯನ್ನೇ ಪಡೆಯದೆ ಅರಣ್ಯ ಇಲಾಖೆ ಮತ್ತು ವನ್ಯಜೀವಿ ಸಂರಕ್ಷಣ ರಾಯಭಾರಿಯಾಗಿ ಜವಾಬ್ದಾರಿ ವಹಿಸಿಕೊಂಡ ಅನಿಲ್ ಕುಂಬ್ಳೆ ಅವರ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News