ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಕಣ್ಣೀರು ಹಾಕಿರೋದನ್ನ ಯಾವತ್ತಾದರೂ ನೋಡಿದ್ದೀರಾ? ಬೆಂಗಳೂರು ಭೂಗತ ಲೋಕವನ್ನೇ ಬೆಚ್ಚಿಬೀಳಿಸಿದ್ದ ರೌಡಿ ಕೊತ್ವಾಲ್ ರಾಮಚಂದ್ರ‌ನ ಬಳಿ 100 ರೂ.ಗೆ ಕೆಲಸ ಶುರು ಮಾಡಿದ್ದು ಈ ಡಿಕೆಶಿ. ಜವಾಹರ ಲಾಲ್ ನೆಹರು, ಇಂದಿರಾ ಗಾಂಧಿ ಅಂತಹವರು ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಅಂತಹ ಪಕ್ಷದ ಅಧ್ಯಕ್ಷರಾಗಿರುವ ಡಿಕೆಶಿ ಯಾವತ್ತಾದರೂ ಕಣ್ಣೀರು ಹಾಕಿದ್ದಾರಾ? ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಪ್ರಶ್ನಿಸಿದ್ದಾರೆ.


COMMERCIAL BREAK
SCROLL TO CONTINUE READING

ಎಚ್‌.ಡಿ.ದೇವೇಗೌಡರು, ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿನೂ ಕಣ್ಣೀರು ಹಾಕಿದ್ದಾರೆ. ದೇಶಕ್ಕೆ ಅನ್ನ ಕೊಡುವ ರೈತನಿಗೆ ನೋವಾದಾಗ ಹೃದಯ ಮರುಗುತ್ತದೆ. ಅಂತವರಿಗೆ ಕಣ್ಣೀರು ಬರುತ್ತದೆ. ನನ್ನ ಮೊಮ್ಮಗ ಕಣ್ಣೀರು ಹಾಕಿದರ ಬಗ್ಗೆ ಮಾತಾಡುತ್ತಾರೆ. ನಮ್ಮ ವಂಶವೇ ಕಣ್ಣೀರು ಹಾಕುತ್ತದೆ. ನಮ್ಮ ಅಪ್ಪನಿಂದಲೇ ನಮಗೆ ಕಣ್ಣೀರು ಹಾಕೋದು ಬಂದಿದೆ. ಬಡತನವನ್ನು ನಾವು ಅನುಭವಿಸಿದ್ದೇವೆ. ಬಡವರ ಬಗ್ಗೆ ನಮಗೆ ಬೇಗೆ, ನೋವು ಇದೆ ಎಂದು ದೇವೇಗೌಡರು ಬೇಸರ ವ್ಯಕ್ತಪಡಿಸಿದರು.


ಇದನ್ನೂ ಓದಿ: ನಾಪತ್ತೆಯಾಗಿದ್ದ ಮಗು ದೇವಯ್ಯಪಾರ್ಕ್ ಬಳಿ ಪತ್ತೆ..!


ಶಿವಕುಮಾರ್ ಅವರು ಚನ್ನಪಟ್ಟಣದಲ್ಲಿ 6 ತಿಂಗಳು ಪ್ರವಾಸ ಮಾಡಿದರು. ಅವರೇ ಪಾರ್ಟಿ ಅಧ್ಯಕ್ಷರು, ಅವರೇ ಬಿ-ಫಾರಂ ಕೊಡೋದು. ಕನಕಪುರದ ಎಂಎಲ್ಎ, ಮಂತ್ರಿಯಾದವರು ನಾನೇ ನಿಲ್ತೀನಿ ಎಂದಿದ್ದರು. ಅವರ ತಲೆಯಲ್ಲಿ ಏನೇನೂ ಇದ್ಯೋ. ಎಚ್‌ಡಿಕೆ ವರ್ಸಸ್ ಡಿಕೆ ಅಂತ ದಿನ ಚರ್ಚೆಯಾಗ್ತಿದೆ. ರಾಮನಗರವನ್ನು ಜಿಲ್ಲೆ ಮಾಡಿದ್ದು ಕುಮಾರಸ್ವಾಮಿ. ರಾಮನಗರವನ್ನು ಬೆಂಗಳೂರಿಗೆ ಸೇರಿಸ್ತೀನಿ, ಜನರಿಗೆ ಅನುಕೂಲ ಆಗುತ್ತೆ ಎನ್ನುತ್ತಿದ್ದಾರೆ. ಅವರು ರಾಮನಗರವನ್ನು ಉದ್ಧಾರ ಮಾಡುತ್ತಾರಂತೆ ಎಂದು ದೇವೇಗೌಡರು ವ್ಯಂಗ್ಯವಾಡಿದರು.


ಡಿಕೆಶಿಯನ್ನ ಎಚ್‌ಡಿಕೆಗೆ ಕಂಪೈರ್ ಮಾಡೋದು ಸರಿಯಲ್ಲ. ಪ್ರಧಾನಿ ಮೋದಿ ಅವರು ಕರೆದು ಎರಡು ಖಾತೆಗಳನ್ನು ಕೊಟ್ಟಿದ್ದಾರೆ. ಅಂತಹ ವ್ಯಕ್ತಿತ್ವವನ್ನ ಕುಮಾರಸ್ವಾಮಿ ಬೆಳೆಸಿಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮಹಾಜನತೆ ಹಣ ಹಾಕಿ ಕುಮಾರಸ್ವಾಮಿ ಗೆಲುವಿಗೆ ದುಡಿದರು. ಅವರನ್ನ ಸೋಲಿಸಲು ಎದುರಾಳಿ ಕಂಟ್ರಾಕ್ಟರ್‌ಗೆ 120 ಕೋಟಿ ರೂ. ಹಣವನ್ನ ರಿಲೀಸ್ ಮಾಡ್ತಾರೆ ಎಂದು ವಾಗ್ದಾಳಿ ನಡೆಸಿದರು.


ಇದನ್ನೂ ಓದಿ: ಚಾಮರಾಜನಗರಕ್ಕೂ ಕಾಲಿಟ್ಟ ವಕ್ಫ್ ಆಸ್ತಿ ವಿವಾದ:ಮೂವರು ರೈತರಿಗೆ ಜಮೀನು ಕಳೆದುಕೊಳ್ಳುವ ಆತಂಕ


ವಾಲ್ಮೀಕಿ ಸಮಾಜದ ₹80 ಕೋಟಿ ತೆಗೆದುಕೊಂಡು ತೆಲಂಗಾಣ ಎಲೆಕ್ಷನ್‌ಗೆ ಖರ್ಚು ಮಾಡಿದರು. ಬಡಬಗ್ಗರ ಹಣವನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಂಡಿದ್ದಾರೆ. ನನಗೆ 92 ವರ್ಷ, ನಿಖಿಲ್ ಗೆದ್ದ ಬಳಿಕ ಮಲಗಲ್ಲ. ಈ ಸರ್ಕಾರವನ್ನು ತೆಗೆಯುವವರೆಗೂ ಮಲಗಲ್ಲ. 62 ವರ್ಷದ ರಾಜಕೀಯ ಜೀವನದಲ್ಲಿ ಇಂತಹ ಸರ್ಕಾರ ನೋಡಿಲ್ಲ‌. ಈ ರಾಜ್ಯ ಉಳಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ಪ್ರಾದೇಶಿಕ ಪಕ್ಷವನ್ನು NDA ಜೊತೆ ಸೇರಿಸಿದ್ದೇನೆ. ಮೋದಿ ನಾಯಕತ್ವಕ್ಕೆ ಸಾಟಿಯಾಗುವ ಒಬ್ಬ ನಾಯಕ INDIAನಲ್ಲಿ ಇಲ್ಲ‌. ಮೋದಿ ಅವರನ್ನು ಎದುರಿಸುತ್ತೇನೆ ಎನ್ನುವ ಒಬ್ಬ ನಾಯಕ ಇಲ್ಲ. ರಾಷ್ಟ್ರದ ಶ್ರೇಯೋಭಿವೃದ್ದಿಗೆ ಡೊನಾಲ್ಡ್ ಟ್ರಂಪ್, ಮೋದಿ ಅವರು ಗೆದ್ದಿದ್ದಾರೆ. ಮೋದಿ-ಟ್ರಂಪ್ ಸಂಬಂಧ ಚೆನ್ನಾಗಿದೆ. ಎದುರಾಳಿಗಳನ್ನು ಎದುರಿಸಲು ಈ ಸಂಬಂಧ, ವ್ಯಕ್ತಿತ್ವ ನಾಯಕತ್ವ ಕೆಲಸ ಮಾಡುತ್ತದೆ ಎಂದು ಆಶಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ