ಡಿ.ಕೆ. ಶಿವಕುಮಾರ್‌ಗೆ ಮತ್ತೆ ಎದೆನೋವು, ಅಪೋಲೋ ಆಸ್ಪತ್ರೆಗೆ ದಾಖಲು

ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಡಿಕೆಶಿ ಆಸ್ಪತ್ರೆಗೆ ದಾಖಲು.  

Last Updated : Nov 12, 2019, 07:29 AM IST
ಡಿ.ಕೆ. ಶಿವಕುಮಾರ್‌ಗೆ ಮತ್ತೆ ಎದೆನೋವು, ಅಪೋಲೋ ಆಸ್ಪತ್ರೆಗೆ ದಾಖಲು title=

ಬೆಂಗಳೂರು: ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ನಿನ್ನೆ ತಡರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ನಗರದ ಶೇಷಾದ್ರಿಪುರದಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಕೆಶಿಗೆ ರಕ್ತದೊತ್ತಡ ಹೆಚ್ಚಾಗಿದ್ದು, ಲೋ ಶುಗರ್ ನಿಂದ ಬಳಲುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಗಮನಾರ್ಹವಾಗಿ, ಬೆನ್ನು ನೋವು, ಅಧಿಕ ರಕ್ತದೊತ್ತಡ, ಎದೆ ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದ ಡಿ.ಕೆ. ಶಿವಕುಮಾರ್ ಅವರು ನವೆಂಬರ್ 1ರ ಶುಕ್ರವಾರ ಸಂಜೆ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದರು. ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದದ್ದರಿಂದ ವೈದ್ಯರ ಸೂಚನೆ ಮೇರೆಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಬಳಿಕ ಭಾನುವಾರ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು.

ನವೆಂಬರ್ 3 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ಬಳಿಕ  ನವೆಂಬರ್ 7 ಮತ್ತು 8ರಂದು ಡಿ. ಕೆ. ಶಿವಕುಮಾರ್ ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ್ದರು.

Trending News