Channapatna bypoll: ಚನ್ನಪಟ್ಟಣ ಚುನಾವಣೆ ಪ್ರಚಾರದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಕಣ್ಣೀರಿನ ಬಗ್ಗೆ ಲಘುವಾಗಿ ಮಾತನಾಡಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ʼನಮ್ಮ ವಂಶ ಬಡತನದಿಂದ ಕಷ್ಟ-ಸುಖ ಅರಿತು ಮೇಲೆ ಬಂದಿದೆ. ನಮ್ಮ ವಂಶಕ್ಕೆ ಈ ಕಣ್ಣೀರು ಬಳುವಳಿಯಾಗಿ ಬಂದಿದೆ ಎಂದು ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಪಾಂಡವಪುರದ ಚಿನಕುರುಳಿ ಗ್ರಾಮದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ʼಕಣ್ಣೀರಿನ ಬಗ್ಗೆ ವ್ಯಂಗ್ಯವಾಡ್ತಿರೋ ಕಾಂಗ್ರೆಸ್ ನಾಯಕರ ವಿರುದ್ದ ಹರಿಹಾಯ್ದರು. ಇದೇ ವೇಳೆ ತಮ್ಮ ಬದುಕಿನ ಹಸಿವು, ಕಣ್ಣೀರನ್ನು ಅವರು ನೆನಪು ಮಾಡಿಕೊಂಡರು.


ಇದನ್ನೂ ಓದಿ: ನಾಗಸಂದ್ರ ಟು ಮಾದಾವರ ಮೆಟ್ರೋಗೆ ಗುಡ್‌ ರೆಸ್ಪಾನ್ಸ್‌


ನಮಗೆ ರೈತರ, ಬಡ ಜನರ ಕಷ್ಟ ಸುಖಗಳ ಅರಿವಿದೆ. ಅವರ ಕಷ್ಟಕ್ಕೆ ಸ್ಪಂದಿಸುವ ಹೃದಯ ಯಾರಿಗಿರುತ್ತೋ ಅವರಿಗೆ ಮಾತೃ ಹೃದಯ ಇರುತ್ತದೆ. ಕಣ್ಣೀರಿನ ಬಗ್ಗೆ ವ್ಯಂಗ್ಯ ಮಾಡುವ ಜನರಿಗೆ ನಾನು ಇನ್ನೇನು ಹೇಳಲು ಬಯಸುವುದಿಲ್ಲ ಎಂದು ಅವರು ಹೇಳಿದರು.


ನಾನು ನನ್ನ ಕಡೆಯ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರ್ತಿನಿ. ಮೊಮ್ಮಗನಿಗಾಗಿ ಈಗ ನಾನು ರಾಜಕೀಯಕ್ಕೆ ಬಂದಿಲ್ಲ. ಒಂದು ಪ್ರಾದೇಶಿಕ ಪಕ್ಷ ಉಳಿಸಲು ನಾನು ಬಂದಿದ್ದೀನಿ. ಈ ಸರ್ಕಾರ(ಕಾಂಗ್ರೆಸ್) ತೆಗೆಯುವವರೆಗೂ ನಾನು ನಿದ್ದೆ ಮಾಡಲ್ಲ. ಮೊಮ್ಮಗ ನಿಖಿಲ್ ಗೆದ್ದ ಮೇಲೆಯೂ ನಾನು ಮನೆಯಲ್ಲಿ ಮಲಗಲ್ಲ‌. ಆಮೇಲೆ ಕೂಡ ಹೋರಾಟ ಮಾಡಿ ಪಕ್ಷ ಕಟ್ಟುತ್ತೇನೆ ಎಂದರು. ಈ ವೇಳೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮಾಜಿ ಸಂಸದ ಕುಪೇಂದ್ರ ರೆಡ್ಡಿ, ಶಾಸಕ ಮಂಜುನಾಥ್, ಚಿಕ್ಕ ಸೋಮಣ್ಣ ಮುಂತಾದವರು ಉಪಸ್ಥಿತರಿದ್ದರು.


ಇದನ್ನೂ ಓದಿ: ಬಂಗಾರಪೇಟೆ ತಾಲೂಕಿನಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ