ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಆತ್ಮಹತ್ಯೆ
BC Patil son-in-law committed suicide: ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದು, ಸಂಚಲನ ಸೃಷ್ಟಿಸಿದೆ.
ದಾವಣಗೆರೆ: ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ಅಳಿಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರತಾಪ್ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದು, ಸಂಚಲನ ಸೃಷ್ಟಿಸಿದೆ. ಬಿಸಿ ಪಾಟೀಲ್ ಪುತ್ರಿ ಸೌಮ್ಯಾ ಪತಿ 41 ವರ್ಷದ ಪ್ರತಾಪ್ ಕುಮಾರ್ ಸೂಸೈಡ್ ಮಾಡಿಕೊಂಡಿದ್ದಾರೆ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಣ್ಯ ಪ್ರದೇಶದ ರಸ್ತೆ ಬಳಿ ಕಾರಿನಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಪ್ರತಾಪ್ ಕುಮಾರ್ ಕಾರಿನಲ್ಲಿ ಕುಳಿತೇ ವಿಷ ಸೇವಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Bengaluru's 2nd airport: ಎಲ್ಲಿ ನಿರ್ಮಾಣವಾಗಲಿದೆ ಗೊತ್ತಾ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ?
ಪ್ರತಾಪ್ ಕುಮಾರ್ ವಿಷ ಸೇವಿಸಿ ಅಸ್ವಸ್ಥರಾಗಿರುವುದನ್ನು ಗಮನಿಸಿದ ಸ್ಥಳೀಯರು ಅವರನ್ನು ಕೂಡಲೇ ಆಸ್ಪತ್ರಗೆ ಸೇರಿಸಿದ್ದಾರೆ. ಅಸ್ವಸ್ಥಗೊಂಡ ಪ್ರತಾಪ್ ಕುಮಾರ್ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಿಸದೇ ಪ್ರತಾಪ್ ಕುಮಾರ್ ಕೊನೆ ಉಸಿರೆಳೆದಿದ್ದಾರೆ.
ಮೃತ ಪ್ರತಾಪ್ ಕುಮಾರ್ ದಾವಣಗೆರೆ ಕತ್ತಲಗೆರೆ ಗ್ರಾಮದವರಾಗಿದ್ದರು. 15 ವರ್ಷದ ಹಿಂದೆ ಬಿಸಿ ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯ ಅವರನ್ನು ಪ್ರತಾಪ್ ಕುಮಾರ್ ಮದುವೆಯಾಗಿದ್ದರು. ಇದೀಗ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾರಿನಲ್ಲಿ ವಿಷದ ಬಾಟಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ: ಡಿಸಿಗಳು ಎಂದರೆ ಮಹಾರಾಜರಲ್ಲ- ಈ ಮನೋಭಾವ ಇದ್ದರೆ ಜನಸೇವೆ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.