ನವದೆಹಲಿ: ಕರ್ನಾಟಕದ ಮಾಜಿ ಸಿಎಂ ಎಸ್ಎಂ ಕೃಷ್ಣ ಅವರು ಸಾರ್ವಜನಿಕ ವ್ಯವಹಾರಗಳ ಕ್ಷೇತ್ರದಲ್ಲಿ ನೀಡಿದ ಕೊಡುಗೆಗಾಗಿ ಬುಧವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದರು.
ಎಸ್ ಎಂ ಕೃಷ್ಣ ಅವರು ಕರ್ನಾಟಕದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಕೇಂದ್ರ ಸಚಿವರು, ರಾಜ್ಯಪಾಲರು ಮತ್ತು ವಿಧಾನಸಭೆಯ ಸ್ಪೀಕರ್ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಇತ್ತೀಚೆಗಷ್ಟೇ ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದರು.ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶ್ರೀ ಎಸ್ಎಂ ಕೃಷ್ಣಾ ಅವರಿಗೆ ಪದ್ಮವಿಭೂಷಣವನ್ನು ಪ್ರದಾನ ಮಾಡಿದರು.ಕೃಷ್ಣ ಅವರು ವಿದೇಶಾಂಗ ಸಚಿವರಾಗಿ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಯಾಗಿ ಅವರು ಆರು ದಶಕಗಳಿಗೂ ಹೆಚ್ಚು ಅವಧಿಯ ಸಾರ್ವಜನಿಕ ವೃತ್ತಿಜೀವನದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
President Droupadi Murmu presents Padma Vibhushan to Shri S.M. Krishna for Public Affairs. He is a former External Affairs Minister and former Chief Minister of Karnataka known for his statesman-like vision and administrative acumen during a career spanning more than six decades. pic.twitter.com/X73o7OLbQf
— President of India (@rashtrapatibhvn) March 22, 2023
#WATCH | Former Union Minister SM Krishna receives the Padma Vibhushan from President Droupadi Murmu. pic.twitter.com/WqA5b0YH1i
— ANI (@ANI) March 22, 2023
ಗಣರಾಜ್ಯೋತ್ಸವದಂದು ಪ್ರಕಟವಾದ ಪದ್ಮ ಪ್ರಶಸ್ತಿಗಳನ್ನು ಕರ್ನಾಟಕದ ಒಟ್ಟು ಏಳು ಮಂದಿ ಪಡೆದುಕೊಂಡಿದ್ದಾರೆ. ಸುಧಾ ಮೂರ್ತಿ ಮತ್ತು ಎಸ್ಎಂ ಕೃಷ್ಣ ಅವರಲ್ಲದೆ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಎಸ್ಎಲ್ ಭೈರಪ್ಪ, ವಿಜ್ಞಾನ ಮತ್ತು ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಖಾದರವಲಿ ದೂದೇಕುಲ, ಪುರಾತತ್ವ ಕ್ಷೇತ್ರದಲ್ಲಿ ಎಸ್ ಸುಬ್ಬರಾಮ್, ಜಾನಪದ ನೃತ್ಯಗಾರ್ತಿ ರಾಣಿ ಮಾಚಯ್ಯ, ಮಿನಿವೆಂಕಟಪ್ಪ ಮತ್ತು ಶಾ ಅಹಮದ್ ಕ್ವಾದ್ರಿ ಪಟ್ಟಿಯಲ್ಲಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.