ಕಾಂಗ್ರೆಸ್ ಮುಖಂಡನ ಮೇಲೆ ಮಾಜಿ ಸಚಿವ ಡಿ ಸುಧಾಕರ್ ಬೆಂಬಲಿಗರಿಂದ ಹಲ್ಲೆ ಆರೋಪ

Chitradurga News : ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಪರಾಜಿತ ಅಭ್ಯರ್ಥಿ ಬಿ.ಸೋಮಶೇಖರ್ ಅವರ ಮೇಲೆ ಗುರುವಾರ ರಾತ್ರಿ ಮಾಜಿ ಸಚಿವ ಡಿ.ಸುಧಾಕರ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.   

Written by - Zee Kannada News Desk | Last Updated : Dec 23, 2022, 07:25 AM IST
  • ಕಾಂಗ್ರೆಸ್ ಮುಖಂಡ ಬಿ.ಸೋಮಶೇಖರ್ ಮೇಲೆ ಹಲ್ಲೆ
  • ಮಾಜಿ ಸಚಿವ ಡಿ ಸುಧಾಕರ್ ಬೆಂಬಲಿಗರಿಂದ ಹಲ್ಲೆ ಆರೋಪ
  • ಬೂದು ಮುಚ್ಚಿದ ಕೆಂಡದಂತಾದ ಹಿರಿಯೂರು ಕ್ಷೇತ್ರ
ಕಾಂಗ್ರೆಸ್ ಮುಖಂಡನ ಮೇಲೆ ಮಾಜಿ ಸಚಿವ ಡಿ ಸುಧಾಕರ್ ಬೆಂಬಲಿಗರಿಂದ ಹಲ್ಲೆ ಆರೋಪ title=

ಚಿತ್ರದುರ್ಗ : ಜಿಲ್ಲೆಯ ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಪರಾಜಿತ ಅಭ್ಯರ್ಥಿ ಬಿ.ಸೋಮಶೇಖರ್ ಅವರ ಮೇಲೆ ಗುರುವಾರ ರಾತ್ರಿ ಮಾಜಿ ಸಚಿವ ಡಿ.ಸುಧಾಕರ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಮಾಜಿ ಸಚಿವ ಡಿ.ಸುಧಾಕರ್ ಮೇಲೆ ದೂರು ದಾಖಲಾಗಿದೆ. ಈ ಘಟನೆಯಿಂದ ಹಿರಿಯೂರು ಕ್ಷೇತ್ರದ ವಾತಾವರಣ ಸದ್ಯ ಬೂದು ಮುಚ್ಚಿದ ಕೆಂಡದಂತಿದೆ.

ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್ ಅವರು ವೀಕ್ಷಣೆಗೆ  ಹಿರಿಯೂರು ತಾಲ್ಲೂಕಿನ ಧರ್ಮಪುರ ಗ್ರಾಮಕ್ಕೆ ಆಗಮಿಸಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಗಾಯಾಳುಗಳನ್ನು ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು, ನಂತರ ಚಿತ್ರದುರ್ಗದ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ : ದೇಶದ ಮೊದಲ ಮುಸ್ಲಿಂ ಮಹಿಳಾ ಫೈಟರ್ ಪೈಲಟ್ ಈ ಸಾನಿಯಾ ಮಿರ್ಜಾ! 

ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್‌ ಪರಾಜಿತ ಅಭ್ಯರ್ಥಿ ಬಿ. ಸೋಮಶೇಖರ್ ಅವರನ್ನು ಕೊರಳು ಪಟ್ಟಿ ಹಿಡಿದು ಎಳೆದಾಡಿ, ಅವರ ಮೇಲೆ ಮಾಜಿ ಸಚಿವ ಡಿ ಸುಧಾಕರ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇದೇ ವೇಳೆಗೆ ದಲಿತರ ಮೇಲೆ ದೌರ್ಜನ್ಯ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. 

ವೇದಿಕೆಯಲ್ಲಿ ನಾಯಕರು ಕುಳಿತಿದ್ದಾಗ ಈ ಘಟನೆ ನಡೆದಿದೆಯಂತೆ. ಮಾಜಿ ಸಚಿವ ಡಿ ಸುಧಾಕರ್ ಬೆಂಬಲಿಗರು ಜೈಕಾರ ಹಾಕಿದ್ದಾರೆ. ಇತ್ತ ಬಿ. ಸೋಮಶೇಖರ್ ಅವರ ಬೆಂಬಲಿಗರು ಕೂಡ ಜೈಕಾರ ಹಾಕಿದ್ದಾರೆ. ಇದರಿಂದ ರೊಚ್ಚಿಗೆದ್ದ ಸುಧಾಕರ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹಲ್ಲೆಗೊಳಗಾದ ಕಾಂಗ್ರೆಸ್ ನಾಯಕ ಬಿ. ಸೋಮಶೇಖರ್ ಹಾಗೂ ಅವರ ಬೆಂಬಲಿಗರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆ ಹಿರಿಯೂರು ನಗರದ ಹೊರವಲಯದಲ್ಲಿ ನಡೆದ ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮದಲ್ಲಿ ಫ್ಲೆಕ್ಸ್ ಕಟ್ಟುವ ವಿಚಾರದಲ್ಲಿ ಸಹ ಇಬ್ಬರು ನಾಯಕರ ಬೆಂಬಲಿಗರ ಮಧ್ಯೆ ಗಲಾಟೆ ನಡೆದಿತ್ತು.

ಇದನ್ನೂ ಓದಿ : COVID‑19 Guidelines : ರಾಜ್ಯ ಸರ್ಕಾರದಿಂದ ಅಧಿಕೃತ ಕೊರೋನಾ ಮಾರ್ಗಸೂಚಿ ಬಿಡುಗಡೆ!

ಮಾಜಿ ಸಚಿವ ಡಿ ಸುಧಾಕರ್ ಬೆಂಬಲಿಗರು ಸಹ ಗಲಾಟೆಯಲ್ಲಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೇ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಪ್ಪ ಹಾಗೂ ತಿಪ್ಪೇಸ್ವಾಮಿ ಮಲ್ಲಪ್ಪನ ಹಳ್ಳಿ ಕೂಡ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರಂತೆ. 

ಸೋಮಶೇಖರ್ ಅವರನ್ನು ಕಾರ್ಯಕ್ರಮಕ್ಕೆ ಯಾಕೆ ಬಂದಿದ್ದಿರಾ ಎಂದು ಪ್ರಶ್ನೆ ಮಾಡಲಾಗಿದ್ದು ಅದಕ್ಕೆ ಇದನ್ನು ಕೇಳಲು ನೀವು ಯಾರು ಎಂದು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸುಧಾಕರ್ ಬೆಂಬಲಿಗರು ಸೋಮಶೇಖರ್ ವಿರುದ್ಧ ಆರೋಪಿಸಿದರು. ಅಬ್ಬಿನಹೊಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News