ರಾಯಚೂರು: ಕೇಂದ್ರ ಸರ್ಕಾರ ತಂದಿರುವ ರೈತ ವಿರೋಧಿ ಮೂರು ಕೃಷಿ ಕಾನೂನುಗಳನ್ನು (Agriculture Laws) ವಿರೋಧಿಸಿ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ಹೋರಾಟ ಪ್ರತಿಷ್ಠೆಯ ವಿಷಯ ಆಗಬಾರದು, ಮಾತುಕತೆ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು ಎಂದು ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡ (Former Prime Minister H.D. Devegowda) ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ರಾಯಚೂರಿನಲ್ಲಿ ಸುದ್ದಿಗೋಷ್ಠಿ‌ ಉದ್ದೇಶಿಸಿ ಮಾತನಾಡಿದ  ಎಚ್.ಡಿ. ದೇವೇಗೌಡರು (HD Devegowda) ರೈತರಿಗೆ ನೋವು ಹೇಳಿಕೊಳ್ಳುವ ಸ್ವಾತಂತ್ರ್ಯ ಇದೆ. ರೈತರು ದೆಹಲಿಯಲ್ಲಿ ಚಳಿಯನ್ನೂ ಲೆಕ್ಕಿಸದೆ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಕೇಂದ್ರ ಸರ್ಕಾರ ಅವಸರದಲ್ಲಿ ಕೃಷಿ ಬಿಲ್ ಗಳನ್ನು ಪಾಸ್ ಮಾಡಬಾರದಿತ್ತು. ಕೃಷಿ ಕಾನೂನುಗಳ (Agriculture Laws) ಬಗ್ಗೆ ಇನ್ನೂ ಎರಡ್ಮೂರು ತಿಂಗಳ ಕಾಲಾವಕಾಶ ತಗೊಳ್ಳಿ. ಚರ್ಚೆ ಮಾಡಿ ಅಂತಿಮ ನಿರ್ಧಾರ ಕೈಗೊಳ್ಳಿ ಎಂದರು.


ಗಣರಾಜ್ಯೋತ್ಸವ ದಿನದಂದು ನಡೆದ ಗಲಭೆಗೆ ಯಾರು ಕಾರಣ ಎಂಬುದು ತನಿಖೆ ನಡೆದಿದೆ. ಖಲಿಸ್ತಾನ, ವಿದೇಶಿ ಹಣ ಬಂದಿತ್ತು ಎನ್ನುವ ಊಹಾಪೋಹಕ್ಕೆ‌ ನಾನು ಉತ್ತರ ಕೊಡುವುದಿಲ್ಲ. ಗೃಹ ಸಚಿವಾಲಯ ಈ ಬಗ್ಗೆ ತನಿಖೆ ಮಾಡುತ್ತಿದ್ದು, ಅದರ ವರದಿ ಆಧರಿಸಿ ಮತ್ತೆ ಮಾತನಾಡುತ್ತೇನೆ  ಎಂದು ಹೇಳಿದರು.


ಇದನ್ನೂ ಓದಿ  - ರೈತರ ಪ್ರತಿಭಟನೆಗೆ ಹಾಲಿವುಡ್‌ ನಟಿ ಸುಸಾನ್ ಸರಂಡನ್ ಬೆಂಬಲ


ರಾಜ್ಯದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟದ ಕುರಿತು ಮಾತನಾಡಿದ ದೇವೇಗೌಡ, ಈ‌ ಬಗ್ಗೆ‌ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಉತ್ತಮ ಮಾಹಿತಿ ಇದೆ. ಅವರೇ ಮಾತನಾಡುತ್ತಾರೆ ಎಂದು ಜಾರಿಕೊಂಡರು.


ರಾಜ್ಯದ ಬೆಳಗಾವಿ ಲೋಕಸಭಾ, ಮಸ್ಕಿ, ಸಿಂಧಗಿ ಹಾಗೂ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದಿಲ್ಲ. ನಮ್ಮ ಬಳಿ ಚುನಾವಣೆಗೆ ಹಣ ಇಲ್ಲ. ಬೆಳಗಾವಿ ಲೋಕಸಭೆ, ಮಸ್ಕಿ, ಸಿಂಧಗಿ ಹಾಗೂ ಬಸವ ಕಲ್ಯಾಣದಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕುವುದಿಲ್ಲ ಎಂದು ಹೇಳಿದರು. 


2023 ರಲ್ಲಿ ರಾಜ್ಯದಲ್ಲಿ ಚುನಾವಣೆ ಎದುರಾಗಲಿದೆ. ಪಕ್ಷ ಕಟ್ಟುವುದಕ್ಕಾಗಿ ನಾನು ಸಂಪೂರ್ಣ ಭಾಗಿಯಾಗುತ್ತೇನೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಸರ್ಕಾರ ಬಿದ್ದುಹೋದ ಮೇಲೆ ನಾನ್ಯಾರಿಗೂ ನಿಂದನೆ ಮಾಡಿಲ್ಲ. ಪ್ರಾದೇಶಿಕ ಪಕ್ಷ ಕಟ್ಟುವುದಕ್ಕೆ ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.


ಇದನ್ನೂ ಓದಿ  - "ಒಂದು ವೇಳೆ ಕುವೆಂಪು ಬದುಕಿದ್ದರೆ ಈ ಸರ್ಕಾರ ಅವರನ್ನು ದೇಶದ್ರೋಹಿಗಳ ಸಾಲಿನಲ್ಲಿ ನಿಲ್ಲಿಸುತಿತ್ತು"


ಇದರ ಜೊತೆಗೆ ನಾಲ್ಕು ರಾಜ್ಯಗಳಲ್ಲಿನ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನೆಡೆಯಾಗಲಿದೆ. ತಮಿಳುನಾಡಿನಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಸಿಗಲ್ಲ ಎಂಬ ಭಾವನೆಯಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಧೈರ್ಯ ಮೆಚ್ಚುವಂತದ್ದು, ಮತಗಳು ಕಡಿಮೆ ಬಂದ್ರೂ ಈ ಬಾರಿ ಮಮತಾ ಮತ್ತೆ ಅಧಿಕಾರ ಪಡೆಯಬಹುದು. ಇಡೀ ಬಿಜೆಪಿ ಟೀಮ್ ಪಶ್ಚಿಮ ಬಂಗಾಳದಲ್ಲಿ ನೆಲೆಯೂರಿದೆ. ಸಚಿವರು, ಶಾಸಕರು ಪಕ್ಷ ಬಿಟ್ಟಿರೋದು ಸ್ವಲ್ಪ ಹಿನ್ನೆಡೆಯಾಗಬಹುದು. ಆದ್ರೆ ಮೂರನೇ ಬಾರಿಯೂ ಮಮತಾ ಬ್ಯಾನರ್ಜಿ ಸಿಎಂ ಆಗಲಿದ್ದಾರೆ ಅಂತ ಎಚ್.ಡಿ. ದೇವೇಗೌಡ ಭವಿಷ್ಯ ಹೇಳಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.