Dinesh Gundu Rao : ಪಂಜಾಬ್ ಚುನಾವಣಾ ಫಲಿತಾಂಶ ಪಕ್ಷದ ಮಟ್ಟಿಗೆ ದೊಡ್ಡ ಆಘಾತ : ದಿನೇಶ್ ಗುಂಡು ರಾವ್

ಪಂಚರಾಜ್ಯ ಚುನಾವಣಾ ಫಲಿತಾಂಶ ಕಾಂಗ್ರೆಸ್ ಪಕ್ಷದ ಮಟ್ಟಿಗೆ ಹಿನ್ನಡೆಯಾದರೂ ಅಂತಿಮವಾಗಿ ಜನಾದೇಶಕ್ಕೆ ಗೌರವ ಕೊಡಲೇಬೇಕು.‌ ಚುನಾವಣೆ ನಡೆದ ಐದೂ ರಾಜ್ಯಗಳಲ್ಲಿ ಪಕ್ಷದ ಪರ ಜನರ ಒಲವಿತ್ತು. ಆದರೆ ಆ ಒಲವು ಪಕ್ಷದ ಪರ ಮತಗಳಾಗಿ ಪರಿವರ್ತನೆಯಾಗಿಲ್ಲ. ಚುನಾವಣೆ ನಡೆದ ರಾಜ್ಯಗಳಲ್ಲಿ ಜನರ ನಾಡಿ ಮಿಡಿತ ನಾವು ಅರಿಯುವಲ್ಲಿ ನಮ್ಮ ಪಕ್ಷ ವಿಫಲವಾಗಿದೆ ಎಂದು ಮಾಜಿ ಕೆಪಿಸಿಸಿ ಮತ್ತು ಗೋವಾ ಕಾಂಗ್ರೆಸ್ ಉಸ್ತುವಾರಿ ಅಧ್ಯಕ್ಷ ದಿನೇಶ್ ಗುಂಡು ರಾವ್ ಹೇಳಿದ್ದಾರೆ.

Written by - Zee Kannada News Desk | Last Updated : Mar 11, 2022, 04:34 PM IST
  • ಚುನಾವಣೆ ನಡೆದ ರಾಜ್ಯಗಳಲ್ಲಿ ಜನರ ನಾಡಿ ಮಿಡಿತ ನಾವು ಅರಿಯುವಲ್ಲಿ ನಮ್ಮ ಪಕ್ಷ ವಿಫಲವಾಗಿದೆ
  • ಉತ್ತರಾಖಂಡ ಹಾಗೂ ಮಣಿಪುರದಲ್ಲೂ ನಾವು ನಿರೀಕ್ಷಿಸಿದ ಫಲಿತಾಂಶ ಬಂದಿಲ್ಲ
  • ನನ್ನ ಉಸ್ತುವಾರಿಯಲ್ಲಿದ್ದ ಗೋವಾದಲ್ಲಿ ಪಕ್ಷದ ಸಾಧನೆ ಸ್ವಲ್ಪ ಮಟ್ಟಿಗೆ ಸಮಾಧಾನ ತಂದಿದೆ
Dinesh Gundu Rao : ಪಂಜಾಬ್ ಚುನಾವಣಾ ಫಲಿತಾಂಶ ಪಕ್ಷದ ಮಟ್ಟಿಗೆ ದೊಡ್ಡ ಆಘಾತ : ದಿನೇಶ್ ಗುಂಡು ರಾವ್ title=

ಬೆಂಗಳೂರು : ಪಂಚರಾಜ್ಯ ಚುನಾವಣಾ ಫಲಿತಾಂಶ ಕಾಂಗ್ರೆಸ್ ಪಕ್ಷದ ಮಟ್ಟಿಗೆ ಹಿನ್ನಡೆಯಾದರೂ ಅಂತಿಮವಾಗಿ ಜನಾದೇಶಕ್ಕೆ ಗೌರವ ಕೊಡಲೇಬೇಕು.‌ ಚುನಾವಣೆ ನಡೆದ ಐದೂ ರಾಜ್ಯಗಳಲ್ಲಿ ಪಕ್ಷದ ಪರ ಜನರ ಒಲವಿತ್ತು. ಆದರೆ ಆ ಒಲವು ಪಕ್ಷದ ಪರ ಮತಗಳಾಗಿ ಪರಿವರ್ತನೆಯಾಗಿಲ್ಲ. ಚುನಾವಣೆ ನಡೆದ ರಾಜ್ಯಗಳಲ್ಲಿ ಜನರ ನಾಡಿ ಮಿಡಿತ ನಾವು ಅರಿಯುವಲ್ಲಿ ನಮ್ಮ ಪಕ್ಷ ವಿಫಲವಾಗಿದೆ ಎಂದು ಮಾಜಿ ಕೆಪಿಸಿಸಿ ಮತ್ತು ಗೋವಾ ಕಾಂಗ್ರೆಸ್ ಉಸ್ತುವಾರಿ ಅಧ್ಯಕ್ಷ ದಿನೇಶ್ ಗುಂಡು ರಾವ್ ಹೇಳಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ದಿನೇಶ್ ಗುಂಡು ರಾವ್(Dinesh Gundu Rao), ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಮತದಾರನ ಆದ್ಯತೆ ಏನು? ಯಾವುದಕ್ಕೆ ಪ್ರಾಶಸ್ತ್ಯ? ಎಂದು ತೋರಿಸಿಕೊಟ್ಟಿದೆ. ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯ, ದುಬಾರಿ ಜೀವನ, ರೈತರ ಶೋಷಣೆ ಚುನಾವಣೆಯ ವಸ್ತು ವಿಷಯ ಎಂದು ಭಾವಿಸಲಾಗಿತ್ತು. ಆದರೆ ಜನರಿಗೆ ಈ ವಿಷಯಗಳಿಗಿಂತ ಕೋಮು ಸಂಗತಿಗಳೇ ಆದ್ಯತೆಯಾದಂತಿದೆ. ಈ ಫಲಿತಾಂಶ ಅಪಾಯಕಾರಿ ಬೆಳವಣಿಗೆಯ ಅಪಶಕುನವಿದ್ದಂತೆ.

ನನ್ನ ಉಸ್ತುವಾರಿಯಲ್ಲಿದ್ದ ಗೋವಾ(Goa Assembly Election Result 2022)ದಲ್ಲಿ ನಮ್ಮ ಪಕ್ಷ ಅಧಿಕಾರ ಹಿಡಿಯದ ನಿರಾಸೆಯಿದ್ದರೂ ಪಕ್ಷದ ಸಾಧನೆ ಸ್ವಲ್ಪ ಮಟ್ಟಿಗೆ ಸಮಾಧಾನ ತಂದಿದೆ. ಬಿಜೆಪಿಯ ಷಡ್ಯಂತ್ರ ಹಾಗೂ ಕುದುರೆ ವ್ಯಾಪಾರದಿಂದ ಶೂನ್ಯದಲ್ಲಿದ್ದ ಕಾಂಗ್ರೆಸ್ 11 ಸ್ಥಾನ ಗಳಿಸಿ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪಂಜಾಬ್ ಫಲಿತಾಂಶ ಪಕ್ಷದ ಮಟ್ಟಿಗೆ ದೊಡ್ಡ ಆಘಾತವಾಗಿದೆ.

ಉತ್ತರಾಖಂಡ ಹಾಗೂ ಮಣಿಪುರದಲ್ಲೂ ನಾವು ನಿರೀಕ್ಷಿಸಿದ ಫಲಿತಾಂಶ ಬಂದಿಲ್ಲ. ಆದರೆ ಈ ರಾಜ್ಯಗಳಲ್ಲಿ ಪಕ್ಷದ ಸಂಘಟನಾ ಕೊರತೆಯೇ ಈ ಫಲಿತಾಂಶಕ್ಕೆ ಕಾರಣ. ಬಿಜೆಪಿ ಸರ್ಕಾರ(BJP Govt)ದ ಆಡಳಿತ ವೈಫಲ್ಯವನ್ನು ನಾವು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವಲ್ಲಿ ಎಡವಿದ್ದೇವೆ. ಇದರ ಲಾಭ ಪಡೆದುಕೊಂಡಿರುವ ಬಿಜೆಪಿ ಈ ರಾಜ್ಯಗಳಲ್ಲಿ ಜನಾದೇಶ ಪಡೆದುಕೊಂಡಿದೆ.

ಪಂಚರಾಜ್ಯ ಚುನಾವಣಾ ಫಲಿತಾಂಶ(Five state Assembly Election Result 2022,)ವನ್ನು ನಾನು ಬಿಜೆಪಿಯ ಗೆಲುವು ಅಥವಾ ಕಾಂಗ್ರೆಸ್‌ನ ಸೋಲು ಎಂದು ವಿಶ್ಲೇಷಿಸಲು ಹೋಗುವುದಿಲ್ಲ‌. ಈ ಫಲಿತಾಂಶ ಈ ದೇಶದ ಭವಿಷ್ಯದ ಸೋಲು ಎಂದು ಮಾತ್ರ ಹೇಳಬಲ್ಲೆ. ಬಿಜೆಪಿ ಪ್ರತಿಪಾದಿಸುತ್ತಿರುವ  ಧರ್ಮಾಧಾರಿತ ಸಂಗತಿಗಳು ತಮ್ಮ ಹೊಟ್ಟೆ ತುಂಬಿಸುವುದಿಲ್ಲ ಎಂಬ ಸತ್ಯ ಮತದಾರನಿಗೆ ಅರಿವಾಗುವವರೆಗೂ ಈ ರೀತಿಯ ಫಲಿತಾಂಶ ನಿರೀಕ್ಷಿತ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News