ಬೆಂಗಳೂರು: ಚುನಾವಣಾ ಪ್ರಕ್ರಿಯೆ ಪಾರದರ್ಶಕವಾಗಿರಬೇಕು ಆದರೆ ಇದರ ಬಗ್ಗೆ ನನಗೆ ಅನುಮಾನ ಇದೆ ಎಂದು ಚುನಾವಣಾ ಆಯೋಗದ ಮುಖ್ಯಸ್ಥರನ್ನು ಭೇಟಿ ಮಾಡಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮನವಿ ಸಲ್ಲಿಸಿದ್ದಾರೆ.


COMMERCIAL BREAK
SCROLL TO CONTINUE READING

ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ಮತ್ತು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಅವರನ್ನು ಬೆಂಗಳೂರಿನಲ್ಲಿಂದು ಭೇಟಿಯಾದ ದೇವೇಗೌಡರು, ಚುನಾವಣಾ ಪ್ರಕ್ರಿಯೆ ಪಾರದರ್ಶಕವಾಗಿರಬೇಕು, ಆದರೆ ಇದರ ಬಗ್ಗೆ ನನಗೆ ಅನುಮಾನ ಇದೆ ಎಂದು ಆಯೋಗಕ್ಕೆ ತಿಳಿಸಿರುವುದಾಗಿ ಹೇಳಿದ್ದಾರೆ.


ಈ ಬಗ್ಗೆ ಮಾಧ್ಯಮ ಮಿತ್ರರಿಗೆ ಮಾಹಿತಿ ನೀಡಿರುವ ಹೆಚ್ಡಿಡಿ, ಸರ್ಕಾರದ ಕೆಲವು ಅಧಿಕಾರಿಗಳ ನಡವಳಿಕೆ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇನೆ. ಗೃಹ ಇಲಾಖೆಯಲ್ಲಿ ಕಾನೂನು ಸಡಿಲವಾಗಿದೆ. ಅಲ್ಲದೆ ನಿಷ್ಠಾವಂತ ಅಧಿಕಾರಿಗಳನ್ನು ಸರ್ಕಾರ ಬದಲಾವಣೆ ಮಾಡಿದೆ ಎಂಬ ಮಾಹಿತಿ ನೀಡಿರುವುದಾಗಿ ತಿಳಿಸಿದರು. ಜೊತೆಗೆ ಗೃಹ ಇಲಾಖೆಯಲ್ಲಿ ಕೆಂಪಯ್ಯ ಅವರ ಕೈ ಚಳಕದ ಬಗ್ಗೆ ಆಯೋಗಕ್ಕೆ ಮಾಹಿತಿ ನೀಡಿಲಾಗಿದೆ ಎಂದರು. 


ಇದಲ್ಲದೆ, ರಾಮನಗರ, ಹಾಸನ, ಮಂಡ್ಯ, ಮೈಸೂರು ಭಾಗಗಳಲ್ಲಿ ತಮಗೆ ಬೇಕಾದ ಅಧಿಕಾರಿಗಳನ್ನು ವರ್ಗ ಮಾಡಲಾಗಿದೆ. ಗೃಹ ಇಲಾಖೆಯನ್ನು ದುರ್ಬಲ ಮಾಡಿಕೊಂಡಿರುವ ಸರ್ಕಾರ ಪೋಲಿಸ್ ಜೀಪ್ ಗಳಲ್ಲಿ ಹಣ ಸಾಗಿಸುತ್ತಿದೆ. ಅಲ್ಲದೆ ಡಿಸಿ, ಎಸ್ ಪಿ ಗಳನ್ನು ಸ್ವೆಚ್ಚಾಚಾರವಾಗಿ ವರ್ಗಾವಣೆ ಮಾಡಿದ್ದಾರೆ ಎಂಬ ವಿಷಯಗಳನ್ನು ಆಯೋಗದ ಗಮನಕ್ಕೆ ತಂದಿರುವುದಾಗಿ ದೇವೇಗೌಡರು ತಿಳಿಸಿದರು.