G. N. Nanjundaswamy :  ಇತ್ತೀಚೆಗೆ ಬಿಜೆಪಿ ನಡೆದುಕೊಳ್ಳುವ ರೀತಿಯಿಂದ ಬೇಸತ್ತು ಪಕ್ಷಕ್ಕೆ ಭಾನುವಾರ ರಾಜೀನಾಮೆ ಸಲ್ಲಿಸಿದ್ದು ಮಂಗಳವಾರ ಕಾಂಗ್ರೆಸ್‌ಗೆ ಸೇರುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು. ಪಕ್ಷದ ವತಿಯಿಂದ ನಡೆಯುವ ಕಾರ್ಯಕ್ರಮಗಳಿಗೆ ಹಿಂದಿನ ರಾತ್ರಿ ಕರೆ ಮಾಡಿ‌ ತಿಳಿಸುತ್ತಾರೆ. ಯಾವುದಕ್ಕೂ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಇದರಿಂದಾಗಿ ನನಗೆ, ನನ್ನ ವಿಶ್ವಾಸಿಗಳಿಗೆ ತೀರಾ ಘಾಸಿ ಉಂಟಾಗಿದೆ. ಮುಜುಗರ ಅನುಭವಿಸಿದ್ದೇವೆ. ಹಿಂದಿನಿಂದಲೂ ರಾಷ್ಟ್ರೀಯ ಪಕ್ಷಗಳ ಜೊತೆ ಗುರುತಿಸಿಕೊಂಡಿರುವುದರಿಂದ ಬೆಂಬಲಿಗರ ಅಭಿಪ್ರಾಯದಂತೆ ಮಂಗಳವಾರ ಸಿದ್ದರಾಮಯ್ಯ ನೇತೃತ್ವದಲ್ಲಿ ಮರಳಿ ಕಾಂಗ್ರೆಸ್‌ಗೆ ಸೇರುತ್ತಿದ್ದೇನೆ ಎಂದು‌ ತಿಳಿಸಿದರು.


COMMERCIAL BREAK
SCROLL TO CONTINUE READING

ಇಂಥಾ ಟೈಮ್ ನಲ್ಲಿ ಅದಾನಿ ಗ್ರೂಪ್ ಕಂಪನಿಗೆ 15446 ಕೋಟಿ ಹೂಡಿಕೆ ಮಾಡಿದ ರಾಜೀವ್ ಜೈನ್ ಯಾರು? ಶಾಸಕ ಮಹೇಶ್ ವಿರುದ್ಧ ನಾಲ್ವರು ಮಾಜಿ ಶಾಸಕರ ತಂತ್ರ ಕೊಳ್ಳೇಗಾಲ ಕ್ಷೇತ್ರದ ಶಾಸಕ ಮಹೇಶ್ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಬಹುತೇಕ ಪಕ್ಕಾ ಆಗಿದ್ದು, ಮತ್ತೊಂದು ಕಡೆ ಕಾಂಗ್ರೆಸ್‌ನಲ್ಲಿ ಮೂವರು ಮಾಜಿ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿರುವ ಮಾಜಿ ಶಾಸಕರು ಒಂದಾದರೇ ಸ್ಪರ್ಧೆ ಬಿರುಸಾಗಲಿದೆ ಎನ್ನುವ ಚರ್ಚೆ ಸದ್ಯ ಶುರುವಾಗಿದೆ.


ಇದನ್ನೂ ಓದಿ-Viral Video : ಮೆಟ್ರೋದಲ್ಲಿ ಇದೆಲ್ಲಾ ಮಾಡ್ತಾರಾ? ಯುವತಿಯರ ಹುಚ್ಚಾಟ.. ನೆತ್ತಿಗೇರಿತು ಜನರ ಕೋಪ! 



ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ‌ ಜಿ.ಎನ್. ನಂಜುಂಡಸ್ವಾಮಿ ಅವರು ಕಾಂಗ್ರೆಸ್ ಸೇರುತ್ತಾರೆ ಎಂದು ಡಿ.ಕೆ ಶಿವಕುಮಾರ್‌ ಬಹಿರಂಗವಾಗಿ ಹೇಳಿಕೆ ಕೊಟ್ಟಿದ್ದರು. ಅದರಂತೆ, ಬಿಜೆಪಿ ಕಾರ್ಯಕ್ರಮಗಳಿಗೆ ಜಿಎನ್ಎನ್ ಗೈರಾಗಿ ಅಂತರ ಕಾಯ್ದುಕೊಂಡಿದ್ದು ಸ್ಪಷ್ಟವಾಗಿತ್ತು. ಈಗ ಅವರೇ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುತ್ತೇನೆ ಎಂದು ಹೇಳುವ ಮೂಲಕ ಬಿಜೆಪಿ ತೊರೆದಿರುವುದನ್ನು ಸ್ಪಷ್ಟಪಡಿಸಿದ್ದಾರೆ.


ಕಾಂಗ್ರೆಸ್‌ನಲ್ಲಿ ಈಗಾಗಲೇ ಮೂವರು ಟಿಕೆಟ್ ಆಕಾಂಕ್ಷಿಗಳಿದ್ದು ಎಲ್ಲರೂ ಮಾಜಿ ಶಾಸಕರುಗಳಾಗಿದ್ದಾರೆ. ಇವರ ಸಾಲಿಗೆ ಜಿಎನ್ ಕೂಡ ಸೇರಿಕೊಂಡರೆ ಶಾಸಕ ಮಹೇಶ್ ಮಣಿಸಲು ನಾಲ್ವರು ಮಾಜಿ ಶಾಕಸರು ಸೇರಿಕೊಂಡಂತಾಗಲಿದ್ದು, ಚುನಾವಣಾ ಕಣ ರಣರಂಗವಾಗಲಿದೆ.


ಮಾಜಿ ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಜಯಣ್ಣ, ಬಾಲರಾಜು ಕ್ಷೇತ್ರದಲ್ಲಿ ಸುತ್ತಾಡಿ ಪಕ್ಷ ಸಂಘಟಿಸುವ ಜೊತೆಗೆ ತಮ್ಮ ಮತ ಬ್ಯಾಂಕ್‌ ನ್ನು ಹೆಚ್ಚಿಸಿಕೊಂಡಿದ್ದಾರೆ. ಶಾಸಕ ಮಹೇಶ್ ಬಿಜೆಪಿಗೆ ಸೇರ್ಪಡೆಯಾಗುವ ಮುನ್ನ ಜಿಎನ್ ಕೂಡ ಪಕ್ಷ ಸಂಘಟಿಸಿ ತಮ್ಮ ಮತ ಬ್ಯಾಂಕ್‌ನ್ನು ಭದ್ರಪಡಿಸಿಕೊಂಡಿದ್ದರು. ಈಗ ನಾಲ್ವರು ಮಾಜಿ ಶಾಸಕರು ಒಂದಾಗಿ ಮತ ಭದ್ರವಾದರೆ ಕಾಂಗ್ರೆಸ್‌ಗೆ ಉತ್ತಮ ಬೆಂಬಲ ಎನ್ನುವ ಲೆಕ್ಕಾಚಾರ ಆರಂಭವಾಗಿದೆ. 


ಇನ್ನು ಪೊಲೀಸ್ ಹುದ್ದೆಗೆ ರಾಜೀನಾಮೆ ಕೊಟ್ಟು ಜೆಡಿಎಸ್ ಸೇರ್ಪಡೆಗೊಂಡಿರುವ, ಕೊಳ್ಳೇಗಾಲದ ಜೆಡಿಎಸ್‌ನ ಸಂಭಾವ್ಯ ಅಭ್ಯರ್ಥಿ ಬಿ.ಪುಟ್ಟಸ್ವಾಮಿ ಎಲ್ಲಾ ಪಕ್ಷಗಳಿಂದ ಮತ ಪಡೆಯುವ ಸಾಧ್ಯತೆಯಿದ್ದು, ಬಿಜೆಪಿಯ ಮತ ವಿಭನೆಯಾಗಲಿ ಎನ್ನುವುದು ಅವರ ಕಾರ್ಯಕರ್ತರ ಪ್ರಚಾರವನ್ನು ಗಮನಿಸಿದಾಗ ತಿಳಿಯುತ್ತದೆ ಎನ್ನುವ ಮಾತು ಕೇಳಿ ಬರುತ್ತಿದೆ. ಒಟ್ಟಿನಲ್ಲಿ ನಾಲ್ವರು ಮಾಜಿ ಶಾಸಕರು ಒಂದೆಡೆ, ಮಾಜಿ ಪೊಲೀಸ್ ಮತ್ತೊಂದು ಕಡೆ ತಕ್ಕಮಟ್ಟಿಗಿನ ಮತಬ್ಯಾಂಕ್ ಹೊಂದಿರುವ ಬಿಎಸ್‌ಪಿ ಇನ್ನೊಂದೆಡೆ ಇರುವುದು ಚಾಮರಾಜನಗರದಲ್ಲಿ ಬಿಜೆಪಿಗೆ ಈ ಬಾರಿಯ ವಿಧಾನಸಭಾ ಚುನಾವಣೆ ಅಷ್ಟು ಸುಲಭವಾಗಿಲ್ಲ ಎನ್ನುವುದು ರಾಜಕೀಯ ವಲಯದ ಅಭಿಪ್ರಾಯವಾಗಿದೆ.


ಇದನ್ನೂ ಓದಿ-ಎಣ್ಣೆ ಏಟಲ್ಲಿ ಸಾಯಿಸ್ತೀನಿ ಎಂದವನೇ ಶವವಾಗಿದ್ದ...! 


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.