ಬೆಂಗಳೂರು: ಕಳೆದ ನಾಲ್ಕು ದಿನದಿಂದ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಕೇಂದ್ರ ಸಚಿವ ವಿ. ಧನಂಜಯ್ ಕುಮಾರ್ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 


COMMERCIAL BREAK
SCROLL TO CONTINUE READING

ಪ್ರಸ್ತುತ ಕಾಂಗ್ರೆಸ್ ಪಕ್ಷದಲ್ಲಿರುವ ಅವರು ಕೇಂದ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ(1996) ಧನಂಜಯ್ ಕುಮಾರ್ ಅವರು ನಾಗರಿಕ ವಿಮಾನಯಾನ ಸಚಿವರಾಗಿದ್ದರು. ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಅವರು ಯಡಿಯೂರಪ್ಪ ಕೆಜೆಪಿ ಪಕ್ಷ ಕಟ್ಟಿದಾಗ ಬಿಜೆಪಿ ಬಿಟ್ಟು ಕೆಜೆಪಿ ಸೇರಿದ್ದರು. ಯಡಿಯೂರಪ್ಪ ಮತ್ತೆ  ಬಿಜೆಪಿಗೆ ಹಿಂದಿರುಗಿದ ನಂತರ, ಕೆಲವು ವೈಮನಸ್ಯದಿಂದಾಗಿ ಅವರು ಕಾಂಗ್ರೆಸ್ ಸೇರಿದ್ದಾರೆ.