ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಎನ್ನುವ ವ್ಯಕ್ತಿ ಶನಿವಾರದಂದು ಬೆಂಗಳೂರಿನ ಜ್ಞಾನ ಭಾರತಿ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಪರಮೇಶ್ವರ ಅವರ ಮನೆ ಹಾಗೂ ಅವರಿಗೆ ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳ ಮೇಲೆ ಆಧಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ ಬೆನ್ನಲ್ಲೇ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಈಗ ಹಲವು ಸಂಶಯಗಳಿಗೆ ಕಾರಣವಾಗಿದೆ. ಈ ವ್ಯಕ್ತಿ ಈ ಹಿಂದೆ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಟೈಪಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದನು ಎನ್ನಲಾಗಿದೆ.



ಗುರುವಾರದಂದು ಜಿ.ಪರಮೇಶ್ವರ್ ಅವರ ಸದಾಶಿವ ನಗರದಲ್ಲಿರುವ ನಿವಾಸ, ತುಮಕೂರಿನಲ್ಲಿರುವ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜು, ಪದವಿ ಕಾಲೇಜು, ನೆಲಮಂಗಲದಲ್ಲಿರುವ ಮೆಡಿಕಲ್ ಕಾಲೇಜುಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.