ಮಾಜಿ ಶಾಸಕ ಸಂಭಾಜಿ ಪಾಟೀಲ ನಿಧನ
ಕಿಡ್ನಿ ವೈಫಲ್ಯ ಹಾಗೂ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಶುಕ್ರವಾರ ಸಂಜೆ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬೆಳಗಾವಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಎಂಇಎಸ್ ಶಾಸಕ ಸಂಭಾಜಿ ಪಾಟೀಲ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ 8.30ಕ್ಕೆ ನಿಧನರಾಗಿದ್ದಾರೆ.
ಕಿಡ್ನಿ ವೈಫಲ್ಯ ಹಾಗೂ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಶುಕ್ರವಾರ ಸಂಜೆ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಸಂಭಾಜಿ ಪಾಟೀಲ ಅವರು 1990 ರಲ್ಲಿ ಮಹಾಪೌರರಾಗಿದ್ದಾಗ ಹಿಡಕಲ್ ಜಲಾಶಯದಿಂದ ಬೆಳಗಾವಿಗೆ ನೀರು ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಬಳಿಕ 2013ರ ಚುನಾವಣೆಯಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರದಿಂದ ಎಂಇಎಸ್ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯಗಳಿಸಿದ್ದರು. ಆದರೆ, 2018ರ ಚುನಾವಣೆಯಲ್ಲಿ ಬೆಳಗಾವಿ ಉತ್ತರದಿಂದ ಕಣಕ್ಕಿಳಿದು ಕೇವಲ 249 ಮತಗಳನ್ನು ಪಡೆದಿದ್ದರು. ಹೀಗೆ ಮೂರು ಬಾರಿ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಆಗಿ, ಒಂದು ಬಾರಿ ಶಾಸಕರಾಗಿ ಸಂಭಾಜಿ ಕಾರ್ಯ ನಿರ್ವಹಿಸಿದ್ದರು.