ತುಮಕೂರು: ಕಾಂಗ್ರೇಸ್ ಮತ್ತು ಬಿಜೆಪಿ ಈಗಾಗಲೇ ಚುನಾವಣಾ ಪ್ರಚಾರ ಪ್ರಾರಂಭಿಸಿದ್ದು, ಜೆಡಿಎಸ್ ನ ಜಾತಾ ಇಂದಿನಿಂದ ಪ್ರಾರಂಭಗೊಳ್ಳಲಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಇಂದು ಬೆಳಿಗ್ಗೆ 11 ಗಂಟೆಗೆ ತುಮಕೂರಿನ ಸಿದ್ದಗಂಗಾ ಮಠದ ಸಮೀಪ ಮಾಜಿ ಶಾಸಕ ಗೌರಿಶಂಕರ ಅವರ ನೇತೃತ್ವದಲ್ಲಿ "ಮನೆ ಮನೆಗೆ ಕುಮಾರಣ್ಣ" ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಜೆಡಿಎಸ್ ನಲ್ಲಿ ಕುಮಾರಸ್ವಾಮಿ ಒಬ್ಬರೇ ಪ್ರಮುಖ ನಾಯಕರಾಗಿದ್ದು ಅವರ ಹೆಸರಿನಲ್ಲಿ ಈ ಪ್ರಚಾರವನ್ನು ನಡೆಸಲಾಗುತ್ತಿದೆ. ಪ್ರಚಾರದ ವೇಳೆ ಎಚ್.ಡಿ.ಡಿ ಮತ್ತು ಎಚ್.ಡಿ.ಕೆ ಇಬ್ಬರೂ ರಾಜ್ಯಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಬಿತ್ತಿ ಪತ್ರಗಳನ್ನು ಮಾಡಿ ಹಂಚಲಾಗುತ್ತಿದೆ. ಮುಂದಿನ ವರ್ಷ ನಡೆಯುವ ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.


ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರಿಗೆ ಕಳೆದ ವಾರವಷ್ಟೇ ಹೃದಯ ಶಸ್ತ್ರ ಚಿಕಿತ್ಸೆ ಆಗಿರುವುದರಿಂದ, ಅವರು ನವೆಂಬರ್ ಮೊದಲ ವಾರದಿಂದ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.